ಡೆಲಿವರಿ ಪಾಯಿಂಟ್‌ನಲ್ಲಿ ಸಬ್ಸಿಡಿ ಡೀಸೆಲ್‌: ಪರಿಶೀಲಿಸಿ ಕ್ರಮ

Team Udayavani, Jul 19, 2018, 3:34 PM IST

malpe.png

ಮಲ್ಪೆ: ಯಾಂತ್ರಿಕ ಮೀನುಗಾರಿಕೆ ದೋಣಿಗಳಿಗೆ ಡೆಲಿವರಿ ಪಾಯಿಂಟ್‌ನಲ್ಲಿ ಮಾರಾಟ ತೆರಿಗೆ ರಹಿತ ಡೀಸೆಲ್‌ ನೀಡುತ್ತಿದ್ದ ಕ್ರಮವನ್ನು ಈಗೇಕೆ ಬದಲಾಯಿಸಲಾಗಿದೆ ಎಂಬ ಬಗ್ಗೆ ಇಲಾಖೆ ಕಾರ್ಯದರ್ಶಿಗಳ ಜತೆ ಚರ್ಚಿಸಲಾಗುವುದು. ಅವಶ್ಯ ಬಿದ್ದರೆ ಮುಖ್ಯಮಂತ್ರಿಗಳ ಗಮನಕ್ಕೂ ತಂದು ಪರಿಹಾರ ಕಲ್ಪಿಸುವುದಾಗಿ ಪಶುಸಂಗೋಪನಾ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡ ಭರವಸೆ ನೀಡಿದರು.

ಬುಧವಾರ ಮಲ್ಪೆ ಮೀನುಗಾರಿಕಾ ಬಂದರಿಗೆ ಭೇಟಿ ನೀಡಿ, ಮೀನುಗಾರರ ಬೇಡಿಕೆಗಳ ಮನವಿ ಸ್ವೀಕರಿಸಿದ ಅವರು, ಮಲ್ಪೆ ಬಾಪುತೋಟದ ಬಳಿ ಇರುವ ಸ್ಲಿಪ್‌ವೇ ನಿರ್ವಹಣೆ ಬಗ್ಗೆಯೂ ಕಡತಗಳನ್ನು ಪರಿಶೀಲಿಸಿ, ಅವಕಾಶವಿದ್ದರೆ ಮೀನುಗಾರ ಸಂಘಕ್ಕೆ ಕೊಡಲಾಗುವುದು. ಕುಮಾರಸ್ವಾಮಿ ಸರಕಾರ ಬಡವರ, ಮೀನುಗಾರರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದರು.

ಶಾಸಕ ಕೆ. ರಘುಪತಿ ಭಟ್‌ ಮೀನುಗಾರರ ಸಮಸ್ಯೆ, ಬೇಡಿಕೆಗಳ ಕುರಿತು ವಿವರಿಸಿದರು. ಸಚಿವರು ಮೀನುಗಾರಿಕೆ ಜೆಟ್ಟಿ, ಸ್ಲಿಪ್‌ವೇಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮೀನುಗಾರರ ಪರವಾಗಿ ಸಚಿವ ರನ್ನು ಸಮ್ಮಾನಿ ಸಲಾಯಿತು. ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್‌ ಕುಂದರ್‌, ಮೀನು ಮಾರಾಟ ಫೆಡರೇಶನಿನ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ಮೀನುಗಾರಿಕಾ ನಿರ್ದೇಶಕ ಎಚ್‌. ಎಸ್‌. ವೀರಪ್ಪ ಗೌಡ, ಜಂಟಿ ನಿರ್ದೇಶಕ ದೊಡ್ಡಮನಿ, ಸಚಿವರ ಆಪ್ತ ಕಾರ್ಯದರ್ಶಿ ವಿರೂಪಾಕ್ಷ. ಜೆಡಿಎಸ್‌ ಜಿಲ್ಲಾಧ್ಯಕ್ಷ ಯೋಗೀಶ್‌ ಶೆಟ್ಟಿ, ಮೀನುಗಾರಿಕಾ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ರಸ್ತೆ ಸರಿಯಿಲ್ಲವೆಂದು ಬಂದರು ವೀಕ್ಷಣೆ ರದ್ದು!
ಪಡುಬಿದ್ರಿ: ಹೆಜಮಾಡಿ ಮೀನುಗಾರಿಕಾ ಜೆಟ್ಟಿ ವೀಕ್ಷಣೆಗೆ ಬಂದಿದ್ದ ಮೀನುಗಾರಿಕಾ ಸಚಿವ ವೆಂಕಟರಾವ್‌ ನಾಡಗೌಡ ಅವರ ವಾಹನ ಸಂಚರಿಸಲು ರಸ್ತೆ ಯೋಗ್ಯವಲ್ಲ ಎಂಬ ಕಾರಣಕ್ಕೆ ಬಂದರು ಪ್ರದೇಶ ವೀಕ್ಷಣೆ ರದ್ದಾಯಿತು. ಸಚಿವರು ಬರುವರೆಂದು ಮೀನುಗಾರಿಕಾ ರಸ್ತೆ ದುರಸ್ತಿ ತರಾತುರಿಯಲ್ಲಿ ಆರಂಭಿಸಲಾಗಿತ್ತು. ಪರೀಕ್ಷಾರ್ಥ ತೆರಳಿದ್ದ ಇಲಾಖೆ ವಾಹನ ಹೂತು ಹೋಗಿದ್ದರಿಂದ ಸಚಿವರನ್ನು ಬಂದರಿ ನಿಂದ 1.2 ಕಿ.ಮೀ. ಮೊದಲೇ ನಿಲ್ಲಿಸಿ ಅಲ್ಲೇ ಮನವಿ ಸಲ್ಲಿಕೆ, ಮಾತುಕತೆ ಗಳನ್ನು ನಡೆಸಲಾಯಿತು.

ಬಂದರು ರಸ್ತೆಗೆ ಕಾಂಕ್ರೀಟ್‌ ಹಾಕಲು ಎನ್‌ಸಿಆರ್‌ಎಂಪಿ ಯೋಜನೆಯಂತೆ 171 ಲಕ್ಷ ರೂ.ಗಳ ಕಾಮಗಾರಿಗೆ ಮಾಜಿ ಶಾಸಕ ವಿನಯ ಕುಮಾರ್‌ ಸೊರಕೆ ಗುದ್ದಲಿ ಪೂಜೆ ನಡೆಸಿದ್ದರು. ಚುನಾವಣೆ ಘೋಷಣೆಯಾದ್ದರಿಂದ ಕಾಮಗಾರಿ ನಡೆದಿರಲಿಲ್ಲ. ಬುಧವಾರ ಸಚಿವರು ಬರುತ್ತಾರೆಂದು ಮಣ್ಣು, ಜಲ್ಲಿ ಹುಡಿ ಹಾಕಿ ಸಮತಟ್ಟುಗೊಳಿಸಿ ರೋಲರ್‌ ಓಡಿಸಿದರೂ ಪ್ರಯೋಜನವಾಗಲಿಲ್ಲ.

ಟಾಪ್ ನ್ಯೂಸ್

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

rain

Tamil Nadu;ಸೈಕ್ಲೋನ್‌ ದುರ್ಬಲವಾದ್ರೂ ಭಾರೀ ಮಳೆ?

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

NItin Gadkari

2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್‌ ಸಂಗ್ರಹ: ಗಡ್ಕರಿ

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

rain

Tamil Nadu;ಸೈಕ್ಲೋನ್‌ ದುರ್ಬಲವಾದ್ರೂ ಭಾರೀ ಮಳೆ?

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.