ಹಳಿ ತಪ್ಪಿದ ನವದೆಹಲಿಬೆಂಗಳೂರು ಎಕ್ಸ್‌ಪ್ರೆಸ್
Team Udayavani, Jul 21, 2018, 10:50 AM IST
ಕೆ.ಆರ್.ಪುರ: ನವದೆಹಲಿಯಿಂದ ಬೆಂಗಳೂರು ನಗರಕ್ಕೆ ಆಗಮಿಸುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್ ರೈಲು, ಶುಕ್ರವಾರ ಸಂಜೆ ಕೆ.ಆರ್.ಪುರ ರೈಲು ನಿಲ್ದಾಣದ ಬಳಿ ಹಳಿ ತಪ್ಪಿದ ಪರಿಣಾಮ ಕೆಲ ಕಾಲ ರೈಲುಗಳ ಸಂಚಾರಕ್ಕೆ ಅಡಚಣೆಯಾಗಿತ್ತು.
ಚಾಲಕನ ಸಮಯ ಪ್ರಜ್ಞೆಯಿಂದ ಕೂದಲೆಳೆ ಅಂತರದಲ್ಲಿ ಅನಾಹುತ ತಪ್ಪಿದ್ದು, ರೈಲು ಹಳಿ ತಪ್ಪಿದ್ದರಿಂದ ಚೆನ್ನೈಗೆ ತೆರಳಬೇಕಿದ್ದ ಹಲವು ರೈಲುಗಳ ಸಂಚಾರದಲ್ಲಿ ಕೆಲ ಗಂಟೆಗಳ ಕಾಲ ವಿಳಂಬವಾಯಿತು.
ಶುಕ್ರವಾರ ಮಧ್ಯಾಹ್ನ 1.45ಕ್ಕೆ ಬೆಂಗಳೂರು ತಲುಪಬೇಕಿದ್ದ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಕೆಲ ಕಾರಣಗಳಿಂದ ತಡವಾಗಿ ಆಗಮಿಸಿದ್ದು, ಸಂಜೆ 7 ಗಂಟೆ ವೇಳೆಗೆ ಕೆ.ಆರ್.ಪುರ ರೈಲು ನಿಲ್ದಾಣ ಸಮೀಪಿಸಿದೆ. ಈ ವೇಳೆ ರೈಲು ನಿಲ್ದಾಣ ಸಮೀಪದ ಕಸ್ತೂರಿ ನಗರದ ಬಳಿ ಮಾರ್ಗ ಬದಲಾಯಿಸುವ ಸಂದರ್ಭದಲ್ಲಿ ಇಂಜಿನ್ ಹಳಿ ತಪ್ಪಿದೆ. ಇದರಿಂದಾಗಿ ಕೆ.ಆರ್.ಪುರ ನಿಲ್ದಾಣ ಮಾರ್ಗವಾಗಿ ವಿವಿಧ ನಗರಗಳಿಗೆ ತೆರಳಬೇಕಿದ್ದ ಹಲವು ರೈಲುಗಳ ಸಾವಿರಾರು ಪ್ರಯಾಣಿಕರು ಸುಮಾರು ನಾಲ್ಕು ಗಂಟೆಗಳ ಕಾಲ ಪರದಾಡುವಂತಾಯಿತು.
ವಿಷಯ ತಿಳಿದು ರೈಲ್ವೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಕರ್ನಾಟಕ ಎಕ್ಸ್‌ಪ್ರೆಸ್ ರೈಲಿನ ಎಂಜಿನ್ ಬೇರ್ಪಡಿಸಿ, ಬೋಗಿಗಳನ್ನು ಮತ್ತೂಂದು ಎಂಜಿನ್‌ಗೆ ಜೋಡಿಸಿ ಪ್ರಯಾಣಿಕರನ್ನು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಕಳಿಸಿಕೊಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kundapura: ಹೆಮ್ಮಾಡಿ; 4 ರಸ್ತೆ ಸೇರುವಲ್ಲಿ ಒಂದೂ ತಂಗುದಾಣವಿಲ್ಲ!
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.