ಮೀನುಗಾರರ ಸಮಸ್ಯೆ ಆಲಿಸಲು ಇಂದು ಕೋಡಿಕನ್ಯಾಣಕ್ಕೆ ಮೀನುಗಾರಿಕೆ ಸಚಿವರು
Team Udayavani, Jul 19, 2018, 6:10 AM IST
ಕೋಟ: ಕೋಡಿ ಕನ್ಯಾಣದ ಮೀನುಗಾರರ ಸಮಸ್ಯೆ ಕುರಿತು ಪರಿಶೀಲಿಸಲು ಮೀನುಗಾರಿಕೆ ಇಲಾಖೆಯ ಸಚಿವ ವೆಂಕಟ ರಾವ್ ನಾಡಗೌಡ ಜು.19ರಂದು ಬೆಳಗ್ಗೆ 10 ಗಂಟೆಗೆ ಇಲ್ಲಿಗೆ ಭೇಟಿ ನೀಡಲಿದ್ದಾರೆ.
ನೈಸರ್ಗಿಕ ಬಂದರು ಎನ್ನುವ ಹೆಗ್ಗಳಿಕೆಯ ಕೋಡಿಕನ್ಯಾಣದಲ್ಲಿ ಸುಮಾರು 500 ಬೋಟ್ಗಳು ಮೀನುಗಾರಿಕೆ ನಡೆಸುತ್ತಿದ್ದು ಈಗಾಗಲೇ 100 ಮೀಟರ್ ಮೀನುಗಾರಿಕೆ ಜಟ್ಟಿ ನಿರ್ಮಿಸಲಾಗಿದೆ. ಈ ಜಟ್ಟಿಯನ್ನು ವಿಸ್ತರಿಸಿ ಅಭಿವೃದ್ಧಿಪಡಿಸಿದರೆ ಮಲ್ಪೆಯ ಒತ್ತಡ ಕಡಿಮೆಗೊಳಿಸಿ, ಪರ್ಯಾಯ ಬಂದರು ಸೃಷ್ಟಿಸಬಹುದು ಎನ್ನುವುದು ಇಲ್ಲಿನ ಮೀನುಗಾರರ ಕನಸಾಗಿದೆ. ಆದರೆ ಇಲ್ಲಿನ ಹೂಳಿನ ಸಮಸ್ಯೆ ಜಟ್ಟಿ ಅಭಿವೃದ್ಧಿಗೆ ಹಿನ್ನಡೆಯಾಗಿತ್ತು. ಹೀಗಾಗಿ ಮೀನುಗಾರರ ಬೇಡಿಕೆ ಮೇರೆಗೆ ಕಳೆದ ವರ್ಷ ಕೇಂದ್ರ ಹಾಗೂ ರಾಜ್ಯ ಸರಕಾರ ಜಂಟಿಯಾಗಿ 6.50 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿ ಹೂಳೆತ್ತುವ ಕಾಮಗಾರಿ ಆರಂಭಿಸಲಾಗಿತ್ತು. ಆದರೆ ಗುತ್ತಿಗೆದಾರರು , ಇಲಾಖೆ ನಡುವಿನ ಸಮನ್ವಯದ ಕೊರತೆಯಿಂದ ಇದೀಗ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದೆ.
ಈ ಕುರಿತು ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಜಿ.ಪಂ. ಮಾಜಿ ಸದಸ್ಯ ಶಂಕರ್ ಕುಂದರ್ ನೇತೃತ್ವದಲ್ಲಿ ಮೀನುಗಾರರ ನಿಯೋಗ ಬೆಂಗಳೂರಿನಲ್ಲಿ ಮೀನುಗಾರಿಕೆ ಸಚಿವರನ್ನು ಇತ್ತೀಚೆಗೆ ಭೇಟಿಯಾಗಿ ಸಮಸ್ಯೆಯ ಕುರಿತು ಮನವಿ ಸಲ್ಲಿಸಿದ್ದು ಇದೀಗ ಪರಿಶೀಲನೆಗೆ ಆಗಮಿಸುತ್ತಿದ್ದಾರೆ.
ಬೋಟ್ಗಳ ಸಂಖ್ಯೆ ಅಧಿಕವಿರುವುದರಿಂದ ಜಟ್ಟಿಯನ್ನು 300 ಮೀಟರ್ ವಿಸ್ತರಿಸಬೇಕು ಹಾಗೂ ಪ್ರಸ್ತುತ ಅರ್ಧಕ್ಕೆ ಸ್ಥಗಿತಗೊಂಡಿರುವ ಹೂಳೆತ್ತುವ ಕಾಮಗಾರಿ ಮತ್ತೆ ಆರಂಭಿಸಬೇಕು. ಮೀನುಗಾರರ ಬೋಟ್ಗಳಿಗೆ ನೀಡಲಾಗುವ ಸಬ್ಸಿಡಿ ಡಿಸೀಲ್ ಸ್ಥಗಿತಗೊಂಡಿದ್ದು, ಅದನ್ನು ಮತ್ತೆ ನೀಡಬೇಕು ಎನ್ನುವುದು ಮೀನುಗಾರರ ಪ್ರಮುಖ ಬೇಡಿಕೆಯಾಗಿದ್ದು, ಈ ಕುರಿತು ಚರ್ಚೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.