ಕಾಡಾನೆ ದಾಳಿ: ರೈತನಿಗೆ ಗಾಯ, ಅಡಕೆ, ಬಾಳೆ ಬೆಳೆ ನಷ್ಟ
Team Udayavani, Jul 20, 2018, 12:01 PM IST
ಸಕಲೇಶಪುರ: ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬ ಗಾಯಗೊಂಡು, ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿರುವ ಘಟನೆ ತಾಲೂಕಿನ ಅಗನಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಹಾನುಬಾಳ್ ಹೋಬಳಿಯ ಗ್ರಾಮದಲ್ಲಿ ಬುಧವಾರ ಸಂಜೆ ಕಾಣಿಸಿಕೊಂಡ ಕಾಡಾನೆ, ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಶಿವರಾಜ್ ಅವರನ್ನು ಸೊಂಡಿಲಿನಿಂದ ಎಸೆದು ಗಾಯಗೊಳಿಸಿದೆ. ಈ ವೇಳೆ ಅಕ್ಕಪಕ್ಕದವರು ಜೋರಾಗಿ ಕೂಗಿಕೊಂಡಿದ್ದರಿಂದ ಕಾಡಾನೆ ಅಲ್ಲಿಂದ ಓಡಿ ಹೋಗಿದೆ. ಗಾಯಗೊಂಡ ಶಿವರಾಜ್‌ಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ಕಳುಹಿಸಲಾಗಿದೆ.
ಲಕ್ಷಾಂತರ ರೂ. ಮೌಲ್ಯದ ಬೆಳೆ ನಾಶ: ಶಿವರಾಜ್ ಅವರ ತೋಟ ಸೇರಿದಂತೆ ಗ್ರಾಮದ ಅಗನಿ ದೇವರಾಜ್ ಅವರ ಮನೆ ಕಾಡಾನೆ ದಾಳಿಯಿಂದ ಹಾನಿ ಗೀಡಾಗಿದೆ. ಕಾಫಿ, ಅಡಕೆ, ಬಾಳೆ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಬೆಳೆ ನಾಶವಾಗಿದೆ. ಹಾನುಬಾಳ್ ವ್ಯಾಪ್ತಿಯ ಅಚ್ಚನಹಳ್ಳಿ, ಅಗನಿ, ಬಿಳಿಸಾರೆ ಪ್ರದೇಶದಲ್ಲಿ ಕಾಡಾನೆಗಳ ಹಿಂಡೊಂದು ನೆಲೆಸಿದೆ. ಆಹಾರಕ್ಕಾಗಿ ಆಗಾಗ ದಾಂಧಲೆ ಮಾಡುತ್ತಲೇ ಇದೆ. ಜೊತೆಗೆ ಹೆತ್ತೂರು ಹೋಬಳಿ ವ್ಯಾಪ್ತಿಯಲ್ಲೂ ಆನೆಗಳ ದಾಳಿಯಿಂದ ಹಲವರ ಭತ್ತದ ಗದ್ದೆಗಳಲ್ಲಿ ಸಸಿ ಮಡಿಗಳನ್ನು ನಾಶ ಮಾಡಿದೆ. ಜೊತೆಗೆ ಕಾಫಿ ಮತ್ತು ಏಲಕ್ಕಿ ತೋಟಗಳಲ್ಲಿಯೂ ದಾಂಧಲೆ ನಡೆಸಿದೆ.
ಮಿತಿಮೀರಿದ ಮಳೆಯಿಂದಾಗಿ ರೈತರು ಒಂದು ಕಡೆ ಬೆಳೆ ನಷ್ಟ ಅನುಭವಿಸುತ್ತಿದ್ದರೆ, ಇದರ ಜೊತೆಗೆ ಕಾಡಾನೆಗಳ ಹಾವಳಿಯಿಂದ ಬೆಳೆನಾಶ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಕೂಡಲೇ ಸರ್ಕಾರ ಕಾಡಾನೆ ಹಾವಾಳಿ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು. ಜೊತೆಗೆ ಪರಿಹಾರ ವನ್ನೂ ಒದಗಿಸಬೇಕು ಎಂದು ರೈತರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.