ಮುತ್ಸದ್ದಿ ಬಿ.ಎ.ಮೊಹಿಯುದ್ದೀನ್‌ ಇನ್ನಿಲ್ಲ


Team Udayavani, Jul 11, 2018, 6:00 AM IST

c-31.jpg

 ಬೆಂಗಳೂರು: ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಬಿ.ಎ. ಮೊಹಿಯುದ್ದೀನ್‌(80)ಮಂಗಳವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲವು ದಿನದಿಂದ ನಗರದಲ್ಲಿರುವ ಪುತ್ರನ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಅವರು, ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಎಂ.ಎಸ್‌.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫ‌ಲಕಾರಿಯಾಗದೆ ಮಂಗಳವಾರ ಬೆಳಗ್ಗೆ ಕೊನೆಯುಸಿರೆಳೆದರು. 

ಮೊಹಿಯುದ್ದೀನ್‌ ಅವರ ಪಾರ್ಥಿವ ಶರೀರವನ್ನು ಬೆಳಗ್ಗೆ 9.30ರ ಸುಮಾರಿಗೆ ಆಸ್ಪತ್ರೆಯಿಂದ ಸಂಜಯನಗರದಲ್ಲಿರುವ ಅವರ ಮಗನ ಮನೆಗೆ ತರಲಾಯಿತು. ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಪರಮೇಶ್ವರ್‌, ಮಾಜಿ ಸಿಎಂ ಸಿದ್ದರಾಮಯ್ಯ, ವಿಧಾನಸಭಾ ಧ್ಯಕ್ಷ ರಮೇಶ್‌ ಕುಮಾರ್‌, ಸಚಿವರಾದ ಯು.ಟಿ.ಖಾದರ್‌, ಜಮೀರ್‌ ಅಹ್ಮದ್‌, ಮಾಜಿ ಸಚಿವ ತನ್ವೀರ್‌ ಸೇಠ್, ಜಯಪ್ರಕಾಶ್‌ ಹೆಗ್ಡೆ, ವಿಧಾನ ಪರಿಷತ್‌ ಸದಸ್ಯ ಎಂ.ಎ. ಫ‌ರೂಕ್‌ ಇತರರು ಅಂತಿಮ ದರ್ಶನ ಪಡೆದರು.

ಮೊಹಿಯುದ್ದೀನ್‌ ಹಾಗೂ ಸ್ಪೀಕರ್‌ ರಮೇಶ್‌ ಕುಮಾರ್‌ ಒಂದೇ ವರ್ಷ ವಿಧಾನ ಸಭೆ ಪ್ರವೇಶ ಮಾಡಿದವರು. ಹೀಗಾಗಿ ಇಬ್ಬರ ನಡುವೆಯೂ ಆತ್ಮೀಯವಾದ ಸ್ನೇಹ, ಬಾಂಧವ್ಯ ಬೆಳೆದಿತ್ತು. ನಿಧನ ಸುದ್ದಿ ತಿಳಿಯುತ್ತಿದ್ದಂತೆ ನೇರವಾಗಿ ಸಂಜಯನಗರಕ್ಕೆ ಆಗಮಿಸಿದ ರಮೇಶ್‌ ಕುಮಾರ್‌, ಮೃತದೇಹವನ್ನು ನೋಡಿ ಗಳಗಳನೆ ಕಣ್ಣೀರಿಟ್ಟರು. ನಂತರ ಸಚಿವ ಯು.ಟಿ.ಖಾದರ್‌ ಅವರನ್ನು ಸಮಾಧಾನ ಪಡಿಸಿದರು. ರಾಜಕೀಯ ಪಕ್ಷದ ಮುಖಂಡರು ಸೇರಿ ಸಾರ್ವಜನಿಕರು ಅಂತಿಮ ದರ್ಶನ ಪಡೆದರು. 11.30ರ ಸುಮಾರಿಗೆ ಆ್ಯಂಬುಲೆನ್ಸ್‌ ಮೂಲಕ ಶಿರಾಡಿ ಘಾಟಿ ಮಾರ್ಗವಾಗಿ ಬಜ್ಪೆಗೆ ಮೃತದೇಹ ರವಾನೆ ಮಾಡಲಾಯಿತು.

1987ರಲ್ಲಿ ಬಂಟ್ವಾಳ ಕ್ಷೇತ್ರದಿಂದ 6ನೇ ವಿಧಾನಸಭೆಗೆ ಚುನಾಯಿತರಾಗಿ ಶಾಸಕರಾಗಿ ಮೊಹಿಯುದ್ದೀನ್‌ ಸೇವೆ ಸಲ್ಲಿಸಿದ್ದರು. 1990ರಿಂದ 2002ರ ಅವಧಿಯಲ್ಲಿ ಎರಡು ಬಾರಿ ವಿಧಾನ ಪರಿಷತ್ತಿನ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. 1995ರಿಂದ 1996ರವರೆಗೆ ವಿಧಾನ ಪರಿಷತ್‌ ಸರ್ಕಾರಿ  ಮುಖ್ಯ ಸಚೇತಕರಾಗಿ ಹಾಗೂ 1996ರಲ್ಲಿ ಸಣ್ಣ ಕೈಗಾರಿಕೆ ಮತ್ತು 1999ರಲ್ಲಿ ಉನ್ನತ ಶಿಕ್ಷಣ ಸಚಿವರಾಗಿ ದಕ್ಷತೆಯಿಂದ ಸೇವೆ ಸಲ್ಲಿಸಿದ್ದರು. ಕಾರವಾರ ತಾಲೂಕಿನ ಕೊಲಂಬೆಯ ಗ್ರಾಮದಲ್ಲಿ 1938ರಂದು ಜನಿಸಿದ ಅವರು ಬಿ.ಎಸ್ಸಿ ಪದವೀಧರರು.

ಮಂಗಳೂರಿನ ಬಜ್ಪೆ ಸಮೀಪ ವಾಸವಾಗಿದ್ದ ಮೊಹಿಯುದ್ದೀನ್‌ ರಾಜಕೀಯದ ಜತೆಗೆ ಕೃಷಿಯಲ್ಲೂ ತೊಡಗಿಸಿಕೊಂಡಿದ್ದರು. ಅಂತ್ಯಕ್ರಿಯೆ: ಬಿ.ಎ. ಮೊಹಿಯು ದ್ದೀನ್‌ ಅವರ ಅಂತ್ಯಕ್ರಿಯೆ ಬಜ್ಪೆಯ ಈದ್ಗಾ ಮಸೀದಿಯ ದಫ‌ನ ಭೂಮಿಯಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಮಂಗಳವಾರ ನಡೆಯಿತು.

ದೇವರಾಜ ಅರಸು ಒಡನಾಡಿಯಾಗಿದ್ದ ಮೊಹಿಯುದ್ದೀನ್‌ ಉನ್ನತ ಶಿಕ್ಷಣ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದರು. 2016ರಲ್ಲಿ ರಾಜ್ಯ ಸರ್ಕಾರದ ದೇವರಾಜ ಅರಸು ಪ್ರಶಸ್ತಿಗೆ ಭಾಜನರಾಗಿದ್ದರು. ಅವರ ನಿಧನದಿಂದ ನಾಡು ಹಿರಿಯ ಮುತ್ಸದ್ದಿಯೊಬ್ಬರನ್ನು ಕಳೆದುಕೊಂಡಂತಾಗಿದೆ.
● ಎಚ್‌.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

ಉಜಿರೆ ಸಮೀಪದ ಶಾಂತಿವನದಲ್ಲಿ ನಾನು ನಿಸರ್ಗ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಮೊಹಿಯುದ್ದೀನ್‌ ಭೇಟಿಯಾಗಿದ್ದರು. ಅವರು ಬರೆದ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿದ್ದರು. ಬ್ಯಾರಿ ಭವನ ನಿರ್ಮಾಣ ಅವರ ಕನಸಾಗಿತ್ತು. ಅದರ ಉದ್ಘಾಟನೆಗೆ ಬರುತ್ತೇನೆಂದು ಭರವಸೆ ನೀಡಿದ್ದೆ.
● ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

ರಾಜ್ಯ ಉತ್ತಮ ನಾಯಕನನ್ನು ಕಳೆದುಕೊಂಡಿದೆ. ಅವರ ನಿಧನದಿಂದ ವೈಯಕ್ತಿಕವಾಗಿ ಬಹಳ ನೋವಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ.
● ಎಚ್‌.ಡಿ.ದೇವೇಗೌಡ, ಮಾಜಿ ಪ್ರಧಾನಿ

ನನ್ನ ಹಿರಿಯ ಮಿತ್ರ, ದೇವರಾಜ ಅರಸು ಅವರ ಒಡನಾಡಿಯಾಗಿದ್ದ ಮೊಹಿಯುದ್ದೀನ್‌ ಅವರು ಮಾಜಿ ಸಿಎಂ ಜೆ.ಎಚ್‌.ಪಟೇಲ್‌ ಅವರ
ಸರ್ಕಾರದಲ್ಲಿ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದರು.

● ಜಿ.ಟಿ.ದೇವೇಗೌಡ, ಉನ್ನತ ಶಿಕ್ಷಣ ಸಚಿವ

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

KEA: ಎಂಎಸ್ಸಿ ನರ್ಸಿಂಗ್‌: ಅರ್ಜಿ ಸಲ್ಲಿಕೆಗೆ ಡಿ. 2 ಕೊನೆ ದಿನ

KEA: ಎಂಎಸ್ಸಿ ನರ್ಸಿಂಗ್‌: ಅರ್ಜಿ ಸಲ್ಲಿಕೆಗೆ ಡಿ. 2 ಕೊನೆ ದಿನ

Karnataka: ಪಠ್ಯಪುಸ್ತಕಕ್ಕೆ ಬೇಡಿಕೆ ಸಲ್ಲಿಸಲು ಡಿ. 9 ಕಡೇ ದಿನ

Karnataka: ಪಠ್ಯಪುಸ್ತಕಕ್ಕೆ ಬೇಡಿಕೆ ಸಲ್ಲಿಸಲು ಡಿ. 9 ಕಡೇ ದಿನ

ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ

ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.