ರಸ್ತೆ ನಿಯಮ ಪಾಲಿಸಿ ಅಪಘಾತ ತಗ್ಗಿಸಿ: ಬಸವರಾಜ


Team Udayavani, Jul 14, 2018, 12:20 PM IST

ray-2.gif

ಗೊರೇಬಾಳ: ಪ್ರತಿಯೊಬ್ಬ ವಾಹನ ಸವಾರರು ಮತ್ತು ನಾಗರಿಕರು ರಸ್ತೆ ನಿಯಮಗಳನ್ನು ಪಾಲಿಸಿದಲ್ಲಿ ರಸ್ತೆ ಅಪಘಾತ ತಗ್ಗಿಸಲು ಅನುಕೂಲವಾಗುತ್ತದೆ ಎಂದು ತುರ್ವಿಹಾಳ ಪೊಲೀಸ್‌ ಠಾಣೆ ಮುಖ್ಯಪೇದೆ ಬಸವರಾಜ ಹೇಳಿದರು.

ಸಿಂಧನೂರು ತಾಲೂಕಿನ ಕಲಮಂಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಪೊಲೀಸ್‌ ಇಲಾಖೆಯಿಂದ ಹಮ್ಮಿಕೊಂಡಿದ್ದ ಸಂಚಾರ ನಿರ್ವಹಣೆ ಮತ್ತು ರಸ್ತೆ ಸುರಕ್ಷತಾ ಮಾಸಾಚರಣೆ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು, ಯುವಜನರು ಅತೀ ವೇಗದಿಂದ ವಾಹನ ಚಲಾಯಿಸುತ್ತಿದ್ದು, ಇದರಿಂದ ಅಪಘಾತ ಹೆಚ್ಚುತ್ತಿವೆ. ಜಾಗರೂಕತೆಯಿಂದ ವಾಹನ ಚಲಾಯಿಸುವ ಮೂಲಕ ವೈಯಕ್ತಿಕ ಸೇರಿ ಇತರರ ಜೀವ ರಕ್ಷಣೆಗೆ ಮುಂದಾಗಬೇಕು. 

ಸಂಚಾರ ನಿಯಮ ಅರಿತು ವಾಹನ ಚಲಾಯಿಸಬೇಕು. ವಾಹನ ಚಾಲನೆ ಪರವಾನಗಿ ಮತ್ತು ವಾಹನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪೇದೆ ಮಲ್ಲಿಕಾರ್ಜುನ ಸಂಚಾರ ನಿಯಮ ಮತ್ತು ರಾಜ್ಯ ಮತ್ತು ದೇಶದಲ್ಲಿ ನಡೆದ ಅಪಘಾತಗಳ ಅಂಕಿ-ಅಂಶ ವಿವರಿಸಿದರು.

ಮುಖ್ಯಗುರು ಸಿ. ಪ್ರಕಾಶ ಅಧ್ಯಕ್ಷತೆ ವಹಿಸಿದ್ದರು. ಎಎಸ್‌ಐ ಹನುಮಂತಪ್ಪ, ವೀರೇಶ, ಪೇದೆಗಳಾದ ಖಲೀಲ್‌ ಪಾಷಾ, ಗೋಪಾಲ ಮತ್ತು ಶಿಕ್ಷಕರಾದ ಅಕ್ಕಮಹಾದೇವಿ, ಜಯಶ್ರೀ ಆಶ್ರಿತ್‌, ಶರಣಪ್ಪ ಮುಳ್ಳೂರು, ವೀರೇಶ ಗೋನವಾರ, ಸುಭಾಷ ಪತ್ತಾರ, ಅರುಣ, ರೂಪಾ ಕರ್ಣೆ ಇದ್ದರು. 

ಜಾಗೃತಿ ಜಾಥಾ: ಕಾರ್ಯಕ್ರಮದ ನಂತರ ಶಾಲಾ ಮಕ್ಕಳು, ಶಿಕ್ಷಕರು, ಗ್ರಾಮದ ಯುವಕರು ಮತ್ತು ನಾಗರಿಕರೊಂದಿಗೆ ಗ್ರಾಮದ ಮುಖ್ಯ ರಸ್ತೆ ಮತ್ತು ವಿವಿಧ ಬಡಾವಣೆಗಳಲ್ಲಿ ರಸ್ತೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಕುರಿತು ಘೋಷಣೆ ಕೂಗುತ್ತ ಜಾಥಾ ನಡೆಸಲಾಯಿತು.

ಟಾಪ್ ನ್ಯೂಸ್

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

1-deee

Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್

BY-Vijayendra

Contracter Case: ಸಚಿನ್‌ ಪಾಂಚಾಳ್‌ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ

Malpe: ಎಳ್ಳಮಾವಾಸ್ಯೆ… ವಡಭಾಂಡೇಶ್ವರದಲ್ಲಿ ಸಾವಿರಾರು ಭಕ್ತಾದಿಗಳಿಂದ ಸಮುದ್ರಸ್ನಾನ

Malpe: ಎಳ್ಳಮಾವಾಸ್ಯೆ… ವಡಭಾಂಡೇಶ್ವರದಲ್ಲಿ ಸಾವಿರಾರು ಭಕ್ತಾದಿಗಳಿಂದ ಸಮುದ್ರಸ್ನಾನ

ud-sp

Udupi ಹೊಸ ವರ್ಷಾಚರಣೆ: ಹಾನಿಕಾರಕ ಸಂದೇಶ ಎಚ್ಚರ ವಹಿಸಲು ಎಸ್‌ಪಿ ಸೂಚನೆ

allu arjun

Theatre stampede case: ಅಲ್ಲು ಅರ್ಜುನ್ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ನ್ಯಾಯಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEP-training

National Education Policy: ಎನ್‌ಇಪಿ ಜಾರಿ ಗೊಂದಲ ಮಧ್ಯೆ ಶಿಕ್ಷಕರಿಗೆ ತರಬೇತಿ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

1-deee

Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್

BY-Vijayendra

Contracter Case: ಸಚಿನ್‌ ಪಾಂಚಾಳ್‌ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.