ಸಂವಿಧಾನಕ್ಕೆ ತುಳು: ಪೂರಕ ಪ್ರಯತ್ನ : ಡಾ| ಜಯಮಾಲಾ ಭರವಸೆ
Team Udayavani, Jul 24, 2018, 11:16 AM IST
ಮಂಗಳೂರು: ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಸೇರ್ಪಡೆ ವಿಚಾರದಲ್ಲಿ ರಾಜ್ಯ ಕನ್ನಡ ಮತ್ತು ಸಂಸ್ಕೃತಿ
ಇಲಾಖೆ ಶ್ರಮಿಸಲಿದೆ. ಈ ನಿಟ್ಟಿನಲ್ಲಿ ಹಲವು ಕೆಲಸಗಳು ಆಗಬೇಕಿದ್ದು, ಪೂರಕ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ, ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಡಾ| ಜಯಮಾಲಾ ಭರವಸೆ ನೀಡಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಶ್ರಮಿಸಲು ತಾನು ಬದ್ಧಳಿದ್ದೇನೆ ಎಂದರು.
ಹೆಚ್ಚುವರಿ ಅನುದಾನ
ಭಾಷೆ, ಸಾಹಿತ್ಯ, ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಲಾಖೆ ಅಧೀನಕ್ಕೆ ಬರುವ ಅಕಾಡೆಮಿಗಳಿಗೆ 10 ಲಕ್ಷ ರೂ.
ಹೆಚ್ಚುವರಿ ಅನುದಾನ ನೀಡಲಾಗುವುದು. ಜತೆಗೆ ಅಕಾಡೆಮಿಗಳ ಕಾರ್ಯವೈಖರಿ ಬಗ್ಗೆ ಸಮೀಕ್ಷೆಯೂ ನಡೆಯಲಿದೆ ಎಂದರು.
ದಮನಿತ ಮಹಿಳೆಯರ ನೆಮ್ಮದಿಯ ಬದುಕು, ಪುನರ್ವಸತಿಗೆ ಶ್ರಮಿಸುತ್ತೇನೆ. ಕದ್ರಿಯ ಪುಟಾಣಿ ರೈಲು ಸಂಚಾರ ಆರಂಭಿಸಲು ಕ್ರಮ ಕೈಗೊಳ್ಳುತ್ತೇನೆ ಎಂದರು.
ಕೆಲಸಗಳೇ ಶ್ರೀರಕ್ಷೆ
ಇದಕ್ಕೆ ಮುನ್ನ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಜಯಮಾಲಾ, ಜಿಲ್ಲೆಯಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಕೆಲಸಗಳೇ ನಮಗೆಲ್ಲರಿಗೂ ಶ್ರೀರಕ್ಷೆ ಎಂದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮಾಜಿ ಸಚಿವರಾದ ಬಿ. ರಮಾನಾಥ ರೈ, ಕೆ. ಅಭಯಚಂದ್ರ ಜೈನ್, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ ವಿವಿಧ ಬೇಡಿಕೆಗಳನ್ನು ಸಚಿವರ ಮುಂದಿಟ್ಟರು. ಕಾಂಗ್ರೆಸ್ ಮುಖಂಡರಾದ ರಾಜಶೇಖರ ಕೋಟ್ಯಾನ್, ಪಿ.ವಿ. ಮೋಹನ್, ಮಮತಾ ಗಟ್ಟಿ, ಎಂ.ಎಸ್. ಮೊಹಮ್ಮದ್, ಸುರೇಶ್ ಬಲ್ಲಾಳ್, ಸದಾಶಿವ ಉಳ್ಳಾಲ, ಎನ್. ಎಸ್. ಕರೀಂ, ವಿಶ್ವಾಸ್ ಕುಮಾರ್ ದಾಸ್ ಎ.ಸಿ. ಭಂಡಾರಿ ಉಪಸ್ಥಿತರಿದ್ದರು.
ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಸ್ವಾಗತಿಸಿದರು. ಸಂತೋಷ್ ಕುಮಾರ್ ಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ
50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ
MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.