ದ ಹಂಡ್ರೆಡ್ ಕ್ರಿಕೆಟ್: ಇಸಿಬಿ ಸ್ಪಷ್ಟನೆ
Team Udayavani, Jul 26, 2018, 6:00 AM IST
ಲಂಡನ್: ತೀವ್ರ ಕುತೂಹಲ ಹುಟ್ಟಿಸಿರುವ 100 ಎಸೆತಗಳ ವಿನೂತನ ಮಾದರಿಯ ಕ್ರಿಕೆಟ್ (ದ ಹಂಡ್ರೆಡ್) ಪಂದ್ಯದ ಬಗ್ಗೆ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಮೊದಲ ಸಲ ಪ್ರಕಟನೆ ನೀಡಿದೆ. ಈ ಕುರಿತು ಇನ್ನೂ ಯಾವುದೇ ನಿರ್ಧಾರಕ್ಕೆ ಬರಲಾಗಿಲ್ಲ, ಮಾಧ್ಯಮಗಳಲ್ಲಿ ಪ್ರಕಟವಾಗಿರುವುದು ಬರೀ ಊಹಾಪೋಹ ಮಾತ್ರ ಎಂದಿದೆ.
ಇದೇ ಸೆಪ್ಟಂಬರ್‌ನಲ್ಲಿ ನೂತನ ಮಾದರಿಯ ಕ್ರಿಕೆಟ್ ಪಂದ್ಯಗಳನ್ನು ಪ್ರಾಯೋಗಿಕವಾಗಿ ಆಡಿಸಿ, ಇದರ ಫಲಿತಾಂಶವನ್ನು ಪರಿಶೀಲಿಸಿದ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳ ಲಾಗುವುದು ಎಂದು ಇಸಿಬಿ ಸ್ಪಷ್ಟಪಡಿಸಿದೆ. ಇದು ಜಾರಿಗೆ ಬರುವುದೇನಿದ್ದರೂ 2020ರಲ್ಲಿ ಎಂಬುದಾಗಿಯೂ ತಿಳಿಸಿದೆ.
ಮಂಗಳವಾರ “ದ ಹಂಡ್ರೆಡ್’ ಕ್ರಿಕೆಟ್ ಕುರಿತು ವರದಿ ಮಾಡಿದ ಬ್ರಿಟನ್ನಿನ “ಡೈಲಿ ಟೆಲಿಗ್ರಾಫ್’ ಪತ್ರಿಕೆ, ಇಸಿಬಿ ಬದಲಿ ಆಟಗಾರನನ್ನು ಆಡಿಸುವ ಬಗ್ಗೆ ಯೋಚಿಸುತ್ತಿದೆ ಎಂದು ಉಲ್ಲೇಖೀಸಿತ್ತು. “ದಿ ಟೈಮ್ಸ್’ ಕೂಡ ವರದಿ ಮಾಡಿ, ಇದು ತಲಾ 15 ಸದಸ್ಯರ ತಂಡವಾಗಿದ್ದು, 4 ಬದಲಿ ಕ್ರಿಕೆಟಿಗರ ಪ್ರಯೋಗಕ್ಕೆ ಮುಂದಾ ಗಲಿದೆ ಎಂದಿತ್ತು. ಆದರೆ ಈ ಎಲ್ಲ ವರದಿಗಳನ್ನು ಇಸಿಬಿ ಆಧಾರ ರಹಿತ ಎಂದು ತಳ್ಳಿಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.