ಪ್ರವಾಹ ಎದುರಾಗದು; ಆತಂಕ ಬೇಡ

Team Udayavani, Jul 21, 2018, 5:34 PM IST

21-july-21.jpg

ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ನದಿಗಳಿಗೆ ಅಪಾರ ಪ್ರಮಾಣ ನೀರು ಬರುತ್ತಿದೆ. ಹಿಪ್ಪರಗಿ ಬ್ಯಾರೇಜ್‌ ಮೂಲಕ ಹೆಚ್ಚಿನ ನೀರನ್ನು ಆಲಮಟ್ಟಿಗೆ ಹರಿಬಿಡಲಾಗುತ್ತಿದೆ ಇದರಿಂದ ಪ್ರವಾಹ ಎದುರಾಗುವುದಿಲ್ಲ. ನದಿ ತೀರದ ಜನರು ಧೈರ್ಯವಾಗಿ ಇರಬೇಕು ಎಂದು ಜಿಲ್ಲಾಧಿಕಾರಿ ಜಿಯಾವುಲ್ಲಾ ಹೇಳಿದರು. ಶುಕ್ರವಾರ ಕೃಷ್ಣಾ ಮತ್ತು ಉಪನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬಂದಿರುವ ಹಿನ್ನೆಲೆಯಲ್ಲಿ ಕೃಷ್ಣಾ ತೀರದ ಮಾಂಜರಿ, ಯಡೂರ ಮತ್ತು ಇಂಗಳಿ ಗ್ರಾಮಗಳಿಗೆ ಭೇಟಿ ನದಿ ನೀರಿನ ಹರಿವು ಅವಲೋಕಿಸಿ ಅವರು ಮಾತನಾಡಿದರು.

ಪ್ರತಿ ವರ್ಷ ಮುಂಗಾರಿನ ಹಂಗಾಮಿನಲ್ಲಿ ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇದರಿಂದ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬರುವುದರಿಂದ ಚಿಕ್ಕೋಡಿ ಉಪವಿಭಾಗದಲ್ಲಿ ಸಂಭವನೀಯ ಪ್ರವಾಹ ಎದುರಾಗುತ್ತದೆ. ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದರು. 

ಕೃಷ್ಣಾ ಮತ್ತು ಉಪನದಿಗಳಿಗೆ ಈಗಾಗಲೇ 1.81 ಲಕ್ಷ ಕ್ಯುಸೆಕ್‌ ನೀರು ಹರಿದು ಬರುತ್ತಿದೆ. ಹಿಪ್ಪರಗಿ ಬ್ಯಾರೇಜ ಮೂಲಕ 2.2 ಲಕ್ಷ ಕ್ಯುಸೆಕ್‌ ನೀರನ್ನು ಆಲಮಟ್ಟಿಗೆ ಹರಿಬಿಡುವುದರಿಂದ ಪ್ರವಾಹ ಎದುರಾಗುವ ಸಾಧ್ಯತೆ ಕಡಿಮೆ ಇದೆ. ಒಂದು ವೇಳೆ ನದಿಗಳಿಗೆ ನೀರಿನ ಪ್ರಮಾಣ ಹೆಚ್ಚಾದರೆ ಜನರಿಗೆ ಸುರಕ್ಷಿತ ಸ್ಥಳಗಳನ್ನು ಗುರ್ತಿಸಲಾಗಿದೆ. ಮತ್ತು ತಗ್ಗು ಪ್ರದೇಶದಲ್ಲಿ ವಾಸ ಮಾಡುವ ಕಟುಂಬಗಳು ಸುರಕ್ಷಿತ ಸ್ಥಳಗಳಿಗೆ ಬರಬೇಕೆನ್ನುವ ಸೂಚನೆಯನ್ನು ತಾಲೂಕಾಡಳಿತ ನೀಡಿದೆ. ಸೇತುವೆ ಹತ್ತಿರ ಇರುವ ರಸ್ತೆಗಳಲ್ಲಿ ಜನರು ನದಿಗಳ ಹತ್ತಿರ ಬರದಂತೆ ಪೊಲೀಸ್‌ ಪಡೆ ನಿಯೋಜನೆ ಮಾಡಲಾಗಿದೆ ಎಂದರು.

ಚಿಕ್ಕೋಡಿ ತಾಲೂಕಿನ ಯಡೂರ, ಮಾಂಜರಿ ಮತ್ತು ಇಂಗಳಿ ಪ್ರದೇಶಗಳಲ್ಲಿ ದೋಣಿ ವ್ಯವಸ್ಥೆ ಕಲ್ಪಿಸಲಾಗಿದೆ. ದೋಣಿ ಇದೆಯೆಂದು ಅನಾವಶ್ಯಕವಾಗಿ ಯಾರೂ ದೋಣಿಯಲ್ಲಿ ಓಡಾಟ ಮಾಡಬಾರದು. ನದಿಗಳಲ್ಲಿ ನೀರಿನಲ್ಲಿ ಮತ್ತಷ್ಟು ಏರಿಕೆ ಕಂಡು ಬಂದರೆ ಜನರನ್ನು ಸ್ಥಳಾಂತರ ಮಾಡುವುದಾದರೆ ಅವರಿಗೆ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸುವಲ್ಲಿ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಂಡಿದೆ ಎಂದರು.

ಈ ಸಂದರ್ಭದಲ್ಲಿ ಜಿಪಂ ಸಿಇಒ ರಾಮಚಂದ್ರನ್‌, ಎಸ್‌ಪಿ ಸುಧೀರಕುಮಾರ ರೆಡ್ಡಿ, ಉಪವಿಭಾಗಾಧಿ ಕಾರಿ ಗೀತಾ ಕೌಲಗಿ, ತಹಶೀಲ್ದಾರ ಸಿ.ಎಸ್‌.ಕುಲಕರ್ಣಿ ಇದ್ದರು. 

ಟಾಪ್ ನ್ಯೂಸ್

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.