ಜಿ.ಪಂ. ಅಧ್ಯಕ್ಷ, ತಹಶೀಲ್ದಾರ್ ಭೇಟಿ
Team Udayavani, Jul 15, 2018, 7:00 AM IST
ಕಟಪಾಡಿ: ಉದ್ಯಾವರ ಗ್ರಾ. ಪಂ. ವ್ಯಾಪ್ತಿಯ ಕನಕೋಡ ಪಡುಕರೆ ಭಾಗದ ಕಡಲ ಕಿನಾರೆಯಲ್ಲಿ ತೀವ್ರ ಕಡಲ್ಕೊರೆತದಿಂದಾಗಿ ರಕ್ಷಣೆಗಾಗಿ ಹಾಕಿದ್ದ ಕಲ್ಲುಗಳು ಸಮುದ್ರ ಪಾಲಾಗುತ್ತಿದ್ದು, ಕಾಂಕ್ರೀಟ್ ರಸ್ತೆಯ ಅಡಿಭಾಗದ ಮಣ್ಣು ಕುಸಿದಿದೆ.
ಇದೇ ರೀತಿ ಕಡಲ್ಕೊರೆತ ಮುಂದುವರಿದಲ್ಲಿ ಕಾಂಕ್ರೀಟ್ ರಸ್ತೆ ಸಂಪೂರ್ಣವಾಗಿ ಕಡಲು ಪಾಲಾಗಲಿದ್ದು, ಮಲ್ಪೆ ಸಂಪರ್ಕ ರಸ್ತೆ ಕಡಿತಗೊಳ್ಳಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಶನಿವಾರ ಈ ಭಾಗಕ್ಕೆ ಜಿ.ಪಂ.ಅಧ್ಯಕ್ಷ ದಿನಕರ ಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಪರಿಹಾರಕ್ಕೆ ಶೀಘ್ರ ಕಾರ್ಯೋನ್ಮುಖರಾಗುವಂತೆ ಸಂಬಂಧಿತ ಅಧಿಕಾರಿಗಳೊಂದಿಗೆ ಜು. 14ರಂದು ಮಾತುಕತೆ ನಡೆಸಿದ್ದಾರೆ.
ಉಡುಪಿ ತಾಲೂಕು ತಹಶೀಲ್ದಾರ ಪ್ರದೀಪ್ ಕುರುಡೇಕರ್, ಉದ್ಯಾವರ ಗ್ರಾ. ಪಂ. ಸದಸ್ಯರಾದ ಕೃಷ್ಣ ಜಿ. ಕೋಟ್ಯಾನ್, ರವಿ ಕೋಟ್ಯಾನ್, ಸ್ಥಳೀಯರಾದ ಶಿವರಾಮ್ ಪುತ್ರನ್, ಸಂತೋಷ್, ಯತೀಶ್ ಮಟ್ಟು, ದೀಪಕ್ ಪುತ್ರನ್, ನಾಗರಾಜ್, ಗ್ರಾಮ ಲೆಕ್ಕಿಗ ಉಪಸ್ಥಿತರಿದ್ದರು.
ಮಟ್ಟುವಿನಲ್ಲೂ ಹಾನಿ
ಕೋಟೆ ಗ್ರಾ.ಪಂ. ವ್ಯಾಪ್ತಿಯ ಮಟ್ಟು ಕಡಲ ಕಿನಾರೆಯಲ್ಲೂ ಕಡಲ್ಕೊರೆತದಿಂದಾಗಿ ಸಮಸ್ಯೆಯಾಗಿದೆ. ಇಲ್ಲಿನ ಭಜನ ಮಂದಿರದ ಬಳಿಯ ಮನೆಗಳ 10ಕ್ಕೂ ಅಧಿಕ ತೆಂಗಿನ ಮರಗಳು ಸಮುದ್ರ ಪಾಲಾಗುವ ಭೀತಿಯನ್ನು ಎದುರಿಸುತ್ತಿದೆ.
ಲಾಲಾಜಿ ಭೇಟಿ
ಮಾಹಿತಿ ತಿಳಿಯುತ್ತಿದ್ದಂತೆಯೇ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಭೇಟಿ ನೀಡಿ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.