ಕೆಬಿಸಿ ಕೈ ಶಾಸಕರಲ್ಲ, ಬಿಜೆಪಿ ಏಜೆಂಟ್‌


Team Udayavani, Jul 20, 2018, 1:03 PM IST

man.jpg

ಕೆ.ಆರ್‌.ಪೇಟೆ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ನಾಯಕ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವ ಕೆ.ಬಿ.ಚಂದ್ರಶೇಖರ್‌ ಕಾಂಗ್ರೆಸ್‌ ಮುಖಂಡರಲ್ಲ. ಅವರೊಬ್ಬ ಬಿಜೆಪಿ ಪಕ್ಷದ ಏಜೆಂಟ್‌ ಆಗಿದ್ದಾರೆ ಎಂದು ಶಾಸಕ ನಾರಾಯಣಗೌಡ ಗಂಭೀರ ಆರೋಪ ಮಾಡಿದರು.

ಗುರುವಾರ ಪಟ್ಟಣದಲ್ಲಿ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದೆರಡು ವಿಧಾನಸಭಾ ಚುನಾವಣೆಗಳಲ್ಲಿ ಜನರಿಂದ ತಿರಸ್ಕರಿಸಲ್ಪಟ್ಟಿರುವ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್‌ ಬುದ್ಧಿ ಭ್ರಮಣೆಯಾದವರಂತೆ ಹತಾಶೆಯಿಂದ ಮಾತನಾಡಿ ತಮ್ಮ ಸಣ್ಣತನ ಪ್ರದರ್ಶನ ಮಾಡುತ್ತಿದ್ದಾರೆ. ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿರುವ ಇವರಿಗೆ ಕಾಂಗ್ರೆಸ್‌ ಮುಖಂಡರು ಸೂಕ್ತ ಚಿಕಿತ್ಸೆ ಕೊಡಿಸಿ ಸರಿದಾರಿಗೆ ತರಬೇಕು. ಇಲ್ಲದಿದ್ದರೆ ನಾವೇ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಸೂಯೆ ಪ್ರದರ್ಶನ: ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಚಂದ್ರಶೇಖರ್‌ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಬಾಲಿಷತನದ ಮಾತುಗಳನ್ನಾಡಿದ್ದಾರೆ. ಕುಮಾರಸ್ವಾಮಿ ಅವರನ್ನು ಏಕವಚನದಲ್ಲಿ ನಿಂದಿಸುವ ಮೂಲಕ ತಮ್ಮೊಳಗಿನ ಕೆಟ್ಟತನ, ದ್ವೇಷ, ಅಸೂಯೆ ಪ್ರದರ್ಶಿಸಿದ್ದಾರೆ. ತಾಲೂಕಿನಲ್ಲಿ ಗೂಂಡಾಗಿರಿ ರಾಜಕಾರಣ ಅಂತ್ಯವಾಗಿದೆ. 18 ಸಾವಿರ ಮತಗಳ ಅಂತರದಲ್ಲಿ ಜೆಡಿಎಸ್‌ ಅಭ್ಯರ್ಥಿಯಾದ ತನ್ನನ್ನು ಗೆಲ್ಲಿಸಿ ವಿಜಯಮಾಲೆ ತೊಡಿಸಿದ ತಾಲೂಕಿನ ಪ್ರಜ್ಞಾವಂತ ಮತದಾರರು ದುಷ್ಟ ರಾಜಕಾರಣಿ ಗೂಂಡಾ ಚಂದ್ರಶೇಖರ್‌ಗೆ ಮನೆಯ ದಾರಿ ತೋರಿಸಿದ್ದಾರೆ. ಆದರೂ ಇನ್ನೂ ಅವರಿಗೆ ಬುದ್ಧಿ ಬಂದಿಲ್ಲ ಎಂದು ದೂಷಿಸಿದರು. 

ರಾಹುಲ್‌ ಬೆಂಬಲ: ಅಖೀಲ ಭಾರತ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ರಾಹುಲ್‌ಗಾಂಧಿ ಅವರೇ ಕುಮಾರಸ್ವಾಮಿ ಅವರ ದಕ್ಷ
ಆಡಳಿತ ಮೆಚ್ಚಿ ಐದು ವರ್ಷಗಳ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಅವಕಾಶ ನೀಡಿ ಬೇಷರತ್‌ ಬೆಂಬಲ ಘೋಷಿಸಿದ್ದಾರೆ. ಇನ್ನು ಚಂದ್ರಶೇಖರ್‌ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಜೆಡಿಎಸ್‌ ಮುಖಂಡರು ಹಾಗೂ ಕಾರ್ಯಕರ್ತರು ತಲೆಕೆಡಿಸಿಕೊಳ್ಳಬೇಕಾಗಿಲ್ಲ ಎಂದು ಆಕ್ರೋಶದಿಂದ ನುಡಿದರು.

10 ಸಾವಿರ ಜನರು ಭಾಗಿ: ಮಂಡ್ಯದಲ್ಲಿ ನಡೆಯಲಿರುವ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆಯುತ್ತಿರುವ ಜೆಡಿಎಸ್‌ ಕೃತಜ್ಞತಾ ಸಮಾವೇಶಕ್ಕೆ ತಾಲೂಕಿನಿಂದ 10 ಸಾವಿರಕ್ಕೂ ಹೆಚ್ಚಿನ ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ ಎಂದರು.

ಕೃಷ್ಣರಾಜ ಸಾಗರದಲ್ಲಿ ಕಾವೇರಿ ಮಾತೆಗೆ ಬಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಕಾರ್ಯಕರ್ತರು ಅಲ್ಲಿಂದ ನೇರವಾಗಿ ಮಂಡ್ಯ ನಗರದಲ್ಲಿ ನಡೆಯುವ ಕೃತಜ್ಞತಾ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದರು.

ಸಭೆಯಲ್ಲಿ ತಾಲೂಕು ಜೆಡಿಎಸ್‌ ಅಧ್ಯಕ್ಷ ವೆಂಕಟಸುಬ್ಬೇಗೌಡ, ಪುರಸಭೆ ಮಾಜಿ ಅಧ್ಯಕ್ಷ ಕೆ.ಟಿ.ಗಂಗಾಧರ್‌, ಜಿಪಂ ಮಾಜಿ ಅಧ್ಯಕ್ಷೆ ಜೆ.ಪ್ರೇಮಕುಮಾರಿ, ಜಿಪಂ ಸದಸ್ಯ ಎಚ್‌.ಟಿ.ಮಂಜು, ತಾಪಂ ಉಪಾಧ್ಯಕ್ಷ ಜಾನಕೀರಾಂ, ಕೆ.ಶ್ರೀನಿವಾಸ್‌, ಎಪಿಎಂಸಿ ಅಧ್ಯಕ್ಷ ಲೋಕೇಶ್‌, ಮಾಜಿ ಅಧ್ಯಕ್ಷ ಕೆ.ಎನ್‌.ಕೃಷ್ಣ, ರಾಮಚಂದ್ರನ್‌, ಕಿಕ್ಕೇರಿ ಹೋಬಳಿ ಜೆಡಿಎಸ್‌ ಅಧ್ಯಕ್ಷ ಕೆ.ಜೆ. ತಮ್ಮಣ್ಣ, ಬೂಕನಕೆರೆ ಹೋಬಳಿ ಅಧ್ಯಕ್ಷ ನಂದೀಶ್‌, ಶೀಳನೆರೆ ಹೋಬಳಿ ಅಧ್ಯಕ್ಷ ಸ್ವಾಮಿಗೌಡ, ಸಂತೇಬಾಚಹಳ್ಳಿ ಹೋಬಳಿ ಅಧ್ಯಕ್ಷ ಗೊರವಿ ಮಂಜೇಗೌಡ, ಅಕ್ಕಿಹೆಬ್ಟಾಳು ಹೋಬಳಿ ಅಧ್ಯಕ್ಷ ಸುಬ್ಬೇಗೌಡ, ಕಸಬಾ ಹೋಬಳಿಯ ಅಧ್ಯಕ್ಷ ವಸಂತಕುಮಾರ್‌ ಸೇರಿದಂತೆ ಸಾವಿರಾರು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

ಪುರಸಭೆ ಆಡಳಿತವನ್ನು ತನ್ನ ತೆಕ್ಕೆಯಲ್ಲಿಟ್ಟುಕೊಂಡು ಬಡಜನರನ್ನು ಹಿಂಸಿಸುತ್ತಿರುವ ಮಾಜಿ ಶಾಸಕ ಚಂದ್ರಶೇಖರ್‌ಗೆ ಮುಂಬರುವ ಪುರಸಭೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತೇನೆ. ಪುರಸಭೆ ಕಟ್ಟಡದ ಮೇಲೆ ಜೆಡಿಎಸ್‌ ಬಾವುಟ ಹಾರಿಸುತ್ತೇನೆ. 
 ನಾರಾಯಣಗೌಡ, ಶಾಸಕ

ಟಾಪ್ ನ್ಯೂಸ್

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2024: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

12-bng

Bengaluru: ಬೈಕ್‌ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು

11-fir

Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್‌ ದಾಖಲು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

10-darshan

Renukaswamy case: ದರ್ಶನ್‌ ವಿರುದ್ಧ ಸಾಕ್ಷ್ಯ “ಸೃಷಿ’: ವಕೀಲ ವಾದ

9-kottigehara

Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.