ಕೆನರಾ ಬ್ಯಾಂಕ್‌ಗೆ 281 ಕೋಟಿ ರೂ. ನಿವ್ವಳ ಲಾಭ
Team Udayavani, Jul 26, 2018, 7:00 AM IST
ಬೆಂಗಳೂರು: ಪ್ರತಿಷ್ಠಿತ ಕೆನರಾ ಬ್ಯಾಂಕ್ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ತೈಮಾಸಿಕದಲ್ಲಿ 281 ಕೋಟಿ ರೂ.ನಿವ್ವಳ
ಲಾಭ ಗಳಿಸಿದೆ. ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಶೇ.11.51ರಷ್ಟು ಬೆಳವಣಿಗೆ ಸಾಧಿಸಿದೆ.
ನಗರದ ಜೆ.ಸಿ.ರಸ್ತೆಯಲ್ಲಿರುವ ಬ್ಯಾಂಕ್‌ನ ಕೇಂದ್ರ ಕಚೇರಿಯಲ್ಲಿ ಬುಧವಾರ 2018-19ನೇ ಸಾಲಿನ ಮೊದಲ ತ್ತೈಮಾಸಿಕ ಫಲಿತಾಂಶ ಬಿಡುಗಡೆಗೊಳಿಸಿ ಮಾತನಾಡಿದ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕರೂ ಆದ ಸಿಇಒ ರಾಕೇಶ್ ಶರ್ಮಾ, ಹಿಂದಿನ ಅರ್ಥಿಕ ವರ್ಷದ ಮೊದಲ ತ್ತೈಮಾಸಿಕದಲ್ಲಿ ಬ್ಯಾಂಕ್ 252 ಕೋಟಿ ರೂ.ನಿವ್ವಳ ಲಾಭ ಗಳಿಸಿತ್ತು. ಈ ಬಾರಿ ನಿವ್ವಳ ಲಾಭ ಪ್ರಮಾಣ ಹೆಚ್ಚಾಗಿದ್ದು, ಅತ್ಯುತ್ತಮ ಸಾಧನೆ ತೋರಿದೆ ಎಂದು ಹೇಳಿದರು.
ಇದೇ ಅವಧಿಯಲ್ಲಿ ಬ್ಯಾಂಕ್‌ನ ಒಟ್ಟು ಲಾಭ ಪ್ರಮಾಣ 2,933 ಕೋಟಿ ರೂ.ಗೆ ಏರಿಕೆಯಾಗಿದ್ದು, ಶೇ.18.65ರಷ್ಟು ಬೆಳವಣಿಗೆ ಸಾಧಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಒಟ್ಟು ಲಾಭ ಮೊತ್ತ 2,472 ಕೋಟಿ ರೂ.ನಷ್ಟಿತ್ತು. ನಾಲ್ಕೈದು ವರ್ಷಗಳ ಹಿಂದೆ ಬ್ಯಾಂಕ್ ಒತ್ತಡದಲ್ಲಿತ್ತು. ಕೆಲ ಪ್ರಮುಖ ಬದಲಾವಣೆ ತರಲಾಗಿದ್ದು, ಉತ್ತಮ ಫಲಿತಾಂಶ ನೀಡುತ್ತಿದೆ.
ಮುಂದಿನ ತ್ತೈಮಾಸಿಕದಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಮೊದಲ ತ್ತೈಮಾಸಿಕದಲ್ಲಿ 3,883 ಕೋಟಿ ರೂ.ನಿವ್ವಳ ಬಡ್ಡಿ ಆದಾಯ ಸಂಗ್ರಹವಾಗಿದ್ದು, ಶೇ.43.13ರಷ್ಟು ಬೆಳವಣಿಗೆ ಕಂಡಿದೆ. ಮುಂಗಡಗಳ ಮೇಲಿನ ಬಡ್ಡಿ ಆದಾಯವು ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.14.87ರಷ್ಟು ಬೆಳವಣಿಗೆ ಸಾಧಿಸಿದ್ದರೆ, 1833 ಕೋಟಿ ರೂ.ಬಡ್ಡಿಯೇತರ ಆದಾಯ ಸಂಗ್ರಹವಾಗಿದೆ ಎಂದು ಹೇಳಿದರು.
ಬ್ಯಾಂಕ್‌ನ ಒಟ್ಟು ಜಾಗತಿಕ ವ್ಯವಹಾರದಲ್ಲಿ ಶೇ.10.96ರಷ್ಟು ಬೆಳವಣಿಗೆಯಾಗಿದ್ದು, ವ್ಯವಹಾರ ಮೊತ್ತ 9.2 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಒಟ್ಟು ಜಾಗತಿಕ ಠೇವಣಿ ಮೊತ್ತ 5.33 ಲಕ್ಷ ಕೋಟಿ ರೂ.ಗೆ ಹೆಚ್ಚಳವಾಗುವ ಮೂಲಕ ಶೇ.9.75ರಷ್ಟು ಬೆಳವಣಿಗೆ ಸಾಧಿಸಿದೆ. ಒಟ್ಟಾರೆ ಮುಂಗಡಗಳು 3.86 ಲಕ್ಷ ಕೋಟಿ ರೂ.ತಲುಪಿದೆ ಎಂದು ವಿವರ ನೀಡಿದರು.
ಅನುತ್ಪಾದಕ ಆಸ್ತಿ ಮೊತ್ತವನ್ನು ಇಳಿಕೆ ಮಾಡಲು ಆದ್ಯತೆ ನೀಡಲಾಗಿದೆ. 2017-2018ನೇ ಸಾಲಿನ ಕೊನೆಯ ತ್ತೈಮಾಸಿಕಕ್ಕೆ ಹೋಲಿಸಿದರೆ ನಿವ್ವಳ ಅನುತ್ಪಾದಕ ಆಸ್ತಿ ಪ್ರಮಾಣ ಶೇ.7.48ರಿಂದ ಶೇ.6.91ಕ್ಕೆ ಇಳಿಕೆಯಾಗಿದೆ. ಹಾಗೆಯೇ ಒಟ್ಟು ಅನುತ್ಪಾದಕ ಆಸ್ತಿ ಪ್ರಮಾಣವು ಹಿಂದಿನ ತ್ತೈಮಾಸಿಕಕ್ಕೆ ಹೋಲಿಸಿದರೆ ಶೇ.11.84ರಿಂದ ಶೇ.11.05ಕ್ಕೆ ಇಳಿಕೆಯಾಗಿದೆ.
ಪ್ರಸಕ್ತ ಸಾಲಿನಲ್ಲಿ 3,537 ಕೋಟಿ ರೂ.ವಸೂಲಿ ಮಾಡಲಾಗಿದೆ ಎಂದು ಹೇಳಿದರು. ಆ.1ರಂದು ಎಸ್‌ಎಲ್‌ಬಿಸಿ ಸಭೆ: ಬ್ಯಾಂಕ್‌ನ ಕಾರ್ಯ ನಿರ್ವಾಹಕ ನಿರ್ದೇಶಕ ಎಂ.ವಿ.ರಾವ್ ಮಾತನಾಡಿ, ರಾಜ್ಯದ ರೈತರ ಸಾಲ ಮನ್ನಾ ಕುರಿತಂತೆ ತೀರ್ಮಾನಿಸಲು ರಾಜ್ಯ ಮಟ್ಟದ ಬ್ಯಾಂಕರ್ ಸಮಿತಿ (ಎಸ್‌ಎಲ್‌ಬಿಸಿ) ಗ್ರಾಮೀಣ ಬ್ಯಾಂಕ್‌ಗಳು ಹಾಗೂ ವಾಣಿಜ್ಯ ಬ್ಯಾಂಕ್‌ಗಳ ಎರಡು ತಂಡ ರಚಿಸಲಾಗಿದೆ. ಎರಡೂ ತಂಡಗಳು ಆ.1ರಂದು ನಡೆಯುವ ಎಸ್‌ಎಲ್‌ಬಿಸಿ ಸಭೆಯಲ್ಲಿ ಭಾಗವಹಿಸಲಿದ್ದು, ಸಾಲಮನ್ನಾ ಕುರಿತು ತೀರ್ಮಾನ ಕೈಗೊಳ್ಳಲಿವೆ. ಆ ತೀರ್ಮಾನಗಳನ್ನು ಪರಾಮರ್ಶಿಸಿ ಬ್ಯಾಂಕ್‌ನ ಆಡಳಿತ ಮಂಡಳಿ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಪ್ರತಿಕ್ರಿಯೆ ನೀಡಿದರು.ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕರಾದ ದೆಬರ್‌ಶಿಶ್ ಮುಖರ್ಜಿ, ಪಿ.ವಿ.ಭಾರತಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.