ವಿವಿ ಸಿಂಡಿಕೇಟ್ ನೇಮಕ: ಸಿಎಂಗೆ ಸಿದ್ದು ಪತ್ರ
Team Udayavani, Jul 14, 2018, 6:20 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಪತ್ರ ಸಮರ ಮುಂದು
ವರಿದಿದ್ದು, ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರನ್ನು ಬದಲಾವಣೆ ಮಾಡದಂತೆ ಕೋರಿ ಮುಖ್ಯಮಂತ್ರಿ
ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.
ಮುಖ್ಯಮಂತ್ರಿಗಳಿಗೆ ಶುಕ್ರವಾರ ಪತ್ರ ಬರೆದಿರುವ ಸಿದ್ದರಾಮಯ್ಯ, ಕರ್ನಾಟಕ ರಾಜ್ಯದ ವಿಶ್ವವಿದ್ಯಾಲಯಗಳಿಗೆ ನಮ್ಮ ಹಿಂದಿನ ಸರ್ಕಾರದ ಅವಧಿಯಲ್ಲಿ ಶೈಕ್ಷಣಿಕ ವಲಯದಲ್ಲಿ ಪರಿಣಿತರಾದ ಎಲ್ಲ ವರ್ಗದವರನ್ನು ಸಿಂಡಿಕೇಟ್ ಸದಸ್ಯರು ಮತ್ತು ವ್ಯವಸ್ಥಾಪಕ ಮಂಡಳಿ ಸದಸ್ಯರಾಗಿ ನೇಮಕ ಮಾಡಲಾಗಿದೆ. ಈ ಎಲ್ಲ ಸದಸ್ಯರನ್ನು ಬದಲಾವಣೆ ಮಾಡದೆ ಮುಂದುವರಿಸುವಂತೆ ಕೋರಿದ್ದಾರೆ.
ಸರ್ಕಾರ ಬದಲಾದ ಮೇಲೆ ವಿವಿಗಳ ಸಿಂಡಿಕೇಟ್ ಸದಸ್ಯರು ಮತ್ತು ವ್ಯವಸ್ಥಾಪಕ ಮಂಡಳಿ ಸದಸ್ಯರನ್ನು ಬದಲಾಯಿಸುವುದು ಸಂಪ್ರದಾಯ. ಆಡಳಿತ ಪಕ್ಷದವರು ತಮಗೆ ಬೇಕಾದ ಆಯಾ ಕ್ಷೇತ್ರದ ಪರಿಣಿತರನ್ನು ಈ ಹುದ್ದೆಗಳಿಗೆ ನೇಮಕ ಮಾಡುತ್ತದೆ. ಅದರಂತೆ ಸಮ್ಮಿಶ್ರ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿರುವ ಜಿ.ಟಿ.ದೇವೇಗೌಡಅವರು ಸಿಂಡಿಕೇಟ್ ಸದಸ್ಯರು ಮತ್ತು ವ್ಯವಸ್ಥಾಪಕ ಮಂಡಳಿ ಸದಸ್ಯರನ್ನು ಬದಲಾಯಿಸಲು ನಿರ್ಧರಿಸಿದ್ದು, ಈಗಾಗಲೇ ಈ ಬಗ್ಗೆ ಚರ್ಚೆ ಆರಂಭಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.