ಎಲ್ಲ ಜಿಲ್ಲೆಗಳಲ್ಲೂ ಚಿತ್ರೋತ್ಸವ
Team Udayavani, Jul 23, 2018, 4:51 PM IST
ಧಾರವಾಡ: ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸದಭಿರುಚಿಯ ಚಿತ್ರಗಳನ್ನು ಆಧರಿಸಿ ಚಲನಚಿತ್ರೋತ್ಸವ ಆಯೋಜಿಸುವ ಯೋಜನೆ ಇದೆ ಎಂದು ಕರ್ನಾಟಕ ರಾಜ್ಯ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ನಾಗತಿಹಳ್ಳಿ ಚಂದ್ರಶೇಖರ ಹೇಳಿದರು.
ನಗರದ ಸೃಜನಾ ರಂಗಮಂದಿರದಲ್ಲಿ ಕರ್ನಾಟಕ ಮಹಾವಿದ್ಯಾಲಯವು ಶತಮಾನೋತ್ಸವ ವರ್ಷಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕೆಸಿಡಿ ಸಿನಿಸಪ್ತಕ ಚಲನಚಿತ್ರೋತ್ಸವ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಚಲನಚಿತ್ರೋತ್ಸವದ ಮೂಲಕ ಸದಭಿರುಚಿ ಚಿತ್ರಗಳಿಗೆ ಪ್ರೋತ್ಸಾಹ ಹಾಗೂ ಪ್ರೇಕ್ಷಕರತ್ತ ಚಿತ್ರಗಳನ್ನು ಒಯ್ಯುವ ಕೆಲಸ ಮಾಡುವ ಚಿಂತನೆ ಇದೆ ಎಂದರು.
ಸಾಮಾಜಿಕ ಜಾಲತಾಣಗಳು ಸಮಾಜದ ಸಾಮರಸ್ಯ ಹಾಳು ಮಾಡುತ್ತಿವೆ. ಸಾಮಾಜಿಕ ತಾಣಗಳು ಅಣು ಬಾಂಬ್ ತರಹ ಇಡೀ ಸಮಾಜವನ್ನು ನಿಷ್ಕ್ರಿಯಗೊಳಿಸುವ ಸುಳ್ಳು ಸುದ್ದಿ ಮತ್ತು ನಕಾರಾತ್ಮಕ ಸಂಗತಿಗಳನ್ನು ಹಬ್ಬಿಸುವ ಮೂಲಕ ಸಮಾಜದಲ್ಲಿ ಕೋಮು ಸೌಹಾರ್ದತೆ ಕೆಡಿಸುತ್ತಿವೆ ಎಂದು ಹೇಳಿದರು.
ವಿದ್ಯಾರ್ಥಿಗಳು ತಂತ್ರಜ್ಞಾನ ಆಧಾರಿತ ಸಾಮಾಜಿಕ ಜಾಲತಾಣಗಳನ್ನು ಸಮರ್ಪಕವಾಗಿ ಜ್ಞಾನ ವಿಷಯಗಳನ್ನು ಅರಿಯಲು ಬಳಸಿಕೊಳ್ಳಬೇಕು ಮತ್ತು ಓದಿನ ಕಡೆಗೆ ಹೆಚ್ಚು ಗಮನ ನೀಡಬೇಕು ಎಂದು ಸಲಹೆ ನೀಡಿದರು. ಬೆಳಗಾವಿ ಸಂಸದ ಸುರೇಶ ಅಂಗಡಿ ಮಾತನಾಡಿ, ವಿದ್ಯಾರ್ಥಿ ಸಮುದಾಯ ದೇಶದ ಇತಿಹಾಸ ಅರಿಯಬೇಕು. ಮುಂದಿನ ದಿನಗಳಲ್ಲಿ ಕೃಷಿ ವಲಯಕ್ಕೆ ಹೆಚ್ಚು ಪ್ರಾಧ್ಯಾನತೆ ಸಿಗಲಿದೆ ಎಂದರು. ಕವಿವಿ ಕುಲಪತಿ ಪ್ರೊ| ಪ್ರಮೋದ ಗಾಯಿ ಮಾತನಾಡಿದರು. ಕರ್ನಾಟಕ ಕಾಲೇಜಿನ ಹಳೆಯ ವಿದ್ಯಾರ್ಥಿನಿ ಸಂಗೀತಾ ಕಟ್ಟಿ ಗಾಯನ ನಡೆಯಿತು. ಮಾಜಿ ಶಾಸಕ ಚಂದರಕಾಂತ ಬೆಲ್ಲದ, ರಂಗಕರ್ಮಿ ಯಶವಂತ ಸರದೇಶಪಾಂಡೆ, ಚಿತ್ರ ನಿರ್ಮಾಪಕ ಕೆ.ಎಂ. ನಂಜೇಗೌಡ ಮತ್ತು ಸತೀಶ, ಪ್ರಾಚಾರ್ಯರಾದ ಡಾ|ರಾಜೇಶ್ವರಿ ಮಹೇಶ್ವರಯ್ಯ, ಡಾ|ಸಿ. ಎಫ್. ಮೂಲಿಮನಿ, ಡಾ|ನಂದಾ ಪಾಟೀಲ, ಡಾ|ಎಸ್.ಆರ್ ಗಣಿ, ಡಾ| ಅರುಣಾ ಹಳ್ಳಿಕೇರಿ ಇದ್ದರು. ಸಮಾರೋಪ ಕಾರ್ಯಕ್ರಮದ ನಂತರ 22 ಜುಲೈ 1947 ಎಂಬ ಚಲನಚಿತ್ರ ಪ್ರದರ್ಶಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.