ಮರವಂತೆ: ಬೆಂಗಳೂರು ವಿದ್ಯಾರ್ಥಿಗಳ ಪರಿಸರ ಸ್ವಚ್ಚತಾ ಜಾಗೃತಿ

Team Udayavani, Jul 14, 2018, 6:35 AM IST

1307uppe1-1.gif

ಉಪ್ಪುಂದ: ಎಲ್ಲೋ ಹುಟ್ಟಿ ಬೆಳೆದ ವಿದ್ಯಾರ್ಥಿಗಳ ತಂಡವೊಂದು ದೇಶಕ್ಕಾಗಿ ಸೇವೆ ಸಲ್ಲಿಸುವ ಉದ್ದೇಶ ಇಟ್ಟುಕೊಂಡು ಕರಾವಳಿಯ ಮರವಂತೆಯಲ್ಲಿ ಬೀಡುಬಿಟ್ಟು ಇಲ್ಲಿನ ಗ್ರಾ.ಪಂ.ನಡೆಸುತ್ತಿರುವ ಸ್ವಚ್ಚ ಮರವಂತೆ ಯೋಜನೆಯ ಯಶಸ್ಸಿಗಾಗಿ ಶ್ರಮಿಸುತ್ತಿದ್ದಾರೆ.

ವಿದ್ಯಾರ್ಥಿಗಳು ಕಾಲೇಜು ರಜಾ ಅವಧಿಯಲ್ಲಿ ಸ್ನೇಹಿತರ ಜತೆಗೂಡಿ ರಜಾ ಕಳೆಯಲು ಪಿಕ್‌ನಿಕ್‌, ಟೂರ್‌ಗಳಿಗೆ ಹೋಗುವುದು ಸಾಮಾನ್ಯ.  ಆದರೆ ಬೆಂಗಳೂರು ರಾಜಾನುಕುಂಟೆ ಸಾಯಿ ವಿದ್ಯಾ ತಾಂತ್ರಿಕ ಮಹಾವಿದ್ಯಾಲಯದ ಏಳು ವಿದ್ಯಾರ್ಥಿಗಳು ಮತ್ತು ಮೂವರು ವಿದ್ಯಾರ್ಥಿನಿಯರ  ತಂಡ‌ 18 ದಿನಗಳ ಕಾಲ ಪರಿಸರ ಸ್ವಚ್ಚತೆಯ ಅಗತ್ಯ, ಘನ ಮತ್ತು ದ್ರವ ತ್ಯಾಜ್ಯ ಸಂಪನ್ಮೂಲ ವಿರ್ವಹಣೆಯಲ್ಲಿ ಜನರ ಸಹಭಾಗಿತ್ವದ ಆವಶ್ಯಕತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದರ ಜತೆಗೆ ಸ್ವಚ್ಚತಾ ಕಾರ್ಯ ನಡೆಸುವ ಮೂಲಕ ಮರವಂತೆ ಜನರಿಗೆ ಪ್ರೇರಣೆ ನೀಡುತ್ತಿರುವುದು ವಿದ್ಯಾರ್ಥಿ ಸಮೂಹದಲ್ಲಿ ಆಶಾದಾಯಕ ಬೆಳವಣಿಗೆಯಾಗಿದೆ.

ಬೀದಿ ನಾಟಕ
ಜನರಲ್ಲಿ ನೈರ್ಮಲ್ಯದ ಅರಿವು ಮೂಡಿಸಲು ಊರಿನ ನಾಲ್ಕು ಶಾಲೆಗಳ ವಿದ್ಯಾರ್ಥಿಗಳಿಗೆ,  ಹೆತ್ತವರಿಗೆ, ಆಶಾ ಕಾರ್ಯಕರ್ತೆಯರಿಗೆ, ವಾರ್ಡ್‌ ಸಭೆಗಳ ಸದಸ್ಯರಿಗೆ ಅದರ ಕುರಿತು ಮಾಹಿತಿ ನೀಡುತ್ತಿದ್ದು ಅದನ್ನು ಮನದಟ್ಟು ಮಾಡಲು ಕಿರು ಬೀದಿನಾಟಕ, ವೀಡಿಯೊ ತುಣುಕುಗಳನ್ನು ಪ್ರದರ್ಶಿಸಿದ್ದಾರೆ.

ಮನೆ ಮನೆ ಭೇಟಿ
ಸಾರ್ವಜನಿಕ ರಸ್ತೆ ಪರಿಸರ ಸ್ವಚ್ಚತೆಗೆ ಜಾಗೃತಿ ಮೂಡಿಸಲು ಜಾಥಾ ಹಾಗೂ ಊರಿನ ಎಲ್ಲ 1,200 ಮನೆಗಳಿಗೆ ಭೇಟಿ ನೀಡಲಿದ್ದಾರೆ.

ಮೋದಿ ಪ್ರೇರಣೆ
ತಂಡದಲ್ಲಿ ಸೋಹನ್‌ಕುಮಾರ್‌ ಎನ್‌., ಸ್ನೇಹಾ ಜಿ., ಎಚ್‌. ಶರಣಂ, ಸುಂದರ ವಿಜಯನ್‌, ಮೋಹನ ಗೌಡ ಎ. ಆರ್‌., ಜಿ. ಎನ್‌. ತೇಜಸ್‌ ಆರಾಧ್ಯ, ಧನುಷ್‌ ಕೆ. ಎನ್‌, ಸ್ಪರ್ಷಾ ಆರ್‌., ರಜಿತ್‌ ಎ. ಬೆಂಗಳೂರಿನವರು. ಗಣೇಶ ಶೆಟ್ಟಿ ನಾವುಂದದವರು. ಬೇರೆ ಬೇರೆ ವಿಭಾಗದಲ್ಲಿ ಕಲಿಯುತ್ತಿರುವ ಇವರು  ಸ್ವಚ್ಚ ಭಾರತ ಯೋಜನೆಯನ್ನು ಆರಂಭಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿದ್ಯಾರ್ಥಿಗಳು ತಮ್ಮ ರಜಾವಧಿಯಲ್ಲಿ ಕನಿಷ್ಠ 100 ಗಂಟೆಗಳ ಸಮುದಾಯ ಸೇವೆ ಮಾಡಬೇಕೆಂಬ ಕರೆ ನೀಡಿದ್ದಾರೆ. ಮುಂದಿನ ವರ್ಷದಿಂದ ಕೇಂದ್ರ  ಸರಕಾರ   ತಾಂತ್ರಿಕ ವಿದ್ಯಾರ್ಥಿಗಳಿಗೆ ಸಣ್ಣ ಅವಧಿಯ ಸಾಮಾಜಿಕ ಸೇವಾ ಕಾರ್ಯ ಕಡ್ಡಾಯಗೊಳಿಸಲಿದೆ ಎಂಬ ನಿರೀಕ್ಷೆಯಿದೆ. ಎಂದು ವಿದ್ಯಾರ್ಥಿಗಳು ತಿಳಿಸುತ್ತಾರೆ. 

ಇದೇ ಊರಿನವರಾದ ಗಣೇಶ ಶೆಟ್ಟಿ ಮರವಂತೆ  ಗ್ರಾಮ ಪಂಚಾಯತ್‌  ಹಲವು ಅಭಿವೃದ್ಧಿ ಕೆಲಸಗಳ ಮೂಲಕ ರಾಜ್ಯದ ಗಮನ ಸೆಳೆದಿರುವುದರ ಜತೆಗೆ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯ ನಿಟ್ಟಿನಲ್ಲಿ ಕೆಲಸ ಆರಂಭಿಸಿದೆ. ಈ ಕಾರಣಕ್ಕಾಗಿ ಈ ಊರನ್ನು ಆಯ್ಕೆ ಮಾಡಿಕೊಂಡೆವು ಎಂದರು.

ವರದಿ ಸರಕಾರಿ ಇಲಾಖೆಗೆ
ತ್ಯಾಜ್ಯ ಸಂಗ್ರಹ, ವಿಲೇವಾರಿಗೆ ಸಾರ್ವ ಜನಿಕರಿಂದ ಇನ್ನೂ ಹೆಚ್ಚಿನ ಸ್ಪಂದನೆ ಬೇಕು. ಇಲ್ಲಿನ ನಮ್ಮ ಕೆಲಸದ ಅನುಭವ ಆಧಾರಿತ ವರದಿಯನ್ನು ಕಾಲೇಜಿಗೆ, ಕೇಂದ್ರ ಮಾನವ ಸಂನ್ಮೂಲ ಮಂತ್ರಾಲಯಕ್ಕೆ, ರಾಜ್ಯ ಗ್ರಾಮೀಣ ಅಭಿವೃದ್ಧಿ, ಪಂಚಾಯತ್‌ರಾಜ್‌ ಇಲಾಖೆಗೆ, ಮರವಂತೆ ಗ್ರಾ.ಪಂ.ಗೆ ನೀಡಲಾಗುವುದು ಎಂದಿದ್ದಾರೆ.

ಟಾಪ್ ನ್ಯೂಸ್

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

1-skk

Cricket; ವೇಗಿ ಸಿದ್ದಾರ್ಥ್ ಕೌಲ್‌ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.