ಡಂಪಿಂಗ್‌ ಯಾರ್ಡ್‌ ಆದ ಮಲ್ಪೆ ಕೊಳದ ರಸ್ತೆ 


Team Udayavani, Jul 23, 2018, 6:00 AM IST

2207mle1.jpg

ಮಲ್ಪೆ: ತ್ಯಾಜ್ಯ ಸಮಸ್ಯೆ ದಿನೇ ದಿನೇ ತೀವ್ರವಾಗುತ್ತಿದ್ದು, ಮಲ್ಪೆ ಕೊಳ ಮಾರ್ಗದ ಕೊರೆನೆಟ್‌ ಕ್ಯಾನಿಂಗ್‌ ಕಂಪೆನಿಯ ಸಮೀಪದ ರಸ್ತೆಯ ಬದಿ ಯಲ್ಲೂ ತ್ಯಾಜ್ಯದ ಗುಡ್ಡವೇ ಇದ್ದು ಆತಂಕಕ್ಕೆ ಕಾರಣವಾಗಿದೆ. 
 
ಕೋಳಿತ್ಯಾಜ್ಯ, ತರಕಾರಿ ಮೊಟ್ಟಿಗಳ ತ್ಯಾಜ್ಯ, ಪ್ಲಾಸ್ಟಿಕ್‌ ಸೇರಿದಂತೆ ನಾನಾ ರೀತಿಯ ಕಸಗಳನ್ನು ಪೇಟೆಯಲ್ಲಿರುವ ಅಂಗಡಿ ಹೊಟೇಲಿನವರು ಇಲ್ಲಿ ತಂದು ಎಸೆಯುವುದರಿಂದ ತ್ಯಾಜ್ಯರಾಶಿ ಬೃಹದಾಕಾರವಾಗಿ ಬೆಳೆಯುತ್ತ ಹೋಗುತ್ತಿದೆ. ತ್ಯಾಜ್ಯ ರಾಶಿಯಲ್ಲಿರುವ ಕರಗದ ಪ್ಲಾಸ್ಟಿಕ್‌ಗಳು ದನಕರುಗಳ ಆಹಾರವಾಗುತ್ತಿದೆ. ಈಗ ಮಳೆ ಸಂದರ್ಭ ಸೊಳ್ಳೆಗಳು ಉತ್ಪತ್ತಿ ಯಾಗುವುದರಿಂದ ಪರಿಸರದ ಜನರಿಗೆ ಸಾಂಕ್ರಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ.

ಬೀದಿ ನಾಯಿಗಳ ಕಾಟ..
ತ್ಯಾಜ್ಯದಿಂದಾಗಿ ಸಾಕಷ್ಟು ದುರ್ಗಂಧ ಸುತ್ತಮುತ್ತಲಿನ ಪರಿಸರದಲ್ಲಿ ಹರಡಿದ್ದು ನಡೆದಾಡಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಕೊಳೆತ ತ್ಯಾಜ್ಯಗಳನ್ನು ಕಾಗೆಗಳು ತಿನ್ನಲು ಎಳೆದಾಡಿ ಪರಿಸ್ಥಿತಿ ಉಲ್ಬಣಿಸಲು ಕಾರಣವಾಗಿದೆ. ನಾಯಿಗಳು ಆಹಾರ ಹುಡುಕುತ್ತಾ ತ್ಯಾಜ್ಯಗಳನ್ನು ಎಳೆದಾಡುತ್ತಿದ್ದು ಒಂದಕ್ಕೊಂದು ಜಗಳವಾಗುತ್ತಿರುವುದು ಈ ದಾರಿಯಲ್ಲಿ ಸಾಗಲು ಭೀತಿ ಉಂಟಾಗಿದೆ. 

ಎರಡು ಮೂರು ದಿನಕ್ಕೆ ಕಸವನ್ನು ತೆರವುಗೊಳಿಸಿದರೂ ತೆರವುಗೊಂಡ ಮಾರನೇ ದಿನವೇ ಅಷ್ಟೆ ಎತ್ತರದಲ್ಲಿ ಕಸದ ರಾಶಿ ಪ್ರತ್ಯಕ್ಷವಾಗುವುದು ಆಡಳಿತಕ್ಕೆ ತಲೆನೋವಾಗಿದೆ. ಇಲ್ಲಿನ ಕೇವಲ ಸ್ಥಳೀಯ ಅಂಗಡಿ, ಹೋಟೇಲಿನವರು ಮಾತ್ರ ಅಲ್ಲ. ಹೊರಗಿನವರೂ ರಾತ್ರಿ ಹೊತ್ತಲ್ಲಿ ಬಂದು ಕಸವನ್ನು ಬಿಸಾಡಿ ಹೋಗುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

 ನಗರಸಭೆ ಕಠಿನ ಕ್ರಮ ಕೈಗೊಳ್ಳಲಿ
ಹೊರವಲಯದ ಜನರು ಬಂದು ಇಲ್ಲಿ ಗೋಣಿ ಚೀಲದಲ್ಲಿ ತಂದು ಎಸೆಯುತ್ತಾರೆ. ಇಲ್ಲಿ ನಾಯಿಗಳ ಕಾಟ ಹೆಚ್ಚಾಗಿದೆ. ರಸ್ತೆ ಬದಿ ತ್ಯಾಜ್ಯ ಎಸೆಯುವವರ ವಿರುದ್ದ ನಗರಸಭೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಈ ಭಾಗದಲ್ಲಿ ಕಸ ಎಸೆಯದಂತೆ ಆ ಜಾಗವನ್ನು ಸ್ವಚ್ಚಗೊಳಿಸಿ ಪರ್ಯಾಯ ವ್ಯವಸ್ಥೆಯನ್ನು ಮಾಡಬೇಕಾಗಿದೆ.
– ಮಂಜು ಕೊಳ ,ಸ್ಥಳೀಯರು

ಟಾಪ್ ನ್ಯೂಸ್

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.