15 ಇಂದಿರಾ ಕ್ಯಾಂಟೀನ್‌ ಪೈಕಿ 9 ಮಾತ್ರ ಊಟಕ್ಕೆ ಸಿದ್ಧ!


Team Udayavani, Jul 12, 2018, 5:13 PM IST

12-july-22.jpg

ಧಾರವಾಡ: ಜಿಲ್ಲೆಗೆ ಮಂಜೂರಾಗಿದ್ದ 15 ಇಂದಿರಾ ಕ್ಯಾಂಟೀನ್‌ಗಳಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ 12 ಕ್ಯಾಂಟೀನ್‌ಗಳ ಪೈಕಿ 9 ಕ್ಯಾಂಟೀನ್‌ಗಳು ಅಂತಿಮ ರೂಪ ಪಡೆದಿದ್ದು, ಆದರೆ ಈವರೆಗೂ ಲೋಕಾರ್ಪಣೆಯಾಗಿಲ್ಲ. ಧಾರವಾಡ ನಗರಕ್ಕೆ ಮಂಜೂರಾಗಿದ್ದ ನಾಲ್ಕು ಕ್ಯಾಂಟೀನ್‌ಗಳ ಪೈಕಿ ಮಿನಿ ವಿಧಾನಸೌಧ ಆವರಣ ಹಾಗೂ ಹೊಸ ಬಸ್‌ ನಿಲ್ದಾಣದ ಆವರಣದಲ್ಲಿ ಇಂದಿರಾ ಕ್ಯಾಂಟೀನ್‌ ಸುಸಜ್ಜಿತವಾಗಿ ಸಂಪೂರ್ಣ ಸಿದ್ಧವಾಗಿ ನಿಂತಿವೆ. ಅದೇ ರೀತಿ ಹುಬ್ಬಳ್ಳಿಯಲ್ಲಿ ನಿಗದಿ ಮಾಡಿದ್ದ 8 ಕ್ಯಾಂಟೀನ್‌ಗಳ ಪೈಕಿ 7 ಕ್ಯಾಂಟೀನ್‌ ಸಿದ್ಧಗೊಂಡಿದ್ದು, ಒಂದು ಕ್ಯಾಂಟೀನ್‌ ಕಾರ್ಯವಷ್ಟೇ ಬಾಕಿ ಉಳಿದಿದೆ.

ಮಾಸ್ಟರ್‌ ಕಿಚನ್‌ ಸಿದ್ಧ: ಇದಲ್ಲದೇ ಧಾರವಾಡದ ಮಿನಿ ವಿಧಾನಸೌಧ ಆವರಣ ಹಾಗೂ ಹುಬ್ಬಳ್ಳಿಯ ಬೆಂಗೇರಿಯಲ್ಲಿ ಮಾಸ್ಟರ್‌ ಕಿಚನ್‌ಗಳೂ ತಯಾರಾಗಿದ್ದು, ಈ ಮಾಸ್ಟರ್‌ ಕಿಚನ್‌ಗಳಿಂದಲೇ ಅವಳಿನಗರದ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆ ಆಗಲಿದೆ. ಇದಕ್ಕಾಗಿ ಕರೆಯಲಾಗಿದ್ದ ಟೆಂಡರ್‌ ಸಹ ಮುಗಿದಿದ್ದು, ಧಾರವಾಡದ ಆದಿತ್ಯ ಮಯೂರ ಅವರಿಗೆ ಟೆಂಡರ್‌ ದೊರೆತಿದೆ. ಕ್ಯಾಂಟೀನ್‌ನಲ್ಲಿ ವಿತರಿಸುವ ಆಹಾರದ ಮೆನು ಇನ್ನೂ ಅಂತಿಮವಾಗಿಲ್ಲ.

ಸ್ಥಳಕ್ಕಾಗಿ ಹುಡುಕಾಟ: ಧಾರವಾಡ ನಗರದಲ್ಲಿ ಉಳಿದ ಎರಡು ಕ್ಯಾಂಟೀನ್‌ ನಿರ್ಮಾಣಕ್ಕಾಗಿ ಕಲಾಭವನ ಆವರಣದಲ್ಲಿ ವಿರೋಧ ಹಾಗೂ ಶಿವಾಜಿ ವೃತ್ತದಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ಬೇರೆ ಸ್ಥಳದ ಹುಡುಗಾಟದಲ್ಲಿದೆ ಅಧಿಕಾರಿಗಳ ತಂಡ. ಸದ್ಯ ಅವಳಿನಗರದ ಎಲ್ಲ ಕ್ಯಾಂಟೀನ್‌ಗಳ ನಿರ್ಮಾಣ ಕೈಗೊಂಡು ಕಾರ್ಯಾರಂಭ ಮಾಡಿದ ಬಳಿಕ ನವಲಗುಂದ, ಕುಂದಗೋಳ ಹಾಗೂ ಕಲಘಟಗಿ ತಾಲೂಕಿನಲ್ಲಿ ಮಂಜೂರಾಗಿರುವ ಇಂದಿರಾ ಕ್ಯಾಂಟೀನ್‌ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆಯಲಿದೆ. 

ಲೋಕಾರ್ಪಣೆ ಯಾವಾಗ?
ಚುನಾವಣೆ ಘೋಷಣೆ ಪೂರ್ವವೇ ಕಾರ್ಯಾರಂಭ ಮಾಡಲು ಉದ್ದೇಶಿಸಲಾಗಿದ್ದ ಈ ಕ್ಯಾಂಟೀನ್‌ಗಳ ನಿರ್ಮಾಣ ಕಾರ್ಯ ಹೊಸ ತಂತ್ರಜ್ಞಾನ ಪದ್ಧತಿ ಅಳವಡಿಕೆಯಿಂದ ವೇಗ ಪಡೆದುಕೊಂಡಿತ್ತು. ಆದರೆ ಚುನಾವಣೆ ಘೋಷಣೆಯಾದ ಬಳಿಕ ಗುತ್ತಿಗೆದಾರರ ಆತಂಕದಿಂದ ಕಾಮಗಾರಿಗಳು ನಿಧಾನವೇ ಪ್ರಧಾನ ಆಗುವಂತಾಗಿತ್ತು. ಈಗ ಸದ್ಯ ಅಂತಿಮ ಹಂತಕ್ಕೆ ಬಂದು ನಿಂತಿರುವ ಈ ಕಟ್ಟಡಗಳಿಗೆ ಚುನಾವಣೆ ಮುಗಿದು ತಿಂಗಳಾದರೂ ಲೋಕಾರ್ಪಣೆಯ ಭಾಗ್ಯವಿಲ್ಲದಂತಾಗಿದೆ. ಇದಕ್ಕೆ ಕಾರಣ ಜನಪ್ರತಿನಿಧಿಗಳ ನಿರ್ಲಕ್ಷ್ಯವೋ ಅಥವಾ ಅಧಿಕಾರಿ ವರ್ಗದ ವಿಳಂಬ ನೀತಿಯೋ ಎಂಬುದು ಸಾರ್ವಜನಿಕರಿಗೆ ತಿಳಿಯದಾಗಿದೆ.

ಜಿಲ್ಲೆಗೆ ಮಂಜೂರಾಗಿದ್ದ 15 ಕ್ಯಾಂಟೀನ್‌ ಪೈಕಿ 9 ಸಿದ್ಧವಾಗಿದ್ದು, ಸದ್ಯ ಅವುಗಳ ಕಾರ್ಯಾರಂಭಕ್ಕೆ ದಿನಾಂಕ ನಿಗದಿ ಮಾಡಬೇಕಿದೆ. ಉಳಿದ ಕ್ಯಾಂಟೀನ್‌ಗಳನ್ನು ಬೇಗ ನಿರ್ಮಿಸಲು ಸೂಚನೆ ನೀಡಲಾಗಿದೆ.
ವಿ.ಜೆ. ಜೋಶಿ,
ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತ,
ಜಿಲ್ಲಾ ನಗರಾಭಿವೃದ್ಧಿ ಕೋಶ, ಧಾರವಾಡ

ಟಾಪ್ ನ್ಯೂಸ್

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.