ನವಾಜುದ್ದೀನ್ ಸಿದ್ದಿಕಿ ಈಗ ಬಾಳಾ ಠಾಕ್ರೆ…ನಿಬ್ಬೆರಗಿನ ಮೇಕಪ್
Team Udayavani, Jul 18, 2018, 4:18 PM IST
ಹೊಸದಿಲ್ಲಿ : ಶಿವಸೇನೆಯ ಪರಮೋಚ್ಚ ದಿವಂಗತ ನಾಯಕ ಬಾಳಾ ಸಾಹೇಬ್ ಠಾಕರೆ ಅವರ ಬಯೋಪಿಕ್ ನಲ್ಲಿ ಠಾಕರೆ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಹಿಂದಿ ಚಿತ್ರರಂಗದ ಪ್ರತಿಭಾವಂತ ನಟ ನವಾಜುದ್ದೀನ್ ಸಿದ್ದಿಕಿ ಅವರ ಠಾಕರೆ ಮೇಕಪ್ ಎಲ್ಲರನ್ನೂ ನಿಬ್ಬೆರಗಾಗಿಸಿದೆ. ಸಿದ್ದಿಕಿ ಅವರು ಥೇಟ್ ಠಾಕರೆಯಾಗಿ ರೂಪಾಂತರಗೊಂಡಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.
ಸಂಪೂರ್ಣವಾಗಿ ಬಾಳಾ ಸಾಹೇಬ್ ಠಾಕರೆ ಅವರನ್ನು ಹೋಲುವ ನವಾಜುದ್ದೀನ್ ಸಿದ್ದಿಕಿ ಅವರ ಫೋಟೋಗಳನ್ನು ಖ್ಯಾತ ಚಿತ್ರ ವಿಮರ್ಶಕ ಮತ್ತು ವಾಣಿಜ್ಯ ವಿಶ್ಲೇಷಕ ತರಣ್ ಆದರ್ಶ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.
ತರಣ್ ಹೀಗೆ ಬರೆದಿದ್ದಾರೆ : ಕಾರ್ನಿವಾಲ್ ಮೋಷನ್ ಪಿಕ್ಚರ್ ಸಂಸ್ಥೆ ಸಂಜಯ್ ರಾವತ್ ಜತೆ ಸೇರಿಕೊಂಡು “ಠಾಕರೆ’ ಚಿತ್ರವನ್ನು ನಿರ್ಮಿಸುತ್ತಿದೆ. ನವಾಜುದ್ದೀನ್ ಸಿದ್ದಿಕಿ ನಟನೆಯ ಈ ಚಿತ್ರವೊನ್ನು ಅಭಿಜಿತ್ ಪಾನ್ಸೆ ನಿರ್ದೇಶಿಸುತ್ತಿದ್ದಾರೆ; ಸಂಜಯ್ ರಾವತ್ ಮತ್ತು ಡಾ. ಶ್ರೀಕಾಂತ್ ಭಾಸಿ ನಿರ್ಮಾಪಕರಾಗಿದ್ದಾರೆ. ಚಿತ್ರವನ್ನು 2019ರ ಜನವರಿ 23ರಂದು, ಬಾಳಾಸಾಹೇಬ್ ಅವರ ಜನ್ಮ ದಿನದಂದು ಬಿಡುಗಡೆ ಮಾಡಲಾಗುತ್ತದೆ.
ನವಾಜುದ್ದೀನ್ ಅವರು ಈ ಚಿತ್ರದಲ್ಲಿ ಸಂಪೂರ್ಣವಾಗಿ ಠಾಕರೆ ಯಾಗಿ ರೂಪಾಂತರಗೊಂಡಿದ್ದಾರೆ. ಈ ಬಯೋಪಿಕ್‌ನ ಸ್ಟೋರಿ ಲೈನ್ ಬರೆದಿರುವವರು ರಾಜ್ಯಸಭಾ ಸದಸ್ಯ ಮತ್ತು ಶಿವಸೇನೆ ವಕ್ತಾರ ಸಂಜಯ್ ರಾವತ್.
ಚಿತ್ರದ ಟೀಸರನ್ನು ಕಳೆದ ವರ್ಷ ಡಿಸೆಂಬರ್‌ನಲ್ಲೇ ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕರೆ ಮತ್ತು ಬಿಗ್ ಬಿ ಅಮಿತಾಭ್ ಬಚ್ಚನ್ ಅವರ ಉಪಸ್ಥಿತಿಯಲ್ಲಿ ಬಿಡಗಡೆಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.