ಉನ್ನತ ಶಿಕ್ಷಣ ಸಚಿವ ಜಿಟಿಡಿ ಟೆಂಪಲ್ ರನ್
Team Udayavani, Jul 14, 2018, 12:15 PM IST
ಮೈಸೂರು: ಸಚಿವರಾದ ನಂತರ ಇದೇ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಆಷಾಢ ಅಮಾವಾಸ್ಯೆ ಪ್ರಯುಕ್ತ ಕುಟುಂಬ ಸಮೇತ ವಿವಿಧ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಚಾಮುಂಡಿಬೆಟ್ಟಕ್ಕೆ ತೆರಳಿ ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಹುಟ್ಟೂರು ಮೈಸೂರು ತಾಲೂಕಿನ ಗುಂಗ್ರಾಲ್‌ಛತ್ರ ಗ್ರಾಮದಲ್ಲಿರುವ ಈಶ್ವರ ದೇವಸ್ಥಾನ, ತ್ರಿಪುರ ಸುಂದರಿ ಉತ್ತನಹಳ್ಳಿ ಮಾರಮ್ಮ ದೇವಸ್ಥಾನಗಳಿಗೆ ತೆರಳಿ ದರ್ಶನ ಪಡೆದರು. ನಂತರ ನಂಜನಗೂಡಿಗೆ ತೆರಳಿ ನಂಜುಂಡೇಶ್ವರನಿಗೆ ಪೂಜೆ ಸಲ್ಲಿಸಿದರು.ಬಳಿಕ ತಗಡೂರು ಅಂಕನಾಥೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಸಿಎಂ ಆಗಮನ: ಚಾಮುಂಡಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಟಿ.ದೇವೇಗೌಡ, ಜು.20ರಂದು ಮೊದಲ ಆಷಾಢ ಶುಕ್ರವಾರಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಮುಂಡಿಬೆಟ್ಟಕ್ಕೆ ಆಗಮಿಸಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಎಲ್ಲಾ ಜಲಾಶಯಗಳೂ ಭರ್ತಿಯಾಗಿವೆ. 20ರಂದು ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳಿಗೆ ಮುಖ್ಯಮಂತ್ರಿ ಬಾಗಿನ ಅರ್ಪಿಸಲಿದ್ದಾರೆ ಎಂದು ತಿಳಿಸಿದರು.
ಅದ್ಧೂರಿ ದಸರಾ: ಈ ಬಾರಿ ಅದ್ಧೂರಿ ಹಾಗೂ ವೈಭವವಾಗಿ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಈಗಾಗಲೇ ದಸರಾ ಉನ್ನತಮಟ್ಟದ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ನಿಭಾಯಿಸುತ್ತೇನೆ: ಉನ್ನತ ಶಿಕ್ಷಣ ಇಲಾಖೆ ಬೇಡ ಕಂದಾಯ ಖಾತೆ ಕೊಡಿ ಎಂದು ಆರಂಭದಲ್ಲಿ ಬೇಡಿಕೆ ಇಟ್ಟಿದ್ದು ನಿಜ. ಆದರೆ, ಕಂದಾಯ ಇಲಾಖೆ ಕಾಂಗ್ರೆಸ್ ಪಕ್ಷದ ಪಾಲಾದ್ದರಿಂದ ಈಗ ಉನ್ನತ ಶಿಕ್ಷಣ ಇಲಾಖೆಯನ್ನು ಒಪ್ಪಿಕೊಂಡಿದ್ದು, ತಜ್ಞರ ಸಲಹೆ ಪಡೆದು ಈ ಇಲಾಖೆಯನ್ನು ಉತ್ತಮವಾಗಿ ನಿಭಾಯಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ ಪದವಿ ಕಾಲೇಜುಗಳಿಗೆ ಹತ್ತು ಸಾವಿರ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಿದ್ದು, ಮೈಸೂರು ವಿಶ್ವವಿದ್ಯಾನಿಲಯಕ್ಕೆ ಕುಲಪತಿ ನೇಮಕವನ್ನು ಶೀಘ್ರದಲ್ಲೇ ಮಾಡಲಾಗುವುದು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಯುಜಿಸಿ ಮಾನ್ಯತೆ ನವೀಕರಣ ಸಂಬಂಧ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆದಿದೆ ಎಂದು ತಿಳಿಸಿದರು.
ಕೃತಜ್ಞತಾ ಸಭೆ: ಜು.15ರಂದು ಚಾಮುಂಡೇಶ್ವರಿ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಲಿಂಗದೇವರಕೊಪ್ಪಲು ಗ್ರಾಮದಲ್ಲಿ ಬೃಹತ್ ಕೃತಜ್ಞತಾ ಸಭೆ ಏರ್ಪಡಿಸಲಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಜಿ.ಟಿ.ದೇವೇಗೌಡರ ಪತ್ನಿ ಲಲಿತಾದೇವೇಗೌಡ, ಪುತ್ರ ಜಿ.ಡಿ.ಹರೀಶ್ ಗೌಡ, ಜಿಪಂ ಸದಸ್ಯ ಬೀರಿಹುಂಡಿ ಬಸವಣ್ಣ, ಮುಖಂಡರಾದ ಗಂಗಾಧರ ಗೌಡ ಮೊದಲಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.