ಕಡಲ್ಕೊರೆತ: ಅಪಾಯದಲ್ಲಿ ಕೈಪುಂಜಾಲು ವಿಶ್ರಾಂತಿ ಕಟ್ಟೆ, ಗೆಸ್ಟ್‌ ಹೌಸ್


Team Udayavani, Jul 15, 2018, 6:00 AM IST

1407kpe9a.gif

ಕಾಪು: ಪುರಸಭಾ ವ್ಯಾಪ್ತಿಯ ಕೈಪುಂಜಾಲು – ಕೆಂಪುಗುಡ್ಡೆಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು  ಜ್ವಾಲಿ ಫ್ರೆಂಡ್ಸ್‌ ವಿಶ್ರಾಂತಿ ಕಟ್ಟೆ, ಗೆಸ್ಟ್‌ ಹೌಸ್‌ ಸಹಿತ ಹಲವಾರು ತೆಂಗಿನ ಮರಗಳು ಅಪಾಯದ ಸ್ಥಿತಿಯಲ್ಲಿವೆ.

ಕೈಪುಂಜಾಲು ಕೆಂಪುಗುಡ್ಡೆ ಜ್ವಾಲಿ ಫ್ರೆಂಡ್ಸ್‌ ಕಟ್ಟೆ, ಅದರ ಬಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಜ್ಯೋತಿ ಶೆಟ್ಟಿ ಎಂಬವರಿಗೆ ಸೇರಿದ ಗೆಸ್ಟ್‌ ಹೌಸ್‌ನ ಆವರಣ ಗೋಡೆ ಕುಸಿಯುವ ಭೀತಿಯಿದೆ. ಆವರಣ ಗೋಡೆ ಕುಸಿದರೆ ಇಡೀ ಗೆಸ್ಟ್‌ ಹೌಸ್‌ ಧರಾಶಾಯಿಯಾಗುವ ಸಾಧ್ಯತೆಯಿದೆ. ಅದರೊಂದಿಗೆ ದಯಾನಂದ ಸುವರ್ಣ, ಇಂದಿರಾ ಕಾಂಚನ್‌, ಸುಂದರಿ ಕಾಂಚನ್‌ ಮತ್ತು ರಮೇಶ್‌ ಸುವರ್ಣ ಅವರಿಗೆ ಸೇರಿದ ಹತ್ತಾರು ತೆಂಗಿನ ಮರ ,ಗಾಳಿ ಮರಗಳು ಸಮುದ್ರ ಪಾಲಾಗುವ ಭೀತಿ ಎದುರಾಗಿದೆ. 

ಕೈಪುಂಜಾಲು, ಮಟ್ಟು ಪರಿಸರದ ಕಡಲ್ಕೊರೆತದ ಪ್ರದೇಶಗಳಿಗೆ ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌, ಪುರಸಭಾ ಸದಸ್ಯೆ ರಮಾ ಶೆಟ್ಟಿ, ಕಾಪು ತಹಶೀಲ್ದಾರ್‌ ಗುರುಸಿದ್ಧಯ್ಯ, ಬಂದರು ಇಲಾಖೆಯ ಜಯರಾಜ್‌, ಮೀನುಗಾರಿಕೆ ಇಲಾಖೆಯ ಕಿರಣ್‌ ಮೊದಲಾದವರು ಭೇಟಿ ನೀಡಿ ಹಾನಿ ಪರಿಶೀಲಿಸಿದ್ದಾರೆ.
 
ಸ್ಥಳೀಯರಾದ ಚಂದ್ರಶೇಖರ್‌ ಕಾಂಚನ್‌, ಪೂರ್ಣಿಮಾ ಕಾಂಚನ್‌, ನೇತ್ರಾವತಿ, ಜಗದೀಶ್‌ ಶ್ರೀಯಾನ್‌, ಸಂತೋಷ್‌ ಕಾಂಚನ್‌, ಮಾಧವ ಮೊದಲಾದವರು ಕಡಲ್ಕೊರೆತ ಸಮಸ್ಯೆಗೆ ತುರ್ತಾಗಿ ಸ್ಪಂದಿಸಿ, ತಾತ್ಕಾಲಿಕ ತಡೆಗೋಡೆ ರಚಿಸಿಕೊಡುವಂತೆ ಶಾಸಕರು ಮತ್ತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಡಿಸಿಗೆ ಮನವಿ
ಕೈಪುಂಜಾಲು,ಮಟ್ಟು ಪ್ರದೇಶದಲ್ಲಿನ ಕಡಲ್ಕೊರೆತ ಪ್ರದೇಶಗಳಲ್ಲಿ ಪ್ರಾಕೃತಿಕ ವಿಕೋಪ ನಿಧಿ ಬಳಸಿ ಕೊಂಡು ತುರ್ತು ಕಾಮಗಾರಿ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಇದಕ್ಕೆ ಜಿಲ್ಲಾಧಿಕಾರಿಗಳಿಂದಲೂ ಪೂರಕ ಸ್ಪಂದ‌ನೆ ದೊರಕಿದ್ದು,ತುರ್ತಾಗಿ ಇಲಾಖಾಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿಕೊಟ್ಟು,ಪರಿಶೀಲನೆಗೆ ಸೂಚನೆ ನೀಡಿದ್ದಾರೆ. ಕರಾವಳಿಯ ಕಡ್ಕೊರೆತದ ಬಗ್ಗೆ ಸರಕಾರದ ಮುಂದೆ ಬಜೆಟ್‌ ಅಧಿವೇಶನದ ನಡುವೆಯೂ ವಿಷಯ ಮಂಡಿಸಲಾಗಿದ್ದು, ತುರ್ತು ಪರಿಹಾರ ಕಾರ್ಯಾಚರಣೆ ನಡೆಸುವ ಸರಕಾರದಿಂದಲೂ ಭರವಸೆ ದೊರಕಿದೆ.
– ಲಾಲಾಜಿ ಆರ್‌.ಮೆಂಡನ್‌,ಶಾಸಕರು ಕಾಪು

ವರದಿ ಮಂಡನೆ
ಶಾಸಕರು ಮತ್ತು ಜಿಲ್ಲಾಧಿಕಾರಿಗಳ ಸೂಚನೆಯಂತೆ ಸ್ಥಳಕ್ಕೆ ಭೇಟಿ ನೀಡಿದ್ದು, ಇಲ್ಲಿನ ಪರಿಸ್ಥಿತಿಯನ್ನು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು. ಪ್ರಾಕೃತಿಕ ವಿಕೋಪ ಅಥವಾ ಜಿಲ್ಲಾಧಿಕಾರಿಯವರ ವಿಶೇಷ ಅನುದಾನದಿಂದ ತಾತ್ಕಾಲಿಕ ತಡೆಗೋಡೆ ರಚನೆಗೆ ಪ್ರಸ್ತಾವನೆ ಸಲ್ಲಿಸುತ್ತೇವೆ. ಆದಷ್ಟು ಶೀಘ್ರ ಇಲ್ಲಿ ತಾತ್ಕಾಲಿಕ ತಡೆಗೋಡೆ ರಚನೆಗೆ ಯೋಜನೆ ರೂಪಿಸುತ್ತೇವೆ.
– ಜಯರಾಜ್‌,ಬಂದರು ಇಲಾಖೆ

ಟಾಪ್ ನ್ಯೂಸ್

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

2

Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.