ಮೆಸ್ಕಾಂ ಮೇಲ್ದರ್ಜೆಗೇರಿದ್ದರೂ ಸೇವೆ ಕಳಪೆ!


Team Udayavani, Jul 26, 2018, 2:30 AM IST

mescom-25-7.jpg

ಉಪ್ಪಿನಂಗಡಿ: ಉಪ್ಪಿನಂಗಡಿ ಮೆಸ್ಕಾಂ ಶಾಖಾ ಕಚೇರಿ ಮೇಲ್ದರ್ಜೆಗೆ ಏರಿದೆ. ಜೆ.ಇ. ಹುದ್ದೆ ಎ.ಇ. ಹುದ್ದೆ ಆಗಿದೆ. ಆದರೆ ಇಲ್ಲಿ ಈ ಹಿಂದೆ ಸಾರ್ವಜನಿಕರಿಗೆ ಸಿಗುತ್ತಿದ್ದ ಸೇವೆಗಳು ಮಾತ್ರ ಕೆಳದರ್ಜೆಗೆ ಇಳಿದಿದೆ ಎಂದು ಉಪ್ಪಿನಂಗಡಿ ಗ್ರಾ.ಪಂ. ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಮೆಸ್ಕಾಂ ಸಮಸ್ಯೆಗಳ ಕುರಿತು ಸದಸ್ಯರಾದ ಯು.ಕೆ. ಇಬ್ರಾಹಿಂ, ಗೋಪಾಲ ಹೆಗ್ಡೆ, ರಮೇಶ್‌ ಭಂಡಾರಿ ಹಾಗೂ ಸುರೇಶ್‌ ಅತ್ರಮಜಲು, ಚಂದ್ರಶೇಖರ ಮಡಿವಾಳ ಮೊದಲಾದವರು ವಿಷಯ ಪ್ರಸ್ತಾವಿಸಿದರು. ಈ ಹಿಂದೆ ಇದ್ದ ಜೂನಿಯರ್‌ ಎಂಜಿನಿಯರ್‌ ಅವರು ವರ್ಗಾವಣೆಯಾದ ಬಳಿಕ ಇಲ್ಲಿ ಸಮಸ್ಯೆಗಳೇ ತಾಂಡವಾಡುತ್ತಿದೆ. ನಿರಂತರ ವಿದ್ಯುತ್‌ ಕೈಕೊಡುತ್ತಿದೆ. ಅಧಿಕಾರಿಗಳಿ ನಿಷ್ಕ್ರಿಯರಾಗಿದ್ದಾರೆ. ಹಿಂದಿನ ಅಧಿಕಾರಿ ಸುಂದರ್‌ ಅವರನ್ನೇ ಇಲ್ಲಿಗೆ ಮತ್ತೆ ನಿಯೋಜನೆ ಮಾಡಿ ಎನ್ನುವ ಆಗ್ರಹ ಕೇಳಿ ಬಂದಿತ್ತು. ಉಪ್ಪಿನಂಗಡಿಯಲ್ಲಿ ಸುಂದರ್‌ ಮತ್ತು ಶೇಷಪ್ಪ ಪೂಜಾರಿಯವರು ಮೆಸ್ಕಾಂನಲ್ಲಿ ಉತ್ತಮವಾಗಿ ಸ್ಪಂದಿಸುತ್ತಿದ್ದರು. ಸಿಬಂದಿಗಳೊಂದಿಗೆ ಸೇರಿಕೊಂಡು ಅವರು ಕೆಲಸ ಮಾಡುತ್ತಿದ್ದರು. ಆದರೆ ಈಗ ಎಲ್ಲರೂ ನಿಷ್ಕ್ರಿಯರಾದಂತಿದ್ದಾರೆ. ಗ್ರಾ.ಪಂ.ಗೆ ಒತ್ತಡ ತಂದು ಜೀಪಿನ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಹೀಗಿದ್ದರೂ ಕಾರ್ಯ ಸುಲಲಿತವಾಗಿಲ್ಲ. ಮೆಸ್ಕಾಂ ಕಚೇರಿಯಲ್ಲಿ ಹಾಗೂ ಅಧಿಕಾರಿಗಳು ಕರೆಯನ್ನೂ ಸ್ವೀಕರಿಸುತ್ತಿಲ್ಲ. ಹೀಗೆ ಮೆಸ್ಕಾಂಗೆ ಸಂಬಂಧಿಸಿ ಇನ್ನಿತರ ಹಲವು ವಿಷಯಗಳು ಚರ್ಚೆಗೆ ಬಂದವು. ಗ್ರಾಮಸ್ಥರ ಒತ್ತಾಯದ ಮೇರೆಗೆ ಈ ಹಿಂದೆ ಇದ್ದ ಸುಂದರ್‌ ಅವರನ್ನು ಮೆಸ್ಕಾಂ ಉಪ್ಪಿನಂಗಡಿ ಶಾಖಾ ಕಚೇರಿಗೆ ನಿಯೋಜನೆ ಮಾಡುವಂತೆ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು.

ಏಕಮುಖ ರಸ್ತೆ ನಿರ್ಣಯಕ್ಕೆ ಆಕ್ಷೇಪ
ಬ್ಯಾಂಕ್‌ ರಸ್ತೆ ಏಕಮುಖ ರಸ್ತೆ ಮಾಡುವ ಸರ್ವಾನುಮತದ ನಿರ್ಣಯಕ್ಕೆ ನನ್ನ ಆಕ್ಷೇಪ ಇದೆ ಎಂದು ಸದಸ್ಯ ಯು.ಟಿ. ತೌಸೀಫ್ ಹೇಳಿದರು. ಆಕ್ಷೇಪ ದಾಖಲಿಸಿ. ನಿರ್ಣಯಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಸದಸ್ಯ ಸುರೇಶ್‌ ಅತ್ರಮಜಲು ತಿಳಿಸಿದರು. ಸದಸ್ಯ ಗೋಪಾಲ ಹೆಗ್ಡೆ ಮಾತನಾಡಿ, ಬ್ಯಾಂಕ್‌ ರಸ್ತೆಯಲ್ಲಿ ಟ್ರಾಫಿಕ್‌ ಬ್ಲಾಕ್‌ ಆಗುತ್ತಿದೆ. ಜನರು, ವಿದ್ಯಾರ್ಥಿಗಳು ಭಯದಿಂದ ನಡೆದಾಡುತ್ತಿದ್ದಾರೆ.

ಸಾರ್ವಜನಿಕ ಹಿತದೃಷ್ಟಿಯಿಂದ ನಿರ್ಣಯ ಮಾಡಿರುವುದು. ನಮಗೆ ವರ್ತಕರಷ್ಟೇ ಮುಖ್ಯ ಸಾರ್ವಜನಿಕರು. ವರ್ತಕರು ಗ್ರಾ.ಪಂ. ವಿರುದ್ಧ ಕೋರ್ಟು ಮೊರೆ ಹೋಗುತ್ತೇವೆ ಎಂದಿದ್ದಾರೆ. ಕೆಲವರು ರಸ್ತೆ ಅತಿಕ್ರಮಿಸಿ ವ್ಯಾಪಾರ ಮಾಡುತ್ತಿರುವುದೂ ನಮಗೆ ತಿಳಿದಿದೆ. ನಾವೂ ಕೋರ್ಟ್‌ಗೆ ಹೋಗುತ್ತೇವೆ ಎಂದು ಹೇಳಿದ ಅವರು, ಹಳೆ ಬಸ್ಸು ನಿಲ್ದಾಣದ ಬಳಿ ಬಟ್ಟೆ ಅಂಗಡಿ ಕೆಡವಿ ಕಾಮಗಾರಿ ನಡೆಸಲಾಗುತ್ತಿದ್ದು, ಅದರ ಜಲ್ಲಿ, ಮರಳು ರಾಶಿ ರಸ್ತೆಯಲ್ಲೇ ಇದೆ. ಇದನ್ನು ತತ್‌ ಕ್ಷಣ ತೆರವು ಮಾಡಿ ರಸ್ತೆಯನ್ನು ಬಿಟ್ಟುಕೊಡಬೇಕು. ಅವರಿಗೆ ನೊಟೀಸು ಜಾರಿಗೊಳಿಸಿ ಎಂದರು.

ವರ್ತಕರಿಂದಲೇ ತೊಂದರೆ!
ಸುರೇಶ್‌ ಅತ್ರಮಜಲು ಮಾತನಾಡಿ, ಮೂರು ವರ್ಷಗಳಿಂದ ಬ್ಯಾಂಕ್‌ ರಸ್ತೆಯಲ್ಲಿ ಎದುರಾಗುವ ಸಮಸ್ಯೆ ಬಗ್ಗೆ ಹಲವು ಸಭೆ ಕರೆಯಲಾಗಿದೆ. ಕೆಲ ವರ್ತಕರು ತಮ್ಮ ಅಂಗಡಿಗೆ ಬರುವವರಿಗೆ ಎಲ್ಲಿ ವಾಹನ ನಿಲ್ಲಿಸಬೇಕು ಎನ್ನುವ ಮಾಹಿತಿ ನೀಡದ ಕಾರಣ ಸಮಸ್ಯೆ ಆಗುತ್ತಿದೆ. ಈ ಬಗ್ಗೆ ಕಠಿನ ನಿಲುವು ತೆಗೆದುಕೊಳ್ಳಬೇಕು ಎಂದರು. ಸುನಿಲ್‌ ದಡ್ಡು ಮಾತನಾಡಿ, ಕೆಲವೊಂದು ಅನಧಿಕೃತ ಅಂಗಡಿಗಳು, ವರ್ತಕರ ವಿಸ್ತರಣೆ ತೆರವು ಮಾಡಿ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿದೆ ಎಂದರು.

ಮಾಲ್‌ ಕಟ್ಟಡವೊಂದರ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು, ಇದರ ಕಬ್ಬಣ, ಜಲ್ಲಿ, ಮರಳುಗಳನ್ನು ಕಂದಾಯ ಇಲಾಖೆ ಜಾಗದೊಳಗೆ ಹಾಕಲಾಗಿದೆ. ಇಲ್ಲಿ ಇದ್ದ ಚರಂಡಿಯನ್ನು ಬಂದ್‌ ಮಾಡಲಾಗಿದೆ. ಆ ಪರಿಸರ ಸೊಳ್ಳೆ ಉತ್ಪಾದನ ಕೇಂದ್ರವಾಗಿ ಮಾರ್ಪಾಡು ಹೊಂದಿದೆ. ತತ್‌ ಕ್ಷಣ ಅವುಗಳನ್ನು ತೆರವು ಮಾಡಿಸಬೇಕು ಎಂದು ಸದಸ್ಯರು ಆಗ್ರಹಿಸಿದರು.

ಗ್ರಾ.ಪಂ. ಅಧ್ಯಕ್ಷ ಕೆ. ಅಬ್ದುಲ್‌ ರಹಿಮಾನ್‌ ಅಧ್ಯಕ್ಷತೆಯಲ್ಲಿ ಗ್ರಾಮಸಭೆ ನಡೆಯಿತು. ಉಪಾಧ್ಯಕ್ಷೆ ಹೇಮಲತಾ, ಸದಸ್ಯರುಗಳಾದ ಉಮೇಶ್‌ ಗೌಡ, ವಿನಾಯಕ ಪೈ, ಚಂದ್ರಾವತಿ ಹೆಗ್ಡೆ, ಕವಿತಾ, ಸುಂದರಿ, ಚಂದ್ರಾವತಿ, ಯೋಗಿನಿ, ಜಮೀಳಾ, ಸುಶೀಲಾ, ಝರೀನಾ ಉಪಸ್ಥಿತರಿದ್ದರು.ಗ್ರಾ.ಪಂ. ಕಾರ್ಯದರ್ಶಿ ಮರಿಯಮ್ಮ ಸ್ವಾಗತಿಸಿ, ಜ್ಯೋತಿ ವಂದಿಸಿ ದರು. ಆರೋಗ್ಯ ಇಲಾಖೆಯ ಆರೋಗ್ಯ ಸಹಾಯಕಿ ಗಾಯತ್ರಿ ಮಾಹಿತಿ ನೀಡಿದರು. ಆಶಾ ಕಾರ್ಯಕರ್ತರಾದ ಹೇಮಲತಾ, ನಳಿನಿ, ಯಶೋಧಾ, ವನಿತಾ ಹಾಜರಿದ್ದರು.

ಶೈಕ್ಷಣಿಕ ಸಾಲ ಕಟ್ಟಲಾಗದೆ ತೊಂದರೆ – ನಿರ್ಣಯ
ಗ್ರಾಮೀಣ ಮಹಿಳೆಯರು ಸ್ತ್ರೀ ಶಕ್ತಿ ಗುಂಪುಗಳಿಂದ ಸಾಲ ಪಡೆದು ಜೀವನ ಸಾಗಿಸುತ್ತಿದ್ದಾರೆ. ಆದರೆ ಆರ್ಥಿಕ ಮುಗ್ಗಟ್ಟುನಿಂದಾಗಿ ಸಾಲ ತೀರಿಸಲಾಗದೆ ಸಮಸ್ಯೆ ಎದುರಿಸುತ್ತಿದ್ದಾರೆ. ಬಡ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಜನೆಗೆ ಅರಿವು ಸಾಲ ಮೊದಲಾದ ಶೈಕ್ಷ ಣಿಕ ಸಾಲ ಯೋಜನೆಯಡಿಯಲ್ಲಿ ಸಾಲ ಮಾಡಿಕೊಂಡಿದ್ದಾರೆ. ಶಿಕ್ಷಣ ಪೂರ್ಣಗೊಂಡಿದ್ದರೂ ಉದ್ಯೋಗ ಸಿಗದ ಕಾರಣ ಬ್ಯಾಂಕ್‌ ಸಾಲ ಮರುಪಾವತಿ ಮಾಡಲಾಗದ ಸ್ಥಿತಿಗೆ ತಲುಪಿದ್ದಾರೆ. ಬ್ಯಾಂಕಿನವರು ಮಾತ್ರ ಸಾಲ ಕಟ್ಟಲು ಅವರಿಗೆ ಒತ್ತಡ ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ತ್ರೀ ಶಕ್ತಿ ಗುಂಪು ಸಾಲ ಮತ್ತು ಶಿಕ್ಷಣ ಸಾಲವನ್ನು ಮನ್ನಾ ಮಾಡುವಂತೆ ಸರಕಾರವನ್ನು ಆಗ್ರಹಿಸಿ ನಿರ್ಣಯ ಅಂಗೀಕರಿಸುವಂತೆ ಸದಸ್ಯೆ ಭಾರತಿ ಅವರು ಆಗ್ರಹಿಸಿದರು. ಈ ವಿಷಯದ ನಿರ್ಣಯ ಅಂಗೀಕರಿಸಲಾಯಿತು.

ಪಿಡಿಒಗೆ ಡೆಂಗ್ಯೂ
ಉಪ್ಪಿನಂಗಡಿ ಪೊಲೀಸ್‌ ಠಾಣಾ ನೂತನ ಕಟ್ಟಡಕ್ಕೆ ಗುಂಡಿ ತೋಡಿ ಇಡಲಾಗಿದೆ. ಇಲ್ಲಿ ನೀರು ಶೇಖರಣೆಗೊಂಡು ಸೊಳ್ಳೆಗಳ ಉತ್ಪತ್ತಿ ಹೆಚ್ಚಿದೆ. ಸನಿಹದಲ್ಲೇ ಇರುವ ಗ್ರಾ.ಪಂ.ನ ಅಭಿವೃದ್ಧಿ ಅಧಿಕಾರಿ ಡೆಂಗ್ಯೂ ಜ್ವರ ಪೀಡಿತರಾಗಿದ್ದಾರೆ. ಉಪ್ಪಿನಂಗಡಿ ಪರಿಸರದಲ್ಲಿ ಹಲವು ಮಂದಿ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ ಎನ್ನುವ ವಿಚಾರ ಸಭೆಯಲ್ಲಿ ಚರ್ಚೆಗೆ ಬಂದಿತ್ತು.

ಟಾಪ್ ನ್ಯೂಸ್

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

adani

Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-aranthodu

Aranthodu: ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

3-aranthodu

Aranthodu: ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

1-kushtagi

Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.