ಹೊಸಮಠ ಸೇತುವೆ: 4 ದಿನದಿಂದ ಇಳಿದಿಲ್ಲ ನೀರು


Team Udayavani, Jul 14, 2018, 2:45 AM IST

hosmutt-13-7.jpg

ಕಡಬ: ಕಡಬ ಹೊಸಮಠ ಸೇತುವೆಯ ಮೇಲೆ ಕಳೆದ 4 ದಿನಗಳಿಂದ ಸತತವಾಗಿ ನೆರೆ ನೀರು ಹರಿಯುತ್ತಲೇ ಇದೆ. ಉಪ್ಪಿನಂಗಡಿ – ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಜನರು ಅತಂತ್ರ ಸ್ಥಿತಿಯಲ್ಲಿದ್ದಾರೆ. ನೆರೆ ನೀರು ಹರಿಯುತ್ತಿರುವ ಸೇತು ವೆಯ ಮೇಲೆ ವಾಹನಗಳು ಸಂಚರಿಸಿ ಅವಘಡ ಸಂಭವಿಸಬಾರದೆನ್ನುವ ಮುನ್ನೆಚ್ಚರಿಕೆ ನೆಲೆಯಲ್ಲಿ ರಾತ್ರಿ, ಹಗಲು ಪೊಲೀಸರು, ಗೃಹರಕ್ಷಕ ದಳದ ಸಿಬಂದಿ ಕಾವಲು ಕಾಯುತ್ತಲೇ ಇದ್ದಾರೆ. ಹೊಸಮಠ ಸೇತುವೆಯ ಇಕ್ಕೆಲಗಳಲ್ಲಿ ರಕ್ಷಣಾ ಗೇಟುಗಳನ್ನು ಹಾಕಿ ಮುಚ್ಚಲಾಗಿದೆ.

ವಿದ್ಯಾರ್ಥಿಗಳಿಗೆ ಹೆಚ್ಚಿನ ಕಷ್ಟ
ಶಾಲೆ, ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇತುವೆ ಮುಳುಗಡೆಯಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಸೇತುವೆ ಮುಳುಗಡೆಯಾಗಿರುವ ಕಾರಣದಿಂದಾಗಿ ಹೊಸಮಠ ಸೇತುವೆಯ ಮೂಲಕ ಉಪ್ಪಿನಂಗಡಿ-ಕಡಬ ನಡುವೆ ಸಂಚರಿಸುತ್ತಿದ್ದ ಸರಕಾರಿ ಬಸ್‌ ಗಳು ಓಡಾಟ ಸ್ಥಗಿತಗೊಳಿಸಿವೆ. ವಿದ್ಯಾರ್ಥಿಗಳು ಬೆಳಗ್ಗೆ ಖಾಸಗಿ ವಾಹನಗಳಲ್ಲಿ ಬಂದರೆ, ಸಂಜೆ ಮನೆ ಸೇರಲು ಪರದಾಡುವಂತಾಗಿದೆ. ಶಾಲೆ ಬಿಟ್ಟು ಕಡಬದಿಂದ ಬಿಳಿನೆಲೆ, ಕೊಂಬಾರು, ಮರ್ಧಾಳ, ಕೈಕಂಬ ಮೊದಲಾದ ಕಡೆ ಹೋಗಬೇಕಾದ ವಿದ್ಯಾರ್ಥಿಗಳು ಸಂಜೆ ಆರು ಗಂಟೆಯ ತನಕವೂ ವಾಹನಗಳಿಲ್ಲದೆ ಕಡಬ ಬಸ್‌ ನಿಲ್ದಾಣದಲ್ಲಿ ಉಳಿಯುವಂತಾಗಿದೆ. ಕೆಲವು ವಿದ್ಯಾರ್ಥಿಗಳು ಖಾಸಗಿ ಜೀಪುಗಳಲ್ಲಿ ನೇತಾಡಿಕೊಂಡು ಮಳೆಗೆ ಮೈಯೊಡ್ಡಿ ಹೋಗುತ್ತಿದ್ದಾರೆ. ಸಮಸ್ಯೆ ಬಿಗಡಾಯಿಸಿದ್ದರೂ ಸಂಬಂಧಪಟ್ಟವರು ಗಮನಹರಿಸುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ.

ಮುಳುಗು ಸೇತುವೆಗೆ ಹಲವು ಜೀವ ಬಲಿ
ಈ ಹಿಂದೆ ಮುಳುಗಡೆಯಾದ ಸೇತುವೆಯ ಮೇಲೆ ವಾಹನ ಚಲಾಯಿಸುವ ದುಸ್ಸಾಹಸಕ್ಕೆ ಇಳಿದು ನೀರಿಗೆ ಬಲಿಯಾದ ಜೀವಗಳು ಹಲವು. ಸುಮಾರು 5 ದಶಕಗಳ ಹಿಂದೆ ನೆರೆನೀರಿನಲ್ಲಿ ಮುಳುಗಿದ್ದ ಸೇತುವೆಯನ್ನು ದಾಟಲು ಯತ್ನಿಸಿದ್ದ ಖಾಸಗಿ ಬಸ್ಸೊಂದು ಮುಳುಗಿ ಓರ್ವ ಪ್ರಯಾಣಿಕ ನೀರುಪಾಲಾಗಿದ್ದ. ಆ ಬಳಿಕ ಹಲವು ವರ್ಷಗಳ ಅನಂತರ ತಮಿಳುನಾಡಿನ ಪ್ರವಾಸಿ ಯುವಕರಿಬ್ಬರು ನೆರೆ ನೀರಿನಲ್ಲಿ ಕೊಚ್ಚಿಹೋಗಿದ್ದರು. ಅಡಿಕೆ ಸಸಿ ಸಾಗಿಸುತ್ತಿದ್ದ ಲಾರಿಯೊಂದು ಮುಳುಗಿ ಕೃಷಿಕರೊಬ್ಬರು ಜೀವ ಕಳೆದುಕೊಂಡಿದ್ದರು. 2006ರ ಮಳೆಗಾಲದಲ್ಲಿ ಸಿಮೆಂಟ್‌ ಸಾಗಾಟದ ಲಾರಿಯೊಂದು ಸೇತುವೆಯ ಮೇಲೆ ಚಲಿಸಿ ನೀರುಪಾಲಾಗಿ ಲಾರಿಯಲ್ಲಿದ್ದ ನಾಲ್ವರು ಮೃತಪಟ್ಟಿದ್ದರು. ಈ ಕಹಿ ಘಟನೆ ಜನರ ಮನಸ್ಸಿನಿಂದ ಮಾಸಿಲ್ಲ.

ಟಾಪ್ ನ್ಯೂಸ್

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.