ಶಿಕ್ಷಣ ಸಂಸ್ಥೆಗಳು ಸಾಧಕರನ್ನು ಸೃಷ್ಟಿಸಲಿ
Team Udayavani, Jul 15, 2018, 12:54 PM IST
ಯಲಹಂಕ: ಶಿಕ್ಷಣ ಸಂಸ್ಥೆಗಳು ಹೊಸ ಸಾಧಕರು, ತತ್ವಜ್ಞಾನಿಗಳು, ವಿಜ್ಞಾನಿಗಳನ್ನು ಹುಟ್ಟು ಹಾಕುವಂತಾಗಬೇಕು ಎಂದು ವಿಧಾನಸಭೆ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ತಿಳಿಸಿದರು.
ರೇವಾ ವಿಶ್ವವಿದ್ಯಾಲಯದಲ್ಲಿ ಶನಿವಾರ ಕುವೆಂಪು ಸಭಾಂಗಣ ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ದೇಶಕ್ಕೆ ಮಾದರಿ. ಬುದ್ಧ, ಬಸವಣ್ಣ, ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧೀಜಿ ಅವರಂತಹ ಮಹಾಪುರುಷರನ್ನು ಸೃಷ್ಟಿಸಲು ಶಿಕ್ಷಣ ಸಂಸ್ಥೆಗಳು ಶ್ರಮಿಸಬೇಕು ಎಂದರು.
ಯುವ ಜನತೆ ಮೇಲೆ ಸಿನಿಮಾ ಪ್ರಭಾವ ಹೆಚ್ಚಾಗುತ್ತಿದೆ. ದೇಶಕ್ಕಾಗಿ ಹೋರಾಟ ಮಾಡಿ ಕೊಡುಗೆ ನೀಡಿದವರನ್ನು ನಾವು ಹೆಚ್ಚಾಗಿ ಸ್ಮರಿಸಿಕೊಂಡು ಅವರ ಆದರ್ಶಗಳನ್ನು ಪಾಲಿಸಬೇಕಿದೆ ಎಂದರು.
ವಿಧಾನಸಭೆ ಉಪಸಭಾಧ್ಯಕ್ಷ ಜೆ.ಕೆ.ಕೃಷ್ಟಾರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ಶಿಕ್ಷಣ ಸಂಸ್ಥೆಗಳ ಮೇಲೆ ಅವಲಂಬಿಸಿದೆ ಎಂದು ತಿಳಿಸಿದರು. ರೇವಾ ವಿವಿ ಕುಲಾಧಿಪತಿ ಡಾ.ಪಿ.ಶಾಮರಾಜು, ವಿವಿಯ ಕುಲಪತಿ ಡಾ.ಎಸ್.ವೈ. ಕುಲಕರ್ಣಿ, ಮಾಜಿ ಕುಲಪತಿ ಡಾ.ಯು.ಜಿ.ತಳವಾರ, ಕುಲಸಚಿವ ಡಾ.ಎಂ.ಧನಂಜಯ, ಡಾ.ಬೀನಾ, ಡಾ.ಶುಭಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
C.T. Ravi ಗೈರು; ಸಾಹಿತ್ಯ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು: ಎಚ್.ಕೆ.ಪಾಟೀಲ್
ಮಮ್ತಾಜ್ ಅಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಜಾಮೀನು ವಿಚಾರಣೆ ಅರ್ಜಿ ಮುಂದೂಡಿಕೆ
Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ
BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.