ಸ್ವಂತ ಖರ್ಚಿನಲ್ಲಿ ಸಾರ್ವಜನಿಕರಿಂದ ರಸ್ತೆ ದುರಸ್ತಿ
Team Udayavani, Jul 26, 2018, 6:05 AM IST
ಕಾರ್ಕಳ: ಪುರಸಭಾ ವ್ಯಾಪ್ತಿಯ ಕುಂಟಲ್ಪಾಡಿ 3ನೇ ಅಡ್ಡ ರಸ್ತೆ ಬಿಂದಾನಗರದ 5ನೇ ಓಣಿರಸ್ತೆ ಹಲವು ದಿನಗಳಿಂದ ಸಂಪೂರ್ಣ ಹದಗೆಟ್ಟಿದ್ದರೂ ಸಂಬಂಧಪಟ್ಟವರು ರಸ್ತೆ ದುರಸ್ತಿಗೆ ಮುಂದಾಗಿಲ್ಲ. ಇದರಿಂದಾಗಿ ಬೇಸತ್ತ ಸಾರ್ವಜನಿಕರು ಸ್ವಂತ ಖರ್ಚಿನಲ್ಲಿ ಇದೀಗ ರಸ್ತೆ ದುರಸ್ತಿಗೆ ಮುಂದಾಗಿದ್ದಾರೆ.
ರಸ್ತೆ ದುರಸ್ತಿಗಾಗಿ ಎರಡು ಲೋಡ್ ಕಲ್ಲುಗಳನ್ನು ತಂದು ಹಾಕಲಾಗಿದ್ದು, ಕೆಲಸ ಪ್ರಾರಂಭವಾಗಿದೆ. ಕೆಸರಿನಲ್ಲಿ ಹೂತು ನಡೆಯಲು ಸಾಧ್ಯವಾಗದ ರಸ್ತೆಯನ್ನು 25 ಸಾವಿರ ರೂ. ವೆಚ್ಚದಲ್ಲಿ ಕಲ್ಲುಗಳನ್ನು ಜೋಡಿಸಿ ಸರಿಪಡಿಸಲಾಗುತ್ತಿದೆ.ಬಿಂದಾನಗರದ 5ನೇ ಓಣಿರಸ್ತೆ ಪ್ರಾರಂಭದಿಂದ ಅಂದಾಜು 150-200 ಮೀ. ರಸ್ತೆ ಸಂಪೂರ್ಣ ಹದೆಗಟ್ಟಿದ್ದು ಸಂಚರಿಸಲು ತೊಂದರೆಯಾಗುತ್ತಿದೆ. 12 ಮನೆಗಳಿರುವ ಈ ರಸ್ತೆಯಲ್ಲಿ ದಿನ ನಿತ್ಯದ ಓಡಾಟ ಬಹಳ ಕಷ್ಟವಾಗಿತ್ತು.
ಸ್ಥಳೀಯರ ಆಕ್ರೋಶ
ಈಗಾಗಲೇ ಪಾದಚಾರಿಗಳು ಈ ರಸ್ತೆಯಲ್ಲಿ ಬಿದ್ದು ಗಾಯಗೊಂಡಿದ್ದಾರೆ. ಇದರ ಬಗ್ಗೆ ಹಲವಾರು ಬಾರಿ ಮನವಿಗಳನ್ನು ನೀಡಿದ್ದರೂ ಏನು ಪ್ರಯೋಜನವಾಗಲಿಲ್ಲ. ಹಿಂದೆ ಆಡಳಿತದಲ್ಲಿ ಇದ್ದ ಅಧಿಕಾರಿಗಳು ಬಂದು ನೋಡಿದ್ದರು. ಇತ್ತೀಚೆಗೆ ಪುರಸಭೆಯ ಮುಖ್ಯಾಧಿಕಾರಿ ಅವರೂ ಸ್ಥಳಕ್ಕೆ ಭೇಟಿ ನೀಡಿ ಸದ್ಯ ನೀವೇ ಏನಾದರೂ ಮಾಡಿ ಎಂದಿದ್ದಾರೆ. ನಾವೇ ಕೆಲಸ ಮಾಡಿಸುವುದಾದರೆ ತೆರಿಗೆ ಏನಕ್ಕೆ ಕಟ್ಟಬೇಕು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಡೆದಾಡಲೂ ಸಾಧ್ಯವಿಲ್ಲ
ಮಳೆಗಾಲ ಬಂದಾಗ ಪ್ರತೀ ಬಾರಿ ಈ ರಸ್ತೆಯಲ್ಲಿ ನಡೆದಾಡಲೂ ಸಾಧ್ಯವಿಲ್ಲ. ಈ ಬಾರಿಯೂ ಸಮಸ್ಯೆ ಉಂಟಾಗಿದೆ. ಸಂಬಂಧಿಸಿದವರಿಗೆ ಹೇಳಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ನಾವೇ ಸ್ಥಳೀಯರು ಸೇರಿ ಸ್ವಂತ ಖರ್ಚಿನಲ್ಲಿ ರಸ್ತೆ ಸರಿಪಡಿಲು ಮುಂದಾಗಿದ್ದೇವೆ.
– ಶರೀಟಾ ನೊರೋನ್ಹಾ, ಸ್ಥಳೀಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
Dec. 29: ಪಡುಬಿದ್ರಿಯಲ್ಲಿ ಅಂತರ್‌ರಾಜ್ಯ ಬಂಟ ಕ್ರೀಡೋತ್ಸವ – ಎಂಆರ್‌ಜಿ ಟ್ರೋಫಿ
Udupi: ಕಲ್ಸಂಕ ಜಂಕ್ಷನ್; ಹಗಲು-ರಾತ್ರಿ ಟ್ರಾಫಿಕ್ ಕಿರಿಕಿರಿ
Padubidri: ಪಲಿಮಾರು ಉಪ್ಪು ನೀರು ತಡೆ ಅಣೆಕಟ್ಟು ನಾಲ್ಕೇ ವರ್ಷದಲ್ಲಿ ಜೀರ್ಣಾವಸ್ಥೆಗೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು
World Rapid Chess: ಕಡೆಗೂ ಅರ್ಜುನ್ ಎರಿಗೈಸಿಗೆ ಅಮೆರಿಕ ವೀಸಾ
Women’s ODI: ಹರ್ಲೀನ್ ಶತಕ; ವಿಂಡೀಸ್ ವಿರುದ್ಧ ಭಾರತಕ್ಕೆ 2-0 ಸರಣಿ ಜಯ
Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.