ವಿಪಕ್ಷಗಳ ಒಗ್ಗಟ್ಟಿನಿಂದ ಬಿಜೆಪಿಗೆ ಹತಾಶೆ: ಬೈರೇಗೌಡ
Team Udayavani, Jul 25, 2018, 4:47 PM IST
ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ತೃತೀಯ ರಂಗಗಳೊಂದಿಗೆ ಕಾಂಗ್ರೆಸ್ ಹೊಂದಾಣಿಕೆಯೊಂದಿಗೆ ಸ್ಪರ್ಧಿಸಲು ಮುಂದಾಗಿರುವುದಕ್ಕೆ ಬಿಜೆಪಿಯವರು ಹತಾಶರಾಗಿದ್ದಾರೆ. ಹೀಗಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಮಟ್ಟದಲ್ಲಿ ವಿಪಕ್ಷಗಳೆಲ್ಲ ಒಂದುಗೂಡಿರುವುದು ಬಿಜೆಪಿಗೆ ನಡುಕ ಹುಟ್ಟಿ, ಧೃತಿಗೆಡುವಂತಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರು ತಮ್ಮ ಮಿತ್ರಪಕ್ಷಗಳಿಗೆ ನೀಡಿದ್ದ ಆಶ್ವಾಸನೆ, ಭರವಸೆ ಈಡೇರಿಸಿಲ್ಲ. ಆದ್ದರಿಂದ ಶಿವಸೇನೆ, ಟಿಡಿಪಿ, ಪಿಡಿಪಿ ಸೇರಿದಂತೆ ಬಿಜೆಪಿಯೊಂದಿಗೆ ಸಖ್ಯ ಬೆಳೆಸಿದ್ದ ಪಕ್ಷಗಳೆಲ್ಲವೂ ದೂರಾಗುತ್ತಿವೆ. ಅದರ ಶಕ್ತಿ ಕಡಿಮೆಯಾಗಿ, ಬಿಜೆಪಿ ಭವಿಷ್ಯ ಅನಿಶ್ಚಿತತೆಯಿಂದ ಕೂಡಿದೆ. 2019ರಲ್ಲಿ ಅದು ಅಧಿಕಾರಕ್ಕೆ ಬರುವಂತಹ ಅವಕಾಶಗಳು ದಿನೇ ದಿನೇ ಕ್ಷೀಣಿಸುತ್ತಿದೆ. ದೇಶದ ಜನರಿಗೆ ನೀಡಿದ್ದ ಭರವಸೆ ಈಡೇರಿಸುವಲ್ಲೂ ವಿಫಲವಾಗಿದೆ. ಬಿಜೆಪಿ ವಿರುದ್ಧ ರಾಷ್ಟ್ರಮಟ್ಟದಲ್ಲಿ ರಾಜಕೀಯ ಧೃವೀಕರಣ ಆರಂಭಗೊಂಡಿದ್ದು, ಪ್ರಧಾನಿ ಯಾರೆಂಬುದು ಮುಂದೆ ನಿರ್ಧಾರವಾಗಲಿದೆ ಎಂದರು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಸಂಸದ ಪ್ರಹ್ಲಾದ ಜೋಶಿ ಹಕ್ಕುಚ್ಯುತಿ ಮಂಡಿಸುವುದಿದ್ದರೆ ಮಂಡಿಸಲಿ. ಆ ಕುರಿತು ಸದನದಲ್ಲಿ ಸಮಗ್ರ ಚರ್ಚೆ ನಡೆಯಲಿ. ಬೆಂಗಳೂರಿನಲ್ಲಿ ಲಾಕರ್ ಪ್ರಕರಣಕ್ಕೆ ಸಂಬಂಧಿಸಿ ಆರೋಪಿತ ಅವಿನಾಶ ಅಮರಲಾಲ್ ರಾಜಕೀಯ ಪಕ್ಷಗಳ ಮುಖಂಡರ ಮಕ್ಕಳೊಂದಿಗೆ ನಂಟು ಹೊಂದಿದ್ದರ ಬಗ್ಗೆ ತನಿಖೆಯಾಗಲಿ. ಅದರ ಸತ್ಯಾಂಶ ಹೊರಗೆ ಬರಲಿ. ಅದಕ್ಕೂ ಮೊದಲು ಊಹಾಪೋಹ ಆಧಾರ ಮೇಲೆ ಇನ್ನೊಬ್ಬರ ಮೇಲೆ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ. ಸಮಗ್ರ ತನಿಖೆಯ ನಂತರ ತಪ್ಪಿತಸ್ಥರ ಮೇಲೆ ಸಂಬಂಧಪಟ್ಟವರು ನಿಷ್ಪಕ್ಷಪಾತವಾಗಿ ಕ್ರಮಕೈಗೊಳ್ಳಲು ಸಾಕಷ್ಟು ಅವಕಾಶಗಳಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.