ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ
Team Udayavani, Jul 13, 2018, 11:53 AM IST
ಬೆಂಗಳೂರು: ವೇತನ ಪಾವತಿಯಾಗದೆ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆ ಪೌರಕಾರ್ಮಿಕ ಸುಬ್ರಹ್ಮಣ್ಯ ಕುಟುಂಬಕ್ಕೆ 25 ಲಕ್ಷ ಪರಿಹಾರ ಕಲ್ಪಿಸಬೇಕು, ಕುಟುಂಸ್ಥರಿಗೆ ಸರ್ಕಾರಿ ಕೆಲಸ ಹಾಗೂ ವಸತಿ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಬಿಬಿಎಂಪಿ ಗುತ್ತಿಗೆ ಪೌರಕಾರ್ಮಿಕರ ಸಂಘಟನೆ ಗುರುವಾರ ಪ್ರತಿಭಟನೆ ನಡೆಸಿತು.
ಪಾಲಿಕೆಯ ಕೇಂದ್ರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಪೌರಕಾರ್ಮಿಕರು, ಗುತ್ತಿಗೆ ಪೌರಕಾರ್ಮಿಕರಿಗೆ ವೇತನ ದೊರೆಯದಿರಲು ಕಾರಣವೇನು ಎಂಬುದನ್ನು ತನಿಖೆ ನಡೆಸಬೇಕು. ಜತೆಗೆ 700 ಜನರಿಗೆ ಒಬ್ಬರು ಪೌರಕಾರ್ಮಿಕ ನಿಯಮ ಬದಲಿಗೆ 500 ಜನರಿಗೆ ಒಬ್ಬರು ಪೌರಕಾರ್ಮಿಕರನ್ನು ನೇಮಿಸಿಕೊಳ್ಳಬೇಕು. ನಕಲಿ ಪೌರಕಾರ್ಮಿಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿ ಮೇಯರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಮಾತನಾಡಿದ ಮೇಯರ್ ಸಂಪತ್ರಾಜ್, ಪೌರಕಾರ್ಮಿಕರಿಗೆ ವೇತನ ವಿಳಂಬವಾಗಲು ಕಾರಣ ಯಾರು ಎಂಬುದರ ಕುರಿತು ತನಿಖೆ ನಡೆಸಲಾಗುವುದು. ಸುಬ್ರಹ್ಮಣ್ಯ ಕುಟುಂಬಕ್ಕೆ ಸರ್ಕಾರದಿಂದ ವಸತಿ ಹಾಗೂ ನೌಕರಿ ಕೊಡಿಸಲಾಗುವುದು. ಇನ್ನೂ ವೇತನ ದೊರೆಯದ ಕಾರ್ಮಿಕರಿಗೆ ಎರಡು ದಿನಗಳಲ್ಲಿ ವೇತನ ದೊರೆಯುವಂತೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..
Ullal: ಬಾವಿ, ಬೋರ್ವೆಲ್ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.