ಮೈತ್ರಿ ಸರ್ಕಾರ ಬಂದರೂ ಕ್ಯಾಂಟೀನ್ ತೆರೆದಿಲ್ಲ
Team Udayavani, Jul 12, 2018, 3:11 PM IST
ಚಿಕ್ಕಬಳ್ಳಾಪುರ: ನಗರ ಪ್ರದೇಶಕ್ಕೆ ಉದ್ಯೋಗ ಆರಿಸಿ ಬರುವ ರೈತಾಪಿ ಕೂಲಿ ಕಾರ್ಮಿಕರಿಗೆ ಮೂರು ಹೊತ್ತು
ಹೊಟ್ಟೆ ತುಂಬಿಸುವ ನಿಟ್ಟಿನಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಅನುಷ್ಠಾನಗೊಂಡಿದ್ದ ಮಹತ್ವಾಕಾಂಕ್ಷಿ
ಇಂದಿರಾ ಕ್ಯಾಂಟೀನ್ ಯೋಜನೆ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಾಗು ಚುನಾಯಿತ ಜನಪ್ರತಿನಿಧಿಗಳ ಉದಾಸೀನತೆಗೆ
ಒಳಗಾಗಿರುವುದು ಎದ್ದು ಕಾಣುತ್ತಿದೆ.
ಪ್ರತಿ ದಿನ ಬೆಳಗ್ಗೆ 5 ರೂ.ಗೆ ತಿಂಡಿ, ಮಧ್ಯಾಹ್ನ, ರಾತ್ರಿ ಸಮಯದಲ್ಲಿ ಬರೋಬ್ಬರಿ 10 ರೂ.ಗೆ ಊಟ ಸವಿಯುವ ಭಾಗ್ಯ ಕಲ್ಪಿಸುವ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಮೊದಲಿಗೆ ಬೆಂಗಳೂರಿಗೆ ಸಿಮೀತಗೊಳಿಸಿತ್ತು. ಇಂದಿರಾ ಕ್ಯಾಂಟೀನ್ ಯೋಜನೆ ಕಾಂಗ್ರೆಸ್ ಸರ್ಕಾರಕ್ಕೆ ಅಲ್ಪಾವಧಿಯಲ್ಲಿ ಹೆಚ್ಚು ಜನಪ್ರಿಯತೆ ತಂದುಕೊಟ್ಟ ಕಾರಣ
ರಾಜ್ಯಾದ್ಯಂತ ನಗರ, ಪಟ್ಟಣಗಳಿಗೆ ವಿಸ್ತರಿಸಿತ್ತು. ಆದರೆ, ಜಿಲ್ಲಾಡಳಿತ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ನೆಪವೊಡ್ಡಿ ಕ್ಯಾಂಟೀನ್ ನಿರ್ಮಾಣಕ್ಕೆ ಮೇ ತಿಂಗಳಲ್ಲಿ ತಡೆಯೊಡ್ಡಿತ್ತು. ಚುನಾವಣೆ ನೀತಿ ಸಂಹಿತೆ ತೆರವಾಗಿ ಎರಡು ತಿಂಗಳಾಗುತ್ತಾ ಬಂದರೂ ಇಂದಿರಾ ಕ್ಯಾಂಟೀನ್ ಮಾತ್ರ ಜಿಲ್ಲೆಯ ಪಾಲಿಗೆ ಕಸನಸಾಗಿಯೇ ಉಳಿದಿದೆ. ಹಿಂದಿನ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿ ಮುಗಿದು ಜೆಡಿಎಸ್-ಕಾಂಗ್ರೆಸ್
ಸಮ್ಮಿಶ್ರ ಸರ್ಕಾರ ಬಂದರೂ ಇಂದಿಗೂ ಇಂದಿರಾ ಕ್ಯಾಂಟೀನ್ ಆರಂಭಗೊಂಡಿಲ್ಲ.
ಚಿಕ್ಕಬಳ್ಳಾಪುರ ಬಿಟ್ಟರೆ ಎಲ್ಲೂ ಕಾಮಗಾರಿ ನಡೆದಿಲ್ಲ: ಜಿಲ್ಲೆಯ ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಚಿಂತಾಮಣಿ,
ಗೌರಿಬಿದನೂರು, ಶಿಡ್ಲಘಟ್ಟ ಹಾಗೂ ಗುಡಿಬಂಡೆ ಪಟ್ಟಣ ಪ್ರದೇಶದಲ್ಲಿ ಇಂದಿರಾ ಕ್ಯಾಂಟೀರ್ ಆರಂಭಿಸುವ ನಿಟ್ಟಿನಲ್ಲಿ
ಜಿಲ್ಲಾ ನಗರಾಭಿವೃದ್ಧಿ ಕೋಶ ಈ ಹಿಂದೆಯೆ ಸ್ಥಳೀಯ ಸಂಸ್ಥೆಗಳಿಗೆ ಪತ್ರ ಬರೆದು ಕ್ಯಾಂಟೀನ್ ಕಾಮಗಾರಿ
ಕೈಗೊಳ್ಳುವಂತೆ ಸೂಚಿಸಿತ್ತು. ಆದರೆ, ಇದುವರೆಗೂ ಚಿಕ್ಕಬಳ್ಳಾಪುರ ಹೊರತುಪಡಿಸಿ ಎಲ್ಲೂ ಕೂಡ ಕ್ಯಾಂಟೀನ್ ನಿರ್ಮಾಣ ಕಾಮಗಾರಿ ಆರಂಭಗೊಳ್ಳದಿರುವುದು ಎದ್ದು ಕಾಣುತ್ತಿದೆ.
ಶಿಡ್ಲಘಟ್ಟ ರೇಷ್ಮೆ ನಗರವಾಗಿದ್ದು ಕೂಲಿ ಕಾರ್ಮಿಕರ ಸಂಖ್ಯೆ ಅಧಿಕವಾಗಿದೆ. ಅದೇ ರೀತಿ ಚಿಂತಾಮಣಿ ವಾಣಿಜ್ಯ
ಕೇಂದ್ರವಾಗಿದ್ದು, ಇಲ್ಲಿ ಕೂಡ ಕೂಲಿ ಕಾರ್ಮಿಕರ ಸಂಖ್ಯೆ ಅಧಿಕವಾಗಿದೆ. ಆದರೆ, ಸ್ಥಳೀಯ ನಗರಸಭೆಗಳು ಮಾತ್ರ
ಕ್ಯಾಂಟೀನ್ ನಿರ್ಮಾಣದ ಬಗ್ಗೆ ಆಸಕ್ತಿ ತೋರದಿರುವುದು ಸಾರ್ವಜನಿಕ ವಲಯದಲ್ಲಿ ಅಸಮಾಧಾನಕ್ಕೆ
ಕಾರಣವಾಗಿದೆ.
ಬಾಗೇಪಲ್ಲಿ, ಗುಡಿಬಂಡೆಯಲ್ಲಿ ಕ್ಯಾಂಟೀನ್ ಮರೀಚಿಕೆ: ಜಿಲ್ಲೆಯಲ್ಲಿ ಅತ್ಯಂತ ಹಿಂದುಳಿದ ತಾಲೂಕಾಗಿರುವ
ಬಾಗೇಪಲ್ಲಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣದ ಸ್ಥಳ ವಿವಾದಕ್ಕೆ ಗುರಿಯಾಗಿದೆ. ಹಾಲಿ ಶಾಸಕ ಎಸ್.ಎನ್.ಸುಬ್ಟಾರೆಡ್ಡಿ ಸಂತೆ ಮೈದಾನದಲ್ಲಿ ಈ ಹಿಂದೆ ಕ್ಯಾಂಟೀನ್ ನಿರ್ಮಾಣಕ್ಕೆ ಭೂಮಿ ಪೂಜೆ ಸಹ ಮಾಡಿದ್ದರು. ಆದರೆ, ಅದಕ್ಕೆ ಸಿಪಿಎಂ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ ನಗರದ ಗೂಳೂರು ವೃತ್ತದಲ್ಲಿ ಆರಂಭಿಸುವಂತೆ ಪ್ರತಿಭಟನೆ ನಡೆಸಿದ್ದರು. ಇದರಿಂದ ಎಲ್ಲೂ ಕಾಮಗಾರಿ ಆರಂಭಗೊಳ್ಳದೇ ನನೆಗುದಿಗೆ ಬಿದ್ದಿದೆ. ಶಿಡ್ಲಘಟ್ಟದಲ್ಲಿ ಕಾಮಗಾರಿ ಆರಂಭಗೊಂಡಿಲ್ಲ.ಚಿಂತಾಮಣಿಯಲ್ಲಿ ಗುರುಭವನದ ಆವರಣದಲ್ಲಿ ನಿರ್ಮಿಸಬೇಕೆಂಬ ನಿರ್ಧಾರಕ್ಕೆ ಶಿಕ್ಷಕರ ವಿರೋಧ ವ್ಯಕ್ತಪಡಿಸಿದ್ದರಿಂದ ಕೊನೆ ಗಳಿಗೆಯಲ್ಲಿ ಎಪಿಎಂಸಿ ಆವರಣದಲ್ಲಿ ಕ್ಯಾಂಟೀನ್ ನಿರ್ಮಾಣಕ್ಕೆ ಚುನಾವಣೆಗೂ ಮೊದಲು ಭೂಮಿ ಪೂಜೆ ನೆರವೇರಿಸಲಾಗಿತ್ತು. ಆದರೆ ಅನುಮತಿ ಕೊಟ್ಟ ನಂತರ ಇದೀಗ ಎಪಿಎಂಸಿ ಆಡಳಿತ ಮಂಡಳಿ ಕ್ಯಾಂಟೀನ್ ನಿರ್ಮಾಣಕಕೆ ತಗಾದೆ ತೆಗೆದಿರುವುದರಿಂದ ಕಾಮಗಾರಿ ನಿಂತಿದೆ. ಈ ವಿಚಾರದಲ್ಲಿ
ರಾಜಕೀಯ ಬಣ್ಣ ಪಡೆದುಕೊಂಡಿರುವುದರಿಂದ ಕಾಮಗಾರಿ ಆರಂಭಗೊಂಡಿಲ್ಲ
ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.