ಅನ್ಯರ ಪಿತೂರಿಗೆ ಸಿಲುಕದಿರಿ:ಲಿಂಗಾಯತರಿಗೆ ಬಿಎಸ್‌ವೈ ಕರೆ
Team Udayavani, Jul 12, 2018, 12:51 PM IST
ಬೆಂಗಳೂರು: ಅನ್ಯರ ಪಿತೂರಿಗೆ ವೀರಶೈವ ಲಿಂಗಾಯತ ಸಮುದಾಯ ಸಿಲುಕಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ತಿಳಿಸಿದರು.
ಅಖೀಲ ಭಾರತ ವೀರಶೈವ ಮಹಾಸಭಾದಿಂದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾದ ವೀರಶೈವ -ಲಿಂಗಾಯತ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರಿಗೆ ಹಮ್ಮಿಕೊಳ್ಳಲಾದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಅನ್ಯ ರೀತಿಯ ಗೊಂದಲ ಉಂಟು ಮಾಡಿ ಪಿತೂರಿ ನಡೆಸಿ ನಮ್ಮ ನಮ್ಮ ನಡುವೆಯೇ ಒಡಕು ಮೂಡಿಸಿದ ಪರಿಣಾಮ ಸಮುದಾಯದ ಕೇವಲ 58 ಶಾಸಕರು ಆಯ್ಕೆ ಆಗಿದ್ದೇವೆ. ಒಂದು ವೇಳೆ ನಮ್ಮಲ್ಲಿ ಒಗ್ಗಟ್ಟು ಇದಿದ್ದರೇ ಇವತ್ತು 78 ಶಾಸಕರು ಇರುತ್ತಿದ್ದೇವೆ ಎಂದು ತಿಳಿಸಿದರು.
ಪ್ರತ್ಯೇಕ ಧರ್ಮದ ವಿಚಾರ ಪ್ರಸ್ತಾಪದ ಕ್ಷಣದಿಂದ ಶಿವಕುಮಾರ ಸ್ವಾಮೀಜಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿರ್ಧಾರಕ್ಕೆ ನಾವು ಬದ್ಧರಾಗಿ ಇದ್ದಿದ್ದರಿಂದ ಇಷ್ಟೊಂದು ಒಗ್ಗಟ್ಟು ಉಳಿದುಕೊಂಡಿದೆ. ಹಿಂದೆ ನಡೆದ ತಪ್ಪುಗಳನ್ನು ತಿದ್ದಿಕೊಂಡು ವೀರಶೈವ- ಲಿಂಗಾಯಿತರು ಒಂದೇ ಎಂದುಕೊಂಡು ನಮ್ಮ ಶಕ್ತಿ ಹೆಚ್ಚಿಸಿಕೊಳ್ಳೋಣ ಎಂದರು.
ಶಾಸಕಿ ಲಕ್ಷ್ಮಿ ಹೆಬ್ಟಾಳ್ಕರ್ ಮಾತನಾಡಿದರು. ಇದೇ ವೇಳೆ ವೀರಶೈವ ಲಿಂಗಾಯತ ಸಮುದಾಯದಿಂದ ಆಯ್ಕೆಯಾದ ಸಚಿವರು ಹಾಗೂ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು. ಅಖೀಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ, ನಿಕಟಪೂರ್ವ ಅಧ್ಯಕ್ಷ ಡಾ. ಭೀಮಣ್ಣ ಖಂಡ್ರೆ, ರಾಜ್ಯ ಘಟಕ ಅಧ್ಯಕ್ಷ ಎನ್. ತಿಪ್ಪಣ್ಣ, ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ,ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.