ಇಂದಿರಾ ಕ್ಯಾಂಟೀನ್ ಹೆಸರಲ್ಲಿ ಲೂಟಿ, ಸದನದಲ್ಲಿ ರಾಮದಾಸ್ ಏಕಾಂಗಿ!
Team Udayavani, Jul 13, 2018, 3:28 PM IST
ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರಿನಲ್ಲಿ ಲೂಟಿ ಮಾಡಲಾಗುತ್ತಿದೆ. ಈ ಬಗ್ಗೆ ತನ್ನಲ್ಲಿ ದಾಖಲೆಗಳಿವೆ ಎಂದು ಬಿಜೆಪಿ ಶಾಸಕ ಎಸ್ .ಎ.ರಾಮದಾಸ್ ಆರೋಪಿಸಿದ್ದರು. ಈ ಬಗ್ಗೆ ಚರ್ಚೆ ನಡೆಸಲು ಅವಕಾಶ ಕೊಡಬೇಕೆಂದು ಕೋರಿದ್ದರು. ಆದರೆ ಸ್ಪೀಕರ್ ರಮೇಶ್ ಕುಮಾರ್ ಅವರು ಅವಕಾಶ ಕೊಡದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ರಾಮದಾಸ್ ಸಭಾತ್ಯಾಗ ನಡೆಸಿದರು. ಆದರೆ ಬಿಜೆಪಿ ಈ ಸಂದರ್ಭದಲ್ಲಿ ಅವರಿಗೆ ಸಾಥ್ ಕೊಡದೇ, ರಾಮದಾಸ್ ಏಕಾಂಗಿಯಾದ ಪ್ರಸಂಗ ನಡೆಯಿತು.
ಶುಕ್ರವಾರ ವಿಧಾನಸಭೆಯ ಕಲಾಪದಲ್ಲಿ ರಾಮದಾಸ್ ಅವರು ಮಾತನಾಡಿ, ಇಂದಿರಾ ಕ್ಯಾಂಟೀನ್ ಹೆಸರಿನಲ್ಲಿ ಲೂಟಿ ನಡೆಯುತ್ತಿದೆ ಎಂದು ಆರೋಪಿಸಿದ್ದರು. ಪ್ರತಿ ದಿನ 1.5 ಲಕ್ಷ ಜನ ಊಟ ಮಾಡುತ್ತಿದ್ದಾರೆ. ಆದರೆ 6,72,750 ಜನ ಊಟ ಮಾಡಿದ್ದಾರೆ ಎಂದು ಹೇಳುತ್ತಾರೆ. ಎಷ್ಟು ಜನ ಇಂದಿರಾ ಕ್ಯಾಂಟೀನ್ ಊಟ ಮಾಡುತ್ತಿದ್ದಾರೆಂಬ ಬಗ್ಗೆ ದಾಖಲೆಗಳಿಲ್ಲ ಎಂದು ದೂರಿದರು.
ಇಂದಿರಾ ಕ್ಯಾಂಟೀನ್ ನಲ್ಲಿ ಒಬ್ಬರಿಗೆ 250 ಗ್ರಾಂ ಆಹಾರ ಕೊಡುವುದಾಗಿ ಹೇಳಿದ್ದಾರೆ. ವಿಪರ್ಯಾಸವೆಂದರೆ ಕ್ಯಾಂಟೀನ್ ನಲ್ಲಿ ಆಹಾರ ಕೊಡಲು ಯಾವುದೇ ತೂಕದ ಮಾಪನಗಳಿಲ್ಲ ಎಂದು ಹೇಳಿ ದಾಖಲೆಯನ್ನು ಸದನದ ಮುಂದಿಟ್ಟಿದ್ದರು.
ಈ ಸಂದರ್ಭದಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ, ಇದು ಸುಳ್ಳು ಆರೋಪ ಎಂದಾಗ ಅಸಮಾಧಾನಗೊಂಡ ರಾಮದಾಸ್ ಅವರು ಕಲಾಪದಿಂದ ಹೊರನಡೆದಿದ್ದರು. ಈ ವೇಳೆ ಬಿಜೆಪಿ ಉಳಿದ ಸದಸ್ಯರ ರಾಮದಾಸ್ ಅವರನ್ನು ಬೆಂಬಲಿಸದೇ ಮೌನಕ್ಕೆ ಶರಣಾಗಿದ್ದರು. ಇಂದಿರಾ ಕ್ಯಾಂಟೀನ್ ಗಳ ಅಕ್ರಮದ ಬಗ್ಗೆ ಕೋರ್ಟ್ ನಲ್ಲಿ ಪ್ರಶ್ನಿಸುವುದಾಗಿ ರಾಮದಾಸ್ ಕಲಾಪಕ್ಕೆ ತೆರೆ ಬಿದ್ದ ಬಳಿಕ ಸುದ್ದಿಗಾರರ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.