ದೆಹಲಿಯಲ್ಲಿ ನಾಳೆ ಸಂಸದರ ಸಭೆ ಕರೆದಿರುವ ಸಿಎಂ ಎಚ್‌ಡಿಕೆ
Team Udayavani, Jul 17, 2018, 6:00 AM IST
ಬೆಂಗಳೂರು: ಕಾವೇರಿ ನದಿ ನೀರು ನಿಯಂತ್ರಣ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿ ರಚನೆ ವಿರುದ್ಧ ಹೋರಾಟ ಸೇರಿದಂತೆ ಮುಂದಿನ ಸಂಸತ್ ಅಧಿವೇಶನದಲ್ಲಿ ರಾಜ್ಯದ ಹಿತ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬುಧವಾರ ದೆಹಲಿಯಲ್ಲಿ ಸಂಸದರ ಸಭೆ ಕರೆದಿದ್ದಾರೆ.
ಮಂಗಳವಾರ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿಗಳು ಬುಧವಾರ ಸಂಜೆ ಕರ್ನಾಟಕ ಭವನದಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಪ್ರತಿನಿಧಿಸುವ ರಾಜ್ಯದ ಸಂಸತ್ ಸದಸ್ಯರು ಮತ್ತು ಕೇಂದ್ರ ಪ್ರತಿನಿಧಿಸುವ ರಾಜ್ಯದ ಸಚಿವರೂ ಪಾಲ್ಗೊಳ್ಳಲಿದ್ದಾರೆ.
ಕಾವೇರಿ ನದಿ ನೀರು ನಿಯಂತ್ರಣ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿ ರಚನೆ ಕುರಿತಂತೆ ಸುಪ್ರೀಂ ಕೋರ್ಟ್‌ನಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ಸರ್ಕಾರ ತೀರ್ಮಾನಿಸಿದೆ.
ಅಲ್ಲದೆ, ಕೇಂದ್ರ ಹೊರಡಿಸಿರುವ ಗೆಜೆಟ್ ಅಧಿಸೂಚನೆಯಲ್ಲಿ ರಾಜ್ಯಕ್ಕೆ ಮಾರಕವಾಗುವ ಕೆಲವು ಅಂಶಗಳ ಬಗ್ಗೆ ಸಂಸತ್‌ನಲ್ಲಿ ಕೇಂದ್ರದ ಗಮನ ಸೆಳೆಯುವಂತೆ ಮುಖ್ಯಮಂತ್ರಿಗಳು ಸಂಸದರನ್ನು ಮನವಿ ಮಾಡಿಕೊಳ್ಳಲಿದ್ದಾರೆ.
ಜತೆಗೆ, ಕೇಂದ್ರದಿಂದ ರಾಜ್ಯಕ್ಕೆ ಮಂಜೂರಾಗಿರುವ ಯೋಜನೆಗಳು, ಅದಕ್ಕೆ ಬಿಡುಗಡೆಯಾಗ ಬೇಕಿರುವ ಅನುದಾನಗಳ ಬಗ್ಗೆಯೂ ಕೇಂದ್ರ ಸಚಿವರ ಗಮನಕ್ಕೆ ತಂದು, ಒತ್ತಡ ಹೇರುವಂತೆ ಕೋರಲಿದ್ದಾರೆ ಎನ್ನಲಾಗಿದೆ.
ದೆಹಲಿಯಲ್ಲಿ ಸಿಎಂ ಕಾರ್ಯಕ್ರಮಗಳು: ಮಂಗಳವಾರ ಬೆಳಗ್ಗೆ ದೆಹಲಿಗೆ ತೆರಳಲಿರುವ ಕುಮಾರಸ್ವಾಮಿ, ಅಂದು ಸಚಿವರಾದರಾಮ್‌ವಿಲಾಸ್ ಪಾಸ್ವಾನ್ ಹಾಗೂ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡುವರು.ಬುಧವಾರ ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರೈಲ್ವೆ, ಕಲ್ಲಿದ್ದಲು ಮತ್ತು ಹಣಕಾಸು ಸಚಿವ ಪಿಯೂಷ್ ಗೋಯೆಲ್ ಅವರೊಂದಿಗೆ ಸಮಾಲೋಚನೆ ನಡೆಸುವರು. ಸಂಜೆ ಸಂಸದರೊಂದಿಗಿನ ಸಭೆ ಮುಗಿಸಿ ಗುರುವಾರ ಬೆಳಗ್ಗೆ ಬೆಂಗಳೂರಿಗೆ ಹಿಂತಿರುಗುವರು. ಕಾಂಗ್ರೆಸ್ ರಾಷ್ಟ್ರೀಯ ನಾಯಕರನ್ನೂ ಮುಖ್ಯಮಂತ್ರಿಗಳು ಭೇಟಿ ಮಾಡುವ ಸಾಧ್ಯತೆ ಇದೆ. ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕ ಸೇರಿದಂತೆ ಸಮ್ಮಿಶ್ರ ಸರ್ಕಾರದಲ್ಲಿ ಉದ್ಭವವಾಗಿರುವ ಗೊಂದಲಗಳ ಬಗ್ಗೆಯೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ರಾಷ್ಟ್ರೀಯ ನಾಯಕರೊಂದಿಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಮಳೆ ನೀರು ಹರಿಯುವ ಕಾಲುವೆಗೆ ಪೈಪ್!
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Mangaluru: ಕೊಕ್ಕಡದ ʼಸಾಂತಾ ಕ್ಲಾಸ್ʼ ವಿನ್ಸೆಂಟ್ ಕ್ರಿಸ್ಮಸ್ ತಿರುಗಾಟಕ್ಕೆ 25 ವರ್ಷ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.