ರೈತರ ಬಗ್ಗೆ ಮೊಸಳೆ ಕಣ್ಣೀರು
Team Udayavani, Jul 16, 2018, 10:11 AM IST
ಮಿರ್ಜಾಪುರ: ರೈತರ ಕಲ್ಯಾಣದ ಬಗ್ಗೆ ಕಾಂಗ್ರೆಸ್ ಹಾಗೂ ಇತರ ಪಕ್ಷಗಳು ಬರೀ ಮೊಸಳೆ ಕಣ್ಣೀರು ಸುರಿಸುತ್ತಲೇ ಬಂದಿವೆ ಎಂದು ಪ್ರಧಾನಿ ಮೋದಿ ಟೀಕಿಸಿದ್ದಾರೆ. ಉತ್ತರ ಪ್ರದೇಶಕ್ಕೆ 2 ದಿನಗಳ ಪ್ರವಾಸ ಕೈಗೊಂಡಿರುವ ಮೋದಿ, ಭಾನುವಾರ ಹಲವು ಮಹತ್ವದ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಮಿರ್ಜಾಪುರದಲ್ಲಿ ಬನ್ಸಾಗರ್ ನಾಲೆ ಯೋಜನೆ ಉದ್ಘಾಟಿಸಿ ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದಾರೆ.
ರೈತರ ಹೆಸರಿನಲ್ಲಿ ಕಾಂಗ್ರೆಸ್ ರಾಜಕೀಯ ನಡೆಸುತ್ತಿದೆ. ಕನಿಷ್ಠ ಬೆಂಬಲ ಬೆಲೆ ಏರಿಸುವುದಕ್ಕೂ ಅವರ ಬಳಿ ಸಮಯವಿರಲಿಲ್ಲ. ನಾವು ಅದನ್ನು ಮಾಡಿದ್ದೇವೆ. ನಮ್ಮ ಸರಕಾರಗಳ ಪ್ರಯತ್ನದಿಂದಾಗಿ ರೈತರ ಆದಾಯ ದುಪ್ಪಟ್ಟಾಗುವ ದಿನ ದೂರವಿಲ್ಲ. ಕಾಂಗ್ರೆಸ್ ತನ್ನ ಅವಧಿಯಲ್ಲಿ ಹಲವು ನೀರಾವರಿ ಯೋಜನೆಗಳನ್ನು ಯಾಕೆ ಪೂರ್ಣಗೊಳಿಸಿಲ್ಲ ಎಂದು ಜನರು ಪ್ರಶ್ನಿಸಬೇಕು ಎಂದಿದ್ದಾರೆ. ಮಿರ್ಜಾಪುರ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ, 108 ಜನೌಷಧ ಕೇಂದ್ರಗಳು ಹಾಗೂ ಗಂಗಾ ನದಿಗೆ ಮಿರ್ಜಾಪುರ-ವಾರಾಣಸಿ ಸಂಪರ್ಕಿಸುವ ಸೇತುವೆ ಉದ್ಘಾಟನೆಯನ್ನೂ ಅವರು ನೆರವೇರಿಸಿದ್ದಾರೆ.
ಮೋದಿ ಮನಸ್ಥಿತಿ ರೋಗಗ್ರಸ್ಥ: ಕಾಂಗ್ರೆಸ್ ಮುಸ್ಲಿಂ ಪುರುಷರ ಪಕ್ಷ ಮಾತ್ರ ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿರುವುದು ಅದರ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ
MUST WATCH
ಹೊಸ ಸೇರ್ಪಡೆ
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.