ಸಮಾಜದ ಒಳಿತಿಗೆ ಸ್ಪಂದಿಸುವ ಪತ್ರಕರ್ತರು: ಮುಂಡೋಡಿ


Team Udayavani, Jul 25, 2018, 12:09 PM IST

25-july-7.jpg

ಸುಳ್ಯ : ಪತ್ರಕರ್ತರು ಸಮಾಜದ ಆಗು-ಹೋಗುಗಳನ್ನು ಗಮನಿಸಿ, ವರದಿ ರೂಪದಲ್ಲಿ ಬಿತ್ತರಿಸುವ ಮೂಲಕ ಸಾಮಾಜಿಕ ನ್ಯಾಯ, ಸಮಾನತೆಗೆ ಸ್ಪಂದಿಸುತ್ತಾರೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು. ಅವರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಂಗಳವಾರ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಸಮ್ಮಾನ ಮತ್ತು ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮುದ್ರಣ ಅಥವಾ ದೃಶ್ಯ ಮಾಧ್ಯಮಗಳಲ್ಲಿ ವ್ಯಕ್ತಿ ಪರ ಸುದ್ದಿ ಬಂದಾಗ ಸಂಭ್ರಮಿಸುವ, ವಿರುದ್ಧ ಬಂದಾಗ ಸಿಟ್ಟಾಗುವ ಪ್ರವೃತ್ತಿ ಇದೆ. ವಾಸ್ತವವಾಗಿ ಪತ್ರಕರ್ತರಾದವರು ಪರ-ವಿರೋಧದ ಕಲ್ಪನೆ ಇಲ್ಲದೆ, ಸತ್ಯ, ನ್ಯಾಯದ ಪರಿಕಲ್ಪನೆಯಲ್ಲಿ ಧ್ವನಿಯಾಗಿ ಸಮಾಜದ ಒಳಿತಿಗೆ ಕೊಡುಗೆ ನೀಡುತ್ತಿದ್ದಾರೆ ಎಂದು ನುಡಿದರು.

ಪತ್ರಕರ್ತ ಜಿತೇಂದ್ರ ಕುಂದೇಶ್ವರ ಉಪನ್ಯಾಸ ನೀಡಿ, ಸುದ್ದಿಯ ಬೆನ್ನತ್ತಿ, ಸತ್ಯವನ್ನು ಸಮಾಜದ ಮುಂದಿಟ್ಟು ನ್ಯಾಯ ಒದಗಿಸಲು ಪತ್ರಕರ್ತರು ಪ್ರಯತ್ನಿಸುತ್ತಾರೆ ಎಂದರು. ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಖಾದರ್‌ ಶಾ, ನ್ಯಾಯವಾದಿ ದಿನೇಶ್‌ ಮಡಪ್ಪಾಡಿ, ಪತ್ರಕರ್ತರ ಸಂಘದ ಗೌರವಧ್ಯಕ್ಷ ಶರೀಫ್‌ ಜಟ್ಟಿಪಳ್ಳ, ಕೋಶಾಧಿಕಾರಿ ವಿಶ್ವನಾಥ ಮೋಟುಕಾನ ಉಪಸ್ಥಿತರಿದ್ದರು.

ತಾ|ಮಟ್ಟದ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕೃಷ್ಣಪ್ರಸಾದ್‌ ಕೋಲ್ಚಾರು ಬಹುಮಾನಿತರ ಪಟ್ಟಿ ವಾಚಿಸಿದರು. ಹಿರಿಯ ಪತ್ರಕರ್ತ ಹರೀಶ್‌ ಬಂಟ್ವಾಳ್‌ ಪ್ರಸ್ತಾವನೆಗೈದರು. ಪತ್ರಕರ್ತ ಜಯಪ್ರಕಾಶ್‌ ಕುಕ್ಕೇಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಹಸೈನಾರ್‌ ಜಯನಗರ ವಂದಿಸಿದರು. ಲೋಕೇಶ್‌ ಪೆರ್ಲಂಪಾಡಿ ನಿರೂಪಿಸಿದರು.

ಸಮ್ಮಾನ ಸಮಾರಂಭ
ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ ಅವರನ್ನು ಸಮ್ಮಾನಿಸಲಾಯಿತು. 28 ವರ್ಷ ಪತ್ರಕರ್ತರಾಗಿ ಹಾಗೂ 43 ವರ್ಷಗಳಿಂದ ಸಾಂಸ್ಕೃತಿಕ, ಸಾಹಿತ್ಯ ರಂಗದಲ್ಲಿ ಸಲ್ಲಿಸಿದ ಗಂಗಾಧರ ಮಟ್ಟಿ ಅವರ ಸೇವೆಯನ್ನು ಅತಿಥಿಗಳು ಶ್ಲಾಘಿಸಿದರು. ಚಿತ್ರಾ ಮಟ್ಟಿ ಅವರನ್ನೂ ಗೌರವಿಸಲಾಯಿತು. ಪತ್ರಕರ್ತ ದುರ್ಗಾಕುಮಾರ್‌ ನಾಯರ್‌ಕೆರೆ ಅಭಿನಂದನ ನುಡಿಗಳನ್ನಾಡಿದರು.

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.