ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಪ್ರೇರಣಾ ಜಾರಿ: ಕುಮಾರ
Team Udayavani, Jul 10, 2018, 4:49 PM IST
ಧಾರವಾಡ: ವಿದ್ಯಾರ್ಥಿಗಳ ನಿರಂತರ ಹಾಜರಾತಿ ಮತ್ತು ಸಕ್ರಿಯ ಭಾಗವಹಿಸುವಿಕೆಗಾಗಿ ಶಿಕ್ಷಣ ಫೌಂಡೇಶನ್ ಮತ್ತು ಸಮಗ್ರ ಶಿಕ್ಷಣ ಅಭಿಯಾನ ಸಹಭಾಗಿತ್ವದ ಪ್ರೇರಣಾ ಯೋಜನೆಯನ್ನು ಪ್ರಸಕ್ತ ಸಾಲಿನಿಂದ ರಾಜ್ಯದ ಎಲ್ಲ ಶೈಕ್ಷಣಿಕ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಧಾರವಾಡ ಅಪರ ಆಯುಕ್ತರ ಕಚೇರಿ ನಿರ್ದೇಶಕ ಎನ್.ಎಸ್. ಕುಮಾರ ಹೇಳಿದರು.
ಇಲ್ಲಿಯ ಶಹರ ಕ್ಷೇತ್ರಶಿಕ್ಷಣಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಪ್ರೇರಣಾ ಕಾರ್ಯಕ್ರಮದ ಜಿಲ್ಲಾ ಹಂತದ ಅನುಷ್ಠಾನ ಮತ್ತು ಮೇಲ್ವಿಚಾರಣೆ ಸಮಿತಿ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು. ಈ ಮೊದಲು ಪ್ರಾಯೋಗಿಕವಾಗಿ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗಿದ್ದ ಪ್ರೇರಣಾ ಯೋಜನೆಯನ್ನು ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಾರಂಭದಿಂದ ರಾಜ್ಯದ ಎಲ್ಲ ಶೈಕ್ಷಣಿಕ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗಿದೆ ಎಂದರು.
ಪ್ರೇರಣಾ ಕಾರ್ಯಕ್ರಮವು ಶಿಕ್ಷಣ ಇಲಾಖೆ ಯೋಜನೆಯಾಗಿದೆ. ಜಿಲ್ಲೆಯ ಎಲ್ಲ ಸರಕಾರಿ 4ರಿಂದ 9ನೇ ತರಗತಿಯ ಶಾಲೆಗಳ ಮುಖ್ಯ ಶಿಕ್ಷಕರಿಗೆ ಮತ್ತು ಸಹ ಶಿಕ್ಷಕರಿಗೆ ಕಾರ್ಯಕ್ರಮದ ಗುರಿ-ಉದ್ದೇಶ ಮತ್ತು ಮಹತ್ವವನ್ನು ಮನದಟ್ಟು ಮಾಡುವುದು ಅಗತ್ಯವಾಗಿದೆ. ಈ ಕಾರ್ಯಕ್ರಮದ ಮೂಲಕ ರಾಜ್ಯದ ಸುಮಾರು 48 ಸಾವಿರ ಸರಕಾರಿ ಶಾಲೆಗಳು ಹಾಗೂ 27ಲಕ್ಷಕ್ಕಿಂತ ಹೆಚ್ಚು ವಿದ್ಯಾರ್ಥಿಗಳನ್ನು ಇಲಾಖೆ ಶಿಕ್ಷಣ ಕಾರ್ಯಕ್ರಮಗಳು ತಲುಪಲಿವೆ ಎಂದು ಹೇಳಿದರು.
ಇಲಾಖೆಯ ಸಿಸ್ಲಿಪ್‌ನ ನಿರ್ದೇಶಕ ರಘುವೀರ, ಉಪನಿರ್ದೆಶಕ ಎನ್.ಎಚ್. ನಾಗೂರ, ಜಿಲ್ಲೆಯ ಎಲ್ಲ ಕ್ಷೇತ್ರಶಿಕ್ಷಣಾಧಿಕಾರಿಗಳು, ಸಮನ್ವಯಾಧಿ ಕಾರಿಗಳು, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು, ಶಿಕ್ಷಣ ಫೌಂಡೇಶನ್ ನಿರ್ದೆಶಕ ಶಂಭುಲಿಂಗ, ನಾರಾಯಣ ಕಿರ್ಲೋಸ್ಕರ ಪಾಲ್ಗೊಂಡಿದ್ದರು. ಪ್ರಮೋದ ಮಹಾಲೆ ಪ್ರಾಸ್ತಾವಿಕ ಮಾತನಾಡಿದರು. ಕೆ.ಎಂ. ಶೇಖ್ ನಿರೂಪಿಸಿದರು. ಶಹರ ಕ್ಷೇತ್ರಶಿಕ್ಷಣಾಧಿಕಾರಿ ಎ.ಎ. ಖಾಜಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.