ಐಶಾನಿ ಕತೆ: ನಟಿಯೂ ನಿರ್ದೇಶಕಿಯೂ

Team Udayavani, Jul 15, 2018, 6:00 AM IST

2.jpg

ಬಹಳ ಚಿಕ್ಕ ವಯಸ್ಸಿನಲ್ಲೇ ಕನ್ನಡ ಚಿತ್ರರಂಗಕ್ಕೆ ನಾಯಕಿಯಾಗಿ ಎಂಟ್ರಿ ಕೊಟ್ಟ ಐಶಾನಿ, ಮೊದಲಿಗೆ ನಟಿಸಿದ್ದು ಜ್ಯೋತಿರಾಜ ಅಲಿಯಾಸ್‌ ಕೋತಿರಾಜ ಎಂಬ ಚಿತ್ರದಲ್ಲಿ. ಆ ಚಿತ್ರ ಬಿಡುಗಡೆಯಾಗುವುದಕ್ಕಿಂತ ಮುನ್ನವೇ ಸಿಕ್ಕಿದ್ದು ಯೋಗರಾಜ್‌ ಭಟ್‌ ನಿರ್ದೇಶನದ “ವಾಸ್ತು ಪ್ರಕಾರ’. ಇದು ಐಶಾನಿಯ ಎರಡನೆಯ ಚಿತ್ರ. ಈ ಎರಡು ಚಿತ್ರಗಳು ಬಿಡುಗಡೆಗೆ ಬಾಕಿ ಇರುವಾಗಲೇ, ಸತೀಶ್‌ ನೀನಾಸಂ ಅಭಿನಯದ ಮತ್ತು ನಿರ್ಮಾಣದ ರಾಕೆಟ್‌ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡರು. 

ರಾಕೆಟ್‌ ಚಿತ್ರದ ನಂತರ ಐಶಾನಿ ಶೆಟ್ಟಿ ಅಕ್ಷರಶಃ ಮಾಯವಾಗಿದ್ದರು ಎಂದರೆ ತಪ್ಪಿಲ್ಲ. ಏಕೆಂದರೆ, ಅವರು ಯಾವೊಂದು ಚಿತ್ರದಲ್ಲೂ ನಟಿಸುತ್ತಿರಲಿಲ್ಲ. ಐಶಾನಿ ಶೆಟ್ಟಿ ಎಲ್ಲಿ ಹೋದರು ಎಂದು ಹುಡುಕಿದರೆ, ಅವರು ತಮ್ಮ ಸ್ಟಡೀಸ್‌ ಮುಗಿಸುತ್ತಿದ್ದಾರೆ ಎಂಬ ಉತ್ತರ ಗಾಂಧಿನಗರದಿಂದ ಬಂದಿತ್ತು. ಆ ನಂತರ ಅವರು ಕಾಜಿ ಎಂಬ ಕಿರುಚಿತ್ರವೊಂದನ್ನು ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿ ಬಂತು. ಕಾಜಿ  ಮುಗಿದಿರುವುದಷ್ಟೇ ಅಲ್ಲ, ಈಗಾಗಲೇ ಕ್ಯಾಲಿಫೋರ್ನಿಯಾದಲ್ಲಿ ನಡೆದ ಕಿರುಚಿತ್ರೋತ್ಸವದಲ್ಲೂ ಆಯ್ಕೆಯಾಗಿ ಪ್ರದರ್ಶನ ಕಂಡಿದೆ. ಆ ಖುಷಿಯಲ್ಲಿದ್ದ ಐಶಾನಿ ಶೆಟ್ಟಿಗೆ, ದೆಹಲಿಯಲ್ಲಿ ನಡೆಯುತ್ತಿರುವ 8ನೇ ದಾದಾ ಸಾಹೇಬ್‌ ಫಾಲ್ಕೆ ಅಕಾಡೆಮಿ ಫಿಲ್ಮ್ ಫೆಸ್ಟಿವಲ್‌ಗೆ ಆಯ್ಕೆಯಾಗಿ ಎರಡು ಪ್ರಶಸ್ತಿಗಳನ್ನೂ ಗೆದ್ದಿದೆ.

“ನಾನು ಈ ಕಥೆ ಬರೆಯೋಕೆ ಕಾರಣ, ಕೆಲವು ನೈಜ ಘಟನೆಗಳು. ಉತ್ತರ ಕರ್ನಾಟಕದಲ್ಲಿ ನಾನು ನೋಡಿದ ಘಟನೆ ಚುಚುತ್ತಲೇ ಇತ್ತು. ಅದನ್ನೊಂದು ಕಥೆ ಮಾಡಿದ್ದೆ. ಚಿತ್ರ ಮಾಡೋಕೆ ಆಸೆ ಇತ್ತಾದರೂ, ಯಾರು ಈ ಚಿತ್ರ ನಿರ್ಮಿಸುವುದಕ್ಕೆ ಮುಂದೆ ಬರುತ್ತಾರೆ ಅಂತ ಗೊತ್ತಿರಲಿಲ್ಲ. ಒಮ್ಮೆ ಸತೀಶ್‌ಗೆ ಹೇಳಿದೆ. ಅವರಿಗೆ ಇಷ್ಟವಾಗಿ, ಒಂದು ತಂಡ ಕೊಟ್ಟರು. ಆ ತಂಡ ಇಲ್ಲದಿದ್ದರೆ ಈ ಚಿತ್ರ ಆಗುತ್ತಿರಲಿಲ್ಲ’ ಎನ್ನುತ್ತಾರೆ ಐಶಾನಿ.

ಇದೀಗ ಕಾಜಿ  ಮುಗಿಸಿ ಪ್ರಶಸ್ತಿ ಗೆದ್ದಿರುವ ಖುಷಿಯಲ್ಲಿರುವ ಅವರು ಮೆಲ್ಲನೆ ಒಂದೊಂದೇ ಸಿನೆಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇದರ ಮೊದಲ ಹಂತವಾಗಿ ಅವರು ನಡುವೆ ಅಂತರವಿರಲಿ ಎಂಬ ಚಿತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಹಾಡುಗಳು ಬಿಡುಗಡೆಯಾಗಿದ್ದು, ಮುಂದಿನ ತಿಂಗಳು ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಕುರಿತು ಮಾತನಾಡುವ ಅವರು, “ಪರೀಕ್ಷೆ ಇದ್ದ ಕಾರಣ, ಚಿತ್ರರಂಗದಿಂದ ದೂರ ಇರಬೇಕಾಗಿ ಬಂತು. ಈಗ ಪರೀಕ್ಷೆ ಮುಗಿದಿರುವುದರಿಂದ ಒಂದಷ್ಟು ಕಥೆಗಳು ಹುಡುಕಿ ಬರುತ್ತಿವೆ. ಕಥೆ ಕೇಳುತ್ತಿದ್ದೇನೆ. ಈ ಮಧ್ಯೆ ನಡುವೆ ಅಂತರವಿರಲಿ ಎಂಬ ಚಿತ್ರದಲ್ಲಿ ನಟಿಸಿದ್ದೇನೆ. ಕಥೆ ಚೆನ್ನಾಗಿದ್ದರಿಂದ ನಟಿಸಿದೆ. ಆ ಚಿತ್ರಕ್ಕೆ ಪ್ರಖ್ಯಾತ್‌ ಎಂಬ ಹೊಸ ಪ್ರತಿಭೆ ಹೀರೋ. ರವೀನ್‌ ನಿರ್ದೇಶನ ಮಾಡಿದ್ದಾರೆ’ ಎನ್ನುತ್ತಾರೆ ಐಶಾನಿ.

ಐಶಾನಿ ನಿರ್ದೇಶಕಿಯಾಗಿಯೂ ಗುರುತಿಸಿಕೊಂಡಿರುವುದರಿಂದ ಅವರದ್ದು, ಈಗ ಎರಡು ದೋಣಿಗಳ ಪಯಣ ಎಂದರೆ ತಪ್ಪಿಲ್ಲ. ಮುಂದಿನ ದಿನಗಳಲ್ಲೂ ಅವರು ನಿರ್ದೇಶನವನ್ನೂ ಮುಂದುವರೆಸುತ್ತಾರಾ ಎಂಬ ಪ್ರಶ್ನೆಯೊಂದನ್ನು ಅವರ ಮುಂದಿಟ್ಟರೆ, “ನನಗೆ ನಟನೆ ಜೊತೆಗೆ ಕಥೆ ಬರೆಯುವುದು, ನಿರ್ದೇಶನ ಮಾಡುವ ಬಗ್ಗೆ ಮೊದಲಿನಿಂದಲೂ ಆಸಕ್ತಿ ಇತ್ತು. ನಿರ್ದೇಶನ ಸುಲಭವಲ್ಲ. ಅಲ್ಲಿ ಕಲಿಯುವುದು ತುಂಬಾ ಇದೆ. 
ಕನ್ನಡದಲ್ಲಿ ಮಹಿಳಾ ನಿರ್ದೇಶಕರು ಕಡಿಮೆ. ಮುಂದೆ ಆ ಬಗ್ಗೆಯೂ ಗಮನ ಹರಿಸುತ್ತೇನೆ’ ಎನ್ನುತ್ತಾರೆ ಐಶಾನಿ.

ಟಾಪ್ ನ್ಯೂಸ್

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

6

ಐರನ್‌ ಮ್ಯಾನ್: ರೀಲ್‌ ಅಲ್ಲ, ರಿಯಲ್‌ ಹೀರೋಗಳ ಕಥೆ!

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

MUST WATCH

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

ಹೊಸ ಸೇರ್ಪಡೆ

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.