ಪ್ರಮುಖ ಆರೋಪಿಗಳು ಕೋರ್ಟ್‌ಗೆ ಹಾಜರು
Team Udayavani, Jul 17, 2018, 6:05 AM IST
ಉಡುಪಿ: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜು.16ರಂದು ಪ್ರಮುಖ ಆರೋಪಿಗಳಾದ ಭಾಸ್ಕರ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ, ನಿರಂಜನ್ ಭಟ್ ಅವರನ್ನು ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ದೀರ್ಘ ಸಮಯದ ಬಳಿಕ ಇವರನ್ನು ಕೋರ್ಟಿಗೆ ಹಾಜರುಪಡಿಸಲಾಗಿದ್ದು, ಅವರಿಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಕೋರ್ಟ್ ಸುತ್ತ ವಿಶೇಷ ಭದ್ರತೆ ಒದಗಿಸಲಾಗಿತ್ತು. ಕೋರ್ಟ್‌ನೊಳಗೆ ಪ್ರವೇಶಿಸುವ ಪ್ರತಿಯೊಬ್ಬರನ್ನು ಲೋಹಶೋಧಕದ ಮೂಲಕ ಪರಿಶೀಲಿಸಿ ಒಳಬಿಡಲಾಗುತ್ತಿತ್ತು. ವಿಚಾರಣೆ ನಡೆಯುವ ಕೊಠಡಿಗೆ ಸಾರ್ವಜನಿಕರು ಹಾಗೂ ಮಾಧ್ಯಮದವರಿಗೆ ಪ್ರವೇಶವಿರಲಿಲ್ಲ.
ರವಿವಾರ ರಾತ್ರಿ ಆರೋಪಿಗಳನ್ನು ಮಂಗಳೂರು ಸಬ್ ಜೈಲಿಗೆ ಕರೆತಂದ ಪೊಲೀಸರು, ಸೋಮವಾರ ಬೆಳಗ್ಗೆ 11ಕ್ಕೆ ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಸಂಜೆ 5 ಗಂಟೆವರೆಗೆ ಸಾಕ್ಷಿಗಳ ವಿಚಾರಣೆ ಮುಗಿಯುವವರೆಗೂ ನ್ಯಾಯಾಲಯದಲ್ಲಿದ್ದರು. ಬಳಿಕ ಅವರನ್ನು ಮತ್ತೆ ಮಂಗಳೂರು ಜೈಲಿಗೆ ಕರೆದೊಯ್ಯಲಾಯಿತು.
ವೃತ್ತ ನಿರೀಕ್ಷಕ ಗಿರೀಶ್ ವಿಚಾರಣೆ
ಕೋರ್ಟ್ ಕಲಾಪ ಆರಂಭಗೊಂಡಾಗ ಕೊಲೆ ಪ್ರಕರಣದ ತನಿಖೆ ನಡೆಸಿದ ವೃತ್ತ ನಿರೀಕ್ಷಕ ಗಿರೀಶ್ ಅವರನ್ನು ವಿಚಾರಣೆ ನಡೆಸಲಾಯಿತು. ಪ್ರಕರಣದ ತನಿಖೆಯಲ್ಲಿ ವಿಳಂಬ ನಡೆಸಿದರು ಎಂಬ ಕಾರಣಕ್ಕೆ ವರ್ಗಾವಣೆಗೊಂಡ ಅವರನ್ನು ಇಡೀ ದಿನ ವಿಚಾರಣೆ ನಡೆಸಲಾಯಿತು. ಇದರಿಂದ ಬೇರೆ ಸಾಕ್ಷಿಗಳ ವಿಚಾರಣೆ ಮತ್ತು ಗಿರೀಶ್ ಅವರ ಪಾಟಿಸವಾಲಿಗೆ ಅವಕಾಶ ಸಿಗಲಿಲ್ಲ. ಮಂಗಳವಾರ ಗಿರೀಶ್, ಮೃತ ಭಾಸ್ಕರ್ ಶೆಟ್ಟಿ ಅವರ ತಾಯಿ ಗುಲಾಬಿ ಶೆಟ್ಟಿ ಅವರ ಪಾಟಿಸವಾಲು ನಡೆಯುವ ಸಾಧ್ಯತೆ ಇದೆ.
ಜು.19ರವರೆಗೆ ವಿಚಾರಣೆ
ಈ ಹಿಂದೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಾಗುತ್ತಿತ್ತು. ಆದರೆ ವಿಶೇಷ ಅಭಿಯೋಜಕ ಶಾಂತಾರಾಮ್ ಶೆಟ್ಟಿ ಅವರು ಅಗತ್ಯ ಮಾಹಿತಿಗಳನ್ನು ಮುಖತಾಃ ಪಡೆಯಲು ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕೆಂದು ಕೋರಿದ ಹಿನ್ನೆಲೆಯಲ್ಲಿ ಜು. 19ರವರೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್‌ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ
Udupi: ವಿಸಿಲ್ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್ ನಿರ್ವಹಣೆ!
Padubidri: ನಿಧಾನವಾಗಿ ಚಲಿಸಿ, ಹೆದ್ದಾರಿ ಕಾಮಗಾರಿ ನಡೆಯುತ್ತಿದೆ!
Karkala: ನಕ್ಸಲ್ ನಾಯಕ ವಿಕ್ರಂ ಗೌಡ ಹೆಬ್ರಿಯ ಕಾಡಿನಲ್ಲಿ ಎನ್ ಕೌಂಟರ್ ಗೆ ಬಲಿ
MUST WATCH
ಹೊಸ ಸೇರ್ಪಡೆ
BJP: ನನ್ನ ಹೊಣೆ ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ: ಬಿ.ವೈ.ವಿಜಯೇಂದ್ರ
ಮಣಿಪುರವನ್ನು ರಕ್ಷಿಸಿ: ರಾಷ್ಟ್ರಪತಿಗೆ ಖರ್ಗೆ ಪತ್ರ
Chennai: ಕೃಷ್ಣಗೆ ಎಂ.ಎಸ್.ಸುಬ್ಬುಲಕ್ಷ್ಮಿಪ್ರಶಸ್ತಿ ನೀಡಿಕೆಗೆ ಮದ್ರಾಸ್ ಹೈಕೋರ್ಟ್ ತಡೆ
Savarkar defamation case:: ಡಿ.2ರಂದು ಖುದ್ದು ಹಾಜರಾಗಲು ರಾಹುಲ್‌ಗೆ ಆದೇಶ
Hunsur: ಶಬರಿಮಲೆ ಯಾತ್ರಿಗಳಿದ್ದ ಬಸ್ ಪಲ್ಟಿ: ನಾಲ್ವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.