ಕಡಬ ಸರಕಾರಿ ಪದವಿಪೂರ್ವ ಕಾಲೇಜು ಕಟ್ಟಡ ಕುಸಿತ
Team Udayavani, Jul 23, 2018, 12:08 PM IST
ಕಡಬ : ಸಂಪೂರ್ಣವಾಗಿ ಶಿಥಿಲಗೊಂಡು ಕುಸಿಯುವ ಭೀತಿ ಎದುರಿಸುತ್ತಿದ್ದ ಕಡಬ ಸರಕಾರಿ ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಹಳೆಯ ಕಟ್ಟಡದ ಗೋಡೆ ಛಾವಣಿ ಸಹಿತ ಕುಸಿದು ಬಿದ್ದಿದೆ. ಶನಿವಾರ ಘಟನೆ ಸಂಭವಿಸಿದ್ದು, ಕಟ್ಟ ಡದ ಮರಮಟ್ಟು, ಹೆಂಚುಗಳು ನಾಶವಾಗಿ ಅಪಾರ ನಷ್ಟವೂ ಸಂಭವಿಸಿದೆ. ಕಟ್ಟಡ ಶಿಥಿಲಗೊಂಡು ಕುಸಿಯುವ ಭೀತಿ ಎದುರಿಸುತ್ತಿತ್ತು. ಮುನ್ಸೂಚನೆ ಅರಿತುಕೊಂಡು ವಿದ್ಯಾರ್ಥಿಗಳನ್ನು ಬೇರೆ ತರಗತಿ ಕೊಠಡಿಗಳಿಗೆ ಈ ಮೊದಲೇ ಸ್ಥಳಾಂತರಿಸಲಾಗಿತ್ತು. ಕಾಲೇ ಜಿ ನಲ್ಲಿ ತರಗತಿ ಕೊಠಡಿಗಳ ಕೊರತೆ ಇದೆ. ಈ ನಡುವೆ ಕಟ್ಟಡ ಕುಸಿದಿರುವುದರಿಂದ ಮತ್ತಷ್ಟು ಸಮಸ್ಯೆ ಎದುರಾಗಿದೆ. ಕುಸಿದಿರುವ ಹಳೆಯ ಕಟ್ಟಡವನ್ನು ನೆಲ ಸಮಗೊಳಿಸಿ ಸುಸಜ್ಜಿತ ನೂತನ ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಅಪಾಯ ಸನ್ನಿವೇಶ ಅರಿವಿತ್ತು!
ಕಾಲೇಜಿನ ಶಿಥಿಲ ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಯಾವುದೇ ಕ್ಷಣದಲ್ಲಿ ಕಟ್ಟಡ ಕುಸಿದು ಬಿದ್ದು ವಿದ್ಯಾರ್ಥಿಗಳಿಗೆ ಅಪಾಯ ಸಂಭವಿಸಬಹುದಾದ ಸಾಧ್ಯತೆ ಗಳಿರುವ ಕುರಿ ತು ಮಾಧ್ಯಮಗಳು ಈ ಹಿಂದೆಯೇ ಸಚಿತ್ರ ವರದಿಗಳನ್ನು ಪ್ರಕಟಿಸಿ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನ ಸೆಳೆಯುವ ಪ್ರಯತ್ನ ನಡೆಸಿದ್ದವು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್ ಹಾಗೂ ಜಿ.ಪಂ. ಎಂಜಿನಿಯರ್ ಭರತ್ ಅವರು ಕಟ್ಟಡದ ಪರಿಶೀಲನೆಯನ್ನೂ ನಡೆಸಿದ್ದರು.
ಹರಾಜಿಗೆ ಅಂದಾಜು ಪಟ್ಟಿ
ಕಡಬ ಸರಕಾರಿ ಪ.ಪೂ. ಕಾಲೇಜಿನ ಹಳೆಯ ಕಟ್ಟಡದ ಗೋಡೆ ಬಿರುಕುಬಿಟ್ಟ ಕಾರಣದಿಂದ ಸ್ಥಳ ಪರಿಶೀಲನೆ ನಡೆಸಿ ಮುಂಜಾಗರೂಕತಾ ಕ್ರಮವಾಗಿ ವಿದ್ಯಾರ್ಥಿಗಳನ್ನು ಬೇರೆಡೆ ಸ್ಥಳಾಂತರಿಸುವಂತೆ ಸೂಚಿಸಲಾಗಿತ್ತು. ಕಟ್ಟಡ ಕುಸಿಯುವ ಭೀತಿ ಇದ್ದುದರಿಂದ ಕಟ್ಟಡವನ್ನು ನೆಲಸಮಗೊಳಿಸಿ ಸಾಮಗ್ರಿಗಳನ್ನು ಹರಾಜು ಮಾಡಲು 50 ಸಾವಿರ ರೂ.ಗಳ ಅಂದಾಜು ಪಟ್ಟಿ ತಯಾರಿಸಿ ನೀಡಲಾಗಿದೆ. ಕಾಲೇಜಿನ ಪ್ರಾಂಶುಪಾಲರು ಮುಂದಿನ ಕ್ರಮ ಕೈಗೊಳ್ಳಬೇಕಿದೆ.
- ಭರತ್,
ಜಿ.ಪಂ. ಎಂಜಿನಿಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.