ಎಂ-ಸ್ಯಾಂಡ್ ಬಗ್ಗೆ ಜಾಗೃತಿ ಬೇಕು
Team Udayavani, Jul 21, 2018, 12:50 PM IST
ರಾಮನಗರ: ಪ್ರಸ್ತುತ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಗತ್ಯವಾಗಿರುವ ಮರಳಿಗೆ ಪರ್ಯಾಯವಾಗಿ ಬಳಕೆಯಾಗುತ್ತಿರುವ ಎಂ-ಸ್ಯಾಂಡ್ ಮತ್ತು ಮಲೇಷ್ಯಾರಾಷ್ಟ್ರದಿಂದ ಆಮದು ಮಾಡಿಕೊಳ್ಳುವ ಮರಳಿನ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ ಹೇಳಿದರು.
ತಾಲೂಕಿನ ಬಿಡದಿಯಲ್ಲಿರುವ ಎಂಎಸ್ ಐಎಲ್ ಮರಳು ಮಾರಾಟ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಎಂ-ಸ್ಯಾಂಡ್ ಮತ್ತು ಆಮದು ಮರಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಆದರೆ ಇವುಗಳ ಬಳಕೆ ಬಗ್ಗೆ ಜಾಗೃತಿ ಅಗತ್ಯ. ರಾಜ್ಯದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಗತ್ಯವಿರುವ ಮರಳಿಗೆ ಕೊರತೆ ಉಂಟಾಗಿದ್ದರಿಂದ ಮಲೇಷಿಯಾದಿಂದ ಮರಳು ಆಮದು ಮಾಡಿಕೊಳ್ಳಲು ಹಿಂದಿನ ಸರ್ಕಾರ ನಿರ್ಧರಿಸಿತ್ತು ಎಂದು ಹೇಳಿದರು.
ಬಿಡದಿಗೆ 4 ಸಾವಿರ ಟನ್ ಮಲೇಷ್ಯಾ ಮರಳು: ಇದುವರೆಗೆ 50 ಸಾವಿರ ಮೆಟ್ರಿಕ್‌ಟನ್ ಮಲೇಷ್ಯಾ ಮರಳನ್ನು ಆಮದು
ಮಾಡಿಕೊಳ್ಳಲಾಗಿದೆ. ಈ ಪೈಕಿ 4 ಸಾವಿರ ಮೆಟ್ರಿಕ್ ಟನ್ ಮರಳನ್ನು ಬಿಡದಿಯ ಮಾರಾಟ ಕೇಂದ್ರಕ್ಕೆ ಕೊಡಲಾಗಿದೆ. ಬಿಡದಿ ಕೇಂದ್ರದಲ್ಲಿ ಈವರೆಗೆ ಒಂದು ಸಾವಿರ ಮೆಟ್ರಿಕ್ ಟನ್ ಮರಳು ಮಾರಾಟವಾಗಿದೆ ಎಂದರು.
50 ಕೆ.ಜಿಗೆ 200 ರೂ.: ಮಲೇಷ್ಯಾದಿಂದ ಮರಳನ್ನು ಹಡಗುಗಳ ಮೂಲಕ ಆಂಧ್ರಪ್ರದೇಶದ ಕೃಷ್ಣಾಪಟ್ಟಣಂಗೆ
ತರಲಾಗಿತ್ತು. ಅಲ್ಲಿಯೇ 50 ಕೆ.ಜಿ ಮರಳಿನ ಚೀಲಗಳನ್ನು ಸಿದ್ಧಪಡಿಸಿ ರಾಜ್ಯದಲ್ಲಿ ಎಂಎಸ್ ಐಎಲ್ ಸ್ಥಾಪಿಸಿರುವ ಮಾರಾಟ ಕೇಂದ್ರಗಳಿಗೆ ರವಾನಿಸಲಾಗಿದೆ. ಸದ್ಯ ಜಿಎಸ್‌ಟಿ ಮತ್ತು ಇಲಾಖೆಯ ರಾಜಧನ ಸೇರಿ 50 ಕೆ.ಜಿ ಮರಳಿನ ಚೀಲಕ್ಕೆ 200 ರೂ. ದರ ನಿಗದಿಯಾಗಿದೆ ಎಂದು ಮಾಹಿತಿ ನೀಡಿದರು.
ಕಳೆದ ಜನವರಿಯಲ್ಲಿ ಬಿಡದಿಯಲ್ಲಿ ಮರಳು ಮಾರಾಟ ಕೇಂದ್ರ ಆರಂಭವಾಗಿದೆ. ನಂತರ ಚುನಾವಣೆ ಬಂದಿದ್ದರಿಂದ ಹೆಚ್ಚು
ಮರಳು ಮಾರಾಟವಾಗಿಲ್ಲ. ಆದರೆ ಆಮದು ಮರಳಿಗೆ ಬೇಡಿಕೆ ಇದೆ ಎಂದರು. ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಹಾಗೂ ಬಿಡದಿ ಪುರಸಭಾ ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಸುದ್ದಿಗಾರರು ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಮಾಹಿತಿ ಪಡೆದು ಪರಿಶೀಲಿಸುವುದಾಗಿ ತಿಳಿಸಿದರು.
ಮೈಸೂರು ಮಿನರಲ್ಸ… ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ನವೀನ್‌ರಾಜ್ ಸಿಂಗ್, ಸಿ.ಟಿ.ಪುಟ್ಟಸ್ವಾಮಿ, ಗಣಿ ಇಲಾಖೆಯ
ಉಪನಿರ್ದೇಶಕಿ ಲಲಕ್ಷ್ಮಮ್ಮ, ತಾಲೂಕು ಪಂಚಾಯಿತಿ ಸದಸ್ಯ ಗಾಣಕಲ್ ನಟರಾಜು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.