ಮಾಜಿ ಸಿಎಂ ಸಿದ್ದರಾಮಯ್ಯ ಪತ್ರಕ್ಕೆ ಬೆಲೆ ಇಲ್ಲ
Team Udayavani, Jul 19, 2018, 6:35 AM IST
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದ ವಿಶ್ವವಿದ್ಯಾಲಯಗಳಿಗೆ ನಾಮ ನಿರ್ದೇಶನ ಗೊಂಡಿರುವ ಸಿಂಡಿಕೇಟ್ ಹಾಗೂ ವ್ಯವಸ್ಥಾಪನಾ ಮಂಡಳಿ ಸದಸ್ಯರನ್ನು ಬದಲಾಯಿಸದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದರೂ ಅದನ್ನು ಲೆಕ್ಕಿಸದೆ, ವಿವಿಗಳಲ್ಲಿರುವ ಸರ್ಕಾರಿ ನಾಮನಿರ್ದೇಶಿತ ಸದಸ್ಯರನ್ನು ಬದಲಾಯಿಸಲು ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ.
ಈ ಮೂಲಕ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬರೆದ ಪತ್ರಕ್ಕೆ ಸರ್ಕಾರ ಯಾವುದೇ ಕಿಮ್ಮತ್ತು ನೀಡಿಲ್ಲ ಎನ್ನುವಂತಾಗಿದೆ. ರಾಜ್ಯದ ವಿಶ್ವವಿದ್ಯಾಲಯಗಳಿಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶೈಕ್ಷಣಿಕ ವಲಯದಲ್ಲಿ ಪರಿಣಿತರಾದ ಎಲ್ಲ ವರ್ಗದವರನ್ನು ಸಿಂಡಿಕೇಟ್ ಸದಸ್ಯರು, ವ್ಯವಸ್ಥಾಪನಾ ಮಂಡಳಿ ಸದಸ್ಯರನ್ನಾಗಿ ನೇಮಿಸಲಾಗಿದೆ.
ಈ ಎಲ್ಲ ಸದಸ್ಯರನ್ನು ಬದಲಾಯಿಸದೆ ಮುಂದುವರಿಸುವಂತೆ ಕೋರಿ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಜು. 7ರಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಪತ್ರ ಬರೆದಿದ್ದರು. ಅವರು ಪತ್ರ ಬರೆದ 10ದಿನದೊಳಗೆ ಬಹುತೇಕ ಎಲ್ಲ ವಿವಿಗಳ ಸಿಂಡಿಕೇಟ್ ಹಾಗೂ ವ್ಯವಸ್ಥಾಪನಾ ಮಂಡಳಿಯ ಸರ್ಕಾರಿ ನಾಮನಿರ್ದೇಶಿತ ಸದಸ್ಯರನ್ನು ಬದಲಾವಣೆ ಮಾಡುವ ಮೂಲಕ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಸಿದ್ದರಾಮಯ್ಯ ಅವರಿಗೆ ಸೆಡ್ಡು ಹೊಡೆದಿದ್ದಾರೆ.
ಸಿಂಡಿಕೇಟ್ ಸದಸ್ಯರನ್ನು ಬದಲಾಯಿಸದಂತೆ ಸಿದ್ದರಾಮಯ್ಯ ಬರೆದ ಪತ್ರದ ಬಗ್ಗೆ ಪ್ರಸ್ತಾಪಿ ಸಿದಾಗ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು, ಆ ರೀತಿ ಮಾಡಲು ಸಾಧ್ಯವೇ ಇಲ್ಲ.ಹೊಸ ಸರ್ಕಾರ ಬಂದಾಗ ಹಿಂದಿನ ಸರ್ಕಾರ ಮಾಡಿದ್ದ ನಾಮ ನಿರ್ದೇಶನಗಳನ್ನು ಉಳಿಸಿಕೊಳ್ಳುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದರು. ಇದರ ಬೆನ್ನಲ್ಲೇ, ಸಿಂಡಿಕೇಟ್ ಸದಸ್ಯರನ್ನು ಹಿಂಪಡೆಯಲು ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ.
ಉನ್ನತ ಶಿಕ್ಷಣ ಸಚಿವರ ಸೂಚನೆಯಂತೆ ಬೆಂಗಳೂರು ವಿಶ್ವವಿದ್ಯಾಲಯ, ಮೈಸೂರುವಿಶ್ವವಿದ್ಯಾಲಯ, ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ, ಗುಲ್ಬರ್ಗ ವಿಶ್ವವಿದ್ಯಾಲಯ, ಮಂಗಳೂರು ವಿಶ್ವವಿದ್ಯಾಲಯ, ಕುವೆಂಪು ವಿಶ್ವವಿದ್ಯಾಲಯ, ರಾಜ್ಯ ಮಹಿಳಾ ವಿಶ್ವವಿದ್ಯಾ ಲಯ, ತುಮಕೂರು ವಿಶ್ವವಿದ್ಯಾಲಯ, ದಾವಣಗೆರೆ ವಿಶ್ವವಿದ್ಯಾಲಯ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ವಿಜಯನಗರ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬೆಂಗಳೂರು ಕೇಂದ್ರ ಮತ್ತು ಉತ್ತರ ವಿಶ್ವವಿದ್ಯಾಲಯ, ಕರ್ನಾಟಕ ಜನಪದ ವಿಶ್ವವಿದ್ಯಾಲಯಕ್ಕೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಾಮನಿರ್ದೇಶನ ಗೊಂಡಿದ್ದ ಸಿಂಡಿಕೇಟ್ ಸದಸ್ಯರನ್ನು ಹಿಂಪಡೆಯಲು ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ.
ಹಂಪಿ ಕನ್ನಡ ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಗಳ ಕಾರ್ಯಕಾರಿ ಸಮಿತಿ, ಕಾರ್ಯಕಾರಿ ಪರಿಷತ್, ಆಡಳಿತ ಮಂಡಳಿಗಳಿಗೆ ಹಿಂದಿನ ಸರ್ಕಾರದಿಂದ ನಾಮನಿರ್ದೇಶನ ಗೊಂಡಿರುವ ಸದಸ್ಯರನ್ನು ತಕ್ಷಣದಿಂದಲೇ ಹಿಂದಕ್ಕೆ ಪಡೆಯುವಂತೆ ಜುಲೈ 17ರಂದು ವಿಶ್ವವಿದ್ಯಾಲಯಗಳಿಗೆ ಸೂಚಿಸಲಾಗಿದೆ.
ವಿಶ್ವವಿದ್ಯಾಲಯದ ಆಡಳಿತ ನಿರ್ವಹಣೆಯಲ್ಲಿ ಸಿಂಡಿಕೇಟ್ ಹಾಗೂ ವ್ಯವಸ್ಥಾಪನಾ ಮಂಡಳಿಯೇ ಪ್ರಮುಖವಾಗಿರುತ್ತದೆ. ವಿವಿಯ ಅಭಿವೃದ್ಧಿಗೆ ಸಂಬಂಧಿಸಿದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಕಾದರೂ ಸಿಂಡಿಕೇಟ್ ಅನುಮತಿ ಅಗತ್ಯವಾಗಿರುತ್ತದೆ. ಸಿಂಡಿಕೇಟ್ನಲ್ಲಿ ರಾಜ್ಯಪಾಲರ ಪ್ರತಿನಿಧಿಗಳು, ಸರ್ಕಾರದ ನಾಮನಿರ್ದೇಶಿತ ಸದಸ್ಯರು, ಶಿಕ್ಷಣ ತಜ್ಞರು ಹಾಗೂ ಆಯಾ ವಿವಿಯ ಕುಲಪತಿ, ಕುಲಸಚಿವರು ಮತ್ತು ಹಿರಿಯ ಡೀನ್ಗಳು ಇರುತ್ತಾರೆ.
ಈ ಮಧ್ಯೆ, ಹೊಸ ಸರ್ಕಾರ ತಮ್ಮ ಬೆಂಬಲಿಗರನ್ನು ನಾಮನಿರ್ದೇಶನ ಮಾಡುವ ಉದ್ದೇಶದಿಂದ ಹಿಂದಿನ ಸರ್ಕಾರ ನಾಮನಿರ್ದೇಶನ ಮಾಡಿದ್ದವರನ್ನು ಬದಲಾಯಿಸುವುದು ಸರಿಯಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಪರಿಣಿತರನ್ನು ಆಯಾ ಸರ್ಕಾರ ತಮ್ಮ ಧೋರಣೆಗೆ ಅನುಸಾರವಾಗಿ ಬದಲಾಯಿಸಿದರೆ ಶಿಕ್ಷಣ ವ್ಯವಸ್ಥೆಯೇ ಅರ್ಥಹೀನವಾಗುತ್ತದೆ ಎಂದು ಶಿಕ್ಷಣ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೈಸೂರು ವಿವಿಯ ಸಿಂಡಿಕೇಟ್ ಸದಸ್ಯರನ್ನು ವಜಾಗೊಳಿಸಿರುವ ಕುರಿತು ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಸದ್ಯ ಅದರ ಚರ್ಚೆ ಬೇಡ.
– ಸಿದ್ದರಾಮಯ್ಯ,
ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.