ಜೀವನಕ್ಕೆ ವಚನಗಳು ಶ್ರೇಷ್ಠ : ಜತ್ತಿ


Team Udayavani, Jul 10, 2018, 11:37 AM IST

gul-2.jpg

ಬೀದರ: ವಚನಗಳೇ ನಮಗೆ ನಿಜವಾದ ಅನುಭವ ನೀಡಬಲ್ಲವು. ವಚನಗಳನ್ನು ಬದುಕಿನ ಉಸಿರಾಗಿಸಿಕೊಂಡಲ್ಲಿ ಶ್ರೇಷ್ಠ ಜೀವನ ನಡೆಸಲು ಸಾಧ್ಯ ಎಂದು ಬೆಂಗಳೂರು ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಹೇಳಿದರು.

ನಗರದ ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಶ್ರೀಶೈಲ ಅಕ್ಕಮಹಾದೇವಿ ಚೈತನ್ಯ ಕೇಂದ್ರದಿಂದ 2017-18ನೇ ಸಾಲಿನ ಅಕ್ಕಮಹಾದೇವಿ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ಕಾವ್ಯ, ಗದ್ಯ ಗ್ರಂಥಗಳು, ಅಭಿನವ ಗ್ರಂಥಗಳು, ಆತ್ಮಚರಿತ್ರೆ ಇತ್ಯಾದಿ ಲೋಕಾನುಭವದಲ್ಲಿ ಕಾಣಬಹುದಾದರೆ, ಮಹಾಭಾರತ, ರಾಮಾಯಣ, ಭಗವದ್ಗೀತೆ, ಪುರಾಣಗಳು, ಅಧ್ಯಾತ್ಮಿಕ ಗ್ರಂಥಗಳನ್ನು ಶಿವಾನುಭವದಲ್ಲಿ ಗುರುತಿಸಬಹುದು. ಇವೆರಡನ್ನು ಜೋಡಿಸಿ ಸಂಗಮ ಅನುಭಾವ ಸಾಹಿತ್ಯವನ್ನು ಬೆಳಕಿಗೆ ತರುವಲ್ಲಿ ಮಾತೆ ಕರುಣಾದೇವಿ ತಾಯಿಯವರ ಪರಿಶ್ರಮ ಅಗಾಧವಾಗಿದೆ ಎಂದರು.

ಮನುಷ್ಯ ತನ್ನ ನಿಜ ಜೀವನದಲ್ಲಿ ನಾನೆಂಬುದನ್ನು ಮರೆತು ನೀನೆಂಬುದನ್ನು ಅರಿಯಬೇಕು. ನಮ್ಮಲ್ಲಿ ಹುದುಗಿರುವ ಆತ್ಮಸಾಕ್ಷಿ ಪ್ರಜ್ಞೆಯನ್ನು ಜಾಗೃತಗೊಳಿಸಿ ಜೀವನದ ಪ್ರಮುಖ ಸಮಸ್ಯೆಗಳಿಗೆ ಇತಿಶ್ರೀ ಹೇಳಬೇಕು. ನಮ್ಮ ಸಂಸ್ಕಾರದ ಕುರುಹು ಲಿಂಗಸಾಕ್ಷಿಯು ನಮ್ಮನ್ನು ಮಹಾತ್ಮರ ಸ್ಥಾನದಲ್ಲಿ ನಿಲ್ಲಿಸಿ, ಸತ್ಯವನ್ನೇ ಹೇಳುವಂತೆ ಮಾಡುತ್ತದೆ. ಪ್ರತಿಯೊಬ್ಬರು ಜೀವನ ಸುಂದರವಾಗಿಸಿಕೊಳ್ಳಲು ಮಹಾತ್ಮರ ಹಾಗೂ ಗುರುವರ್ಯರ ಸಂಗ ಬೆಳೆಸಿಕೊಳ್ಳಬೇಕು ಎಂದರು.

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಸುಷ್ಮಾ ಸಾಹೂ “ಅಕ್ಕ ಮಹಾದೇವಿ ರಾಷ್ಟ್ರೀಯ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿ, ಪ್ರಶಸ್ತಿ ಹಾಗೂ ಸನ್ಮಾನಗಳು ನಮ್ಮ ಕರ್ತವ್ಯಗಳನ್ನು ಹೆಚ್ಚಿಸುತ್ತವೆ. 

ಉತ್ತಮ ನಡುವಳಿಕೆಯಿಂದ ಬದುಕಲು ಕಲಿಸುತ್ತವೆ. ಸಮಾಜದಲ್ಲಿ ಗೌರವ ಸನ್ಮಾನಗಳಿಗೆ ಭಾಜನರಾಗಲು ಕಾರಣವಾಗುತ್ತವೆ. ಪರಸ್ಪರ ಪ್ರೀತಿ, ವಿಶ್ವಾಸ, ಮಾನವೀಯತೆ, ಸಾಮಾಜಿಕ ಪ್ರಜ್ಞೆ, ಜೊತೆಗೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬದುಕಲು ದಾರಿ ಮಾಡಿಕೊಡುತ್ತವೆ ಎಂದರು. ಮಹಿಳೆ ಇಂದು ಸ್ವತಂತ್ರಳಾಗಿ ತನ್ನಿಷ್ಟದ ವಸ್ತ್ರಗಳನ್ನು ಧರಿಸಲು ಅಸಾಧ್ಯವಾದ ವಾತಾವರಣ ಸೃಷ್ಟಿಯಾಗಿದೆ.

ಏಕಾಂಗಿಯಾಗಿ ಬದುಕಲು ಮುಂದಾದರೆ ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾಳೆ. ಆಕೆಯ ರಕ್ಷಣೆಗೆ ಧಾವಿಸಬೇಕಿದ್ದ ಸಮಾಜ ಇಂದು ನಿಂದನೆಗೆ ಮುಂದಾಗುತ್ತಿರುವುದು ವಿಪರ್ಯಾಸ. ಆದ್ದರಿಂದ ಪ್ರತಿ ಹೆಣ್ಣು ತನ್ನಲ್ಲಿನ ಅಷ್ಟ ಶಕ್ತಿಗಳನ್ನು ಜಾಗೃತಗೊಳಿಸಿ ವಿರಾಗಿನಿಯಾಗಿ ಎದ್ದು ನಿಲ್ಲಬೇಕಿದೆ ಎಂದರು.

ಸಮಾರಂಭ ಉದ್ಘಾಟಿಸಿದ ಖ್ಯಾತ ಸಾಹಿತಿ, ಧಾರವಾಡದ ಡಾ| ಗುರುಲಿಂಗ ಕಾಪಸೆ ಮಾತನಾಡಿ, ನಮ್ಮಲ್ಲಿ ಅಧ್ಯಾತ್ಮಿಕ ಕೌಶಲ್ಯ ಜಾಗೃತವಾಗಿದ್ದರೆ ಆತ್ಮದ ಮೂಲಕ ಮಾತನಾಡುವ ಶಕ್ತಿ ಬರುತ್ತದೆ. ಆತ್ಮವನ್ನು ಲಿಂಗದೊಂದಿಗೆ ಬೆರೆಸಿ ಅನುಭಾವಿಯಾಗಿ ಹೊರಹೊಮ್ಮಬಹುದಾಗಿದೆ. ಇದು ನಮ್ಮಲ್ಲಿ
ಸಕಾರಾತ್ಮಕ ದೃಷ್ಟಿಕೋನ, ಧನಾತ್ಮಕ ಚಿಂತನೆ, ನೈತಿಕ ಹಾಗೂ ಭಾವನಾತ್ಮಕ ಬೆಳವಣಿಗೆಗೆ ಇಂಬು ನೀಡುತ್ತದೆ ಎಂದರು.

ಲೇಖಕಿ ಹಾಗೂ ಶಹಾಪುರದ ನಿವೃತ್ತ ಪ್ರಾಚಾರ್ಯೆ ನೀಲಮ್ಮ ಕತ್ನಳ್ಳಿ, ಚೈತನ್ಯ ಕೇಂದ್ರದ ಸಂಚಾಲಕ ಡಾ| ರಾಜಶೇಖರ ಸ್ವಾಮೀಜಿ, ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಪರಿವೀಕ್ಷಣಾ ಸಮಿತಿ ಸಂಚಾಲಕ ಡಾ| ಎಸ್‌.ಕೆ. ಮಿತ್ತಲ್‌, ಪಂಚಗಾಂವ ಆಶ್ರಮದ ಮಾತೆ ಶಶಿಕಲಾ ತಾಯಿ, ಕಲಬುರಗಿಯ ವಿಲಾಸಮತಿ ಖೂಬಾ, ಜಿಪಂ ಸದಸ್ಯೆ ಮಂಜುಳಾ ಶಿವಕುಮಾರ ಸ್ವಾಮಿ, ಅಕ್ಕಮಹಾದೇವಿ ಚೈತನ್ಯ ಕೇಂದ್ರದ ಉಪಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಧನ್ನುರ್‌, ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷ ಕಾಶೆಪ್ಪ ಧನ್ನುರ್‌, ಹೈದ್ರಾಬಾದ್‌ ಅಖೀಲ ಭಾರತೀಯ ವೀರಶೈವ ಮಹಾಸಭೆ ಅಧ್ಯಕ್ಷ ನೇತಿ ಮಹೇಶ್ವರ, ಹೈದ್ರಾಬಾದ್‌ ಅಕ್ಕ ಮಹಾದೇವಿ ಸಮಿತಿ ಅಧ್ಯಕ್ಷೆ ದಾಕ್ಷಾಯಣಿ ದೇವಿ, ರಾಷ್ಟ್ರೀಯ ಬುಡಕಟ್ಟು ಹಾಗೂ ಕಲಾ ಪರಿಷತ್‌ ಕಾರ್ಯದರ್ಶಿ ರಾಜಕುಮಾರ ಹೆಬ್ಟಾಳೆ, ಶಿವಯ್ಯ ಸ್ವಾಮಿ, ಶಿವಕುಮಾರ ಸ್ವಾಮಿ ಬಂಬುಳಗಿ, ಡಾ| ಸೋಮನಾಥ ಪಾಟೀಲ, ಡಾ| ಸಿದ್ರಾಮಯ್ಯ ಸ್ವಾಮಿ ಗೋರಟಾ, ಕಾರ್ತಿಕ ಸ್ವಾಮಿ, ಮೀರಾ ಖೇಣಿ, ಮಲ್ಲಮ್ಮ ಸಂತಾಜಿ ಇದ್ದರು.

ಟಾಪ್ ನ್ಯೂಸ್

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.