ದೇಸಾಯಿ ಮತ್ತೆ ಬಂದರು


Team Udayavani, Jul 23, 2018, 11:24 AM IST

harshika-3.jpg

ನಿರ್ದೇಶಕ ಸುನೀಲ್‌ಕುಮಾರ್‌ ದೇಸಾಯಿ  ಅವರು ಈ ಹಿಂದೆ “ರೇ’ ಎಂಬ ಚಿತ್ರ ಮಾಡಿದ್ದರು. ಅದಾದ ಬಳಿಕ ಅವರು ಯಾವ ಸಿನಿಮಾ ಮಾಡುತ್ತಾರೆ ಎಂಬ ಪ್ರಶ್ನೆ ಸಹಜವಾಗಿಯೇ ಇತ್ತು. ಹಾಗೆಯೇ, “ಚಿಟ್ಟೆ’ ಚಿತ್ರದ ನಂತರ ಹರ್ಷಿಕಾ ಪೂಣಚ್ಚ ಕೂಡ ಮುಂದೆ ಯಾವ ಚಿತ್ರಕ್ಕೆ ಸಹಿ ಹಾಕಿದ್ದಾರೆ ಎಂಬ ಪ್ರಶ್ನೆ ಇತ್ತು.

ಈಗ ಇಬ್ಬರೂ ಸೇರಿ ಸದ್ದಿಲ್ಲದೆಯೇ ಒಂದು ಸಿನಿಮಾ ಮಾಡಿ ಮುಗಿಸಿದ್ದಾರೆ. ಸುನೀಲ್‌ಕುಮಾರ್‌ ದೇಸಾಯಿ ನಿರ್ದೇಶನದಲ್ಲಿ ಹರ್ಷಿಕಾ ಪೂಣಚ್ಚ ನಾಯಕಿಯಾಗಿ ನಟಿಸಿರುವುದು ಈ ಹೊತ್ತಿನ ವಿಶೇಷ. ಆ ಚಿತ್ರಕ್ಕೆ “ಉದ್ಘರ್ಷ’ ಎಂದು ಹೆಸರಿಡಲಾಗಿದೆ. “ನಿಷ್ಕರ್ಷ’ ಸುನೀಲ್‌ಕುಮಾರ್‌ ದೇಸಾಯಿ ಅವರ ಸೂಪರ್‌ ಹಿಟ್‌ ಚಿತ್ರ.

ಈಗ ಅವರು “ಉದ್ಘರ್ಷ’ ಚಿತ್ರವನ್ನು ಸಂಪೂರ್ಣ ಮುಗಿಸಿ, ಪ್ರೇಕ್ಷಕರ ಮುಂದೆ ತರಲು ಅಣಿಯಾಗುತ್ತಿದ್ದಾರೆ. ಒಂದು ದಿನ ಇದ್ದಕ್ಕಿದ್ದಂತೆಯೇ ಹರ್ಷಿಕಾ ಪೂಣಚ್ಚ ಅವರಿಗೆ ಸುನೀಲ್‌ ಕುಮಾರ್‌ ದೇಸಾಯಿ ಅವರು ಫೋನ್‌ ಮಾಡಿ, ನಾಳೆಯಿಂದ ಚಿತ್ರೀಕರಣವಿದೆ. ಬಂದು ಬಿಡಮ್ಮಾ ಅಂದಿದ್ದಾರೆ.

ನನ್ನ ಪಾತ್ರಕ್ಕೆ ನೀನು ಸರಿ ಹೊಂದುತ್ತೀಯ ಅಂದಾಗ, ಹರ್ಷಿಕಾ ಕಥೆಯ ಒನ್‌ಲೈನ್‌ ಕೇಳಿದ್ದೇ ತಡ, ಗ್ರೀನ್‌ಸಿಗ್ನಲ್‌ ಕೊಟ್ಟಿದ್ದಾರೆ. ಸುಮಾರು ಹತ್ತು ದಿನಗಳವರೆಗೆ ಹರ್ಷಿಕಾ ತನ್ನ ಭಾಗದ ಪಾತ್ರ ನಿರ್ವಹಿಸಿ ಬಂದಿದ್ದಾರೆ. ಹರ್ಷಿಕಾ ಅವರಿಲ್ಲಿ, ತುಂಬಾನೇ ಬೋಲ್ಡ್‌ ಆಗಿರುವಂತಹ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರಂತೆ.

ಅಂದಹಾಗೆ, ಈ ಚಿತ್ರಕ್ಕೆ ‘ಸಿಂಗಂ 3’ ಖ್ಯಾತಿಯ ಅನೂಪ್‌ ಠಾಕೂರ್‌ ಸಿಂಗ್‌ ಹೀರೋ ಆಗಿ ನಟಿಸಿದ್ದಾರೆ. ಇನ್ನು, ಕಿಶೋರ್‌ ಅವರು ಹರ್ಷಿಕಾ ತಂದೆಯಾಗಿ ನಟಿಸಿದ್ದಾರೆ. ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರವಾಗಿದ್ದು,  ಪುನಃ ದೇಸಾಯಿ ಅವರು ಗೆಲುವಿನ ಸೂತ್ರ ಹಿಡಿದು ಬಂದಿದ್ದಾರೆ. ಕೇರಳ, ಕೊಡಗು, ಬೆಂಗಳೂರು ಸೇರಿದಂತೆ ಇತರೆಡೆ ಚಿತ್ರೀಕರಣಗೊಂಡಿದೆ.

ಚಿತ್ರದಲ್ಲಿ ಕಬೀರ್‌ ದುಹಾನ್‌ ಅವರು ಖಳನಟರಾಗಿ ಕಾಣಿಸಿಕೊಂಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಸುನೀಲ್‌ಕುಮಾರ್‌ ದೇಸಾಯಿ ಅವರ ಈ “ಉದ್ಘರ್ಷ’ ಡಿಸೆಂಬರ್‌ ಹೊತ್ತಿಗೆ ಬಿಡುಗಡೆಯಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.