ಕೊಡಗು ಬಾಲಕನ ಕೂಗು ವೈರಲ್
Team Udayavani, Jul 15, 2018, 6:00 AM IST
ಮಡಿಕೇರಿ: ಧಾರಾಕಾರ ಮಳೆಯಿಂದ ಕೊಡಗು ಕೊಚ್ಚಿ ಹೋಗುವಂತಹ ಪರಿಸ್ಥಿತಿ ಇದೆ. ಕಾವೇರಿ ನದಿ ನೀರಿನ ಲಾಭ ಪಡೆಯುವ ನೀವು, ಹಾಲು ನೀಡಿದ ತಾಯಿಯಂತಿರುವ ಕೊಡಗು ಜಿಲ್ಲೆಯನ್ನು ಬಜೆಟ್‌ನಲ್ಲಿ ನಿರ್ಲಕ್ಷಿಸಿದ್ದೀರಿ ಎಂದು 8ನೇ ತರಗತಿಯ ವಿದ್ಯಾರ್ಥಿಯೊಬ್ಬ ವಿಡಿಯೋ ಮಾಡಿ ವೈರಲ್ ಮಾಡಿ ಮುಖ್ಯಮಂತ್ರಿಗಳ ಮನಮುಟ್ಟುವಂತೆ ಮಾಡಿರುವ ಪ್ರಸಂಗ ನಡೆದಿದೆ.
ನಿತ್ಯ ಮಳೆಯಿಂದ ಕೊಡಗು ತತ್ತರಿಸಿದ್ದು, ಕೊಡಗಿನ ಜನಸಾಮಾನ್ಯರು, ಕೃಷಿಕರು ಹಾಗೂ ಕಾರ್ಮಿಕ ವರ್ಗ ಸಂಕಷ್ಟಕ್ಕೆ ಒಳಗಾಗಿರುವುದನ್ನು ಅಷ್ಟೇ ಪರಿಣಾಮಕಾರಿಯಾಗಿ ಎಮ್ಮೆಮಾಡಿನ ನದಿಪಾತ್ರದಲ್ಲಿ ನಿಂತು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ಬಾಲಕ “ಫತಾ’ ಈಗ ಸುದ್ದಿಯಲ್ಲಿದ್ದಾನೆ.
ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ಎಮ್ಮೆಮಾಡಿನಲ್ಲಿ, ಕಾವೇರಿ ನದಿಯ ಪ್ರವಾಹದಿಂದ ಆವೃತ್ತ ಗದ್ದೆ ಬಯಲಿನ ಬಳಿ ಕೊಡೆ ಹಿಡಿದು ನಿಂತು, ಕೊಡಗಿನ ಮಳೆ, ಅದರಿಂದ ಆಗಿರುವ ಹಾನಿ, ಸರ್ಕಾರ, ಜನಪ್ರತಿನಿಧಿಗಳ ನಿಷ್ಕಾಳಜಿಯ ಬಗ್ಗೆ ನಿರರ್ಗಳವಾಗಿ ಮಾತನಾಡಿರುವ ಬಾಲಕನ ವಿಡಿಯೋ ಇದೀಗ ಬಹುತೇಕ ದೃಶ್ಯ ವಾಹಿನಿಗಳಲ್ಲಿ ಚರ್ಚಿತ ವಿಷಯವಾಗಿದೆ.
ಎಮ್ಮೆಮಾಡಿನ ಫತಾ, “ಭಾರೀ ಮಳೆಯಿಂದ ಕೊಡಗು ಸಂಕಷ್ಟಕ್ಕೆ ಸಿಲುಕಿದರೂ, ಇಲ್ಲಿನ ಕಾವೇರಿ ನದಿ ಮೈಸೂರು, ಮಂಡ್ಯ,ಬೆಂಗಳೂರು ಸೇರಿ ನೆರೆಯ ತಮಿಳುನಾಡು ರಾಜ್ಯಕ್ಕೆ ನೀರುಣಿಸುತ್ತಿದೆ. ಹೀಗಿದ್ದೂ, ತನ್ನೆದೆಯ ಹಾಲುಣಿಸುತ್ತಿರುವ ಕಾವೇರಿಯ ನಾಡಿನತ್ತ ಆಡಳಿತ ವ್ಯವಸ್ಥೆ ಸ್ಪಂದಿಸದಿರುವ ಬಗ್ಗೆ ಬಾಲಕ ವಿಷಾದ ವ್ಯಕ್ತಪಡಿಸಿದ್ದಾನೆ.
ಕಾಡಾನೆಗಳ ಉಪಟಳದಿಂದ ಕೃಷಿಕ ಬೇಸತ್ತಿದ್ದಾನೆ. ಕಾರ್ಮಿಕರು ಕೆಲಸ ನಿರ್ವಹಿಸಲಾಗದ ಸ್ಥಿತಿ ಇದೆ.ಇಂತಹ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಯವರು ತಮ್ಮ ಬಜೆಟ್‌ನಲ್ಲಿ ಕೊಡಗಿಗೆ ಅಗತ್ಯ ನೆರವನ್ನು ಒದಗಿಸದಿರುವುದು ಬೇಸರದ ವಿಚಾರವೆಂದು ಫತಾ ಹೇಳಿಕೊಂಡಿದ್ದಾನೆ.
ಬಿಎಸ್‌ವೈಗೂ ಕಿವಿ ಮಾತು: ನೀವು ವಿಧಾನಸಭೆಯ ಒಳಗೆ ಮತ್ತು ಹೊರಗೆ ಎಷ್ಟೇ ಮಾತನಾಡಿದರೂ ಪ್ರಯೋಜನವಿಲ್ಲ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೂ ಟಾಂಗ್ ನೀಡಿರುವ ಬಾಲಕ, ಪ್ರಧಾನಮಂತ್ರಿ ಮೋದಿ ಅವರ ಮೂಲಕ ಅಗತ್ಯ ನೆರವನ್ನು ಒದಗಿಸಲು ಮುಂದಾಗಬೇಕೆಂದು ಹೇಳಿದ್ದಾನೆ. ಹೀಗೆ ಜಿಲ್ಲೆಯ ವಿವಿಧ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
MUST WATCH
ಹೊಸ ಸೇರ್ಪಡೆ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.