ಬೇರೆ ಮನೆ ಮಾಡಿ ಎಂದ ಮಡದಿಯನ್ನೇ ಕೊಂದ

Team Udayavani, Jul 26, 2018, 12:13 PM IST

bere-mane.jpg

ಬೆಂಗಳೂರು: ಜಲಾಶಯ ತೋರಿಸುವ ನೆಪದಲ್ಲಿ ಪತ್ನಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ತಿಪ್ಪಗೊಂಡನಹಳ್ಳಿ ಜಲಾಶಯದ ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ಈ ಸಂಬಂಧ ಆರೋಪಿ ಪತಿಯನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿ ನ್ಯಾಯಾಂಗಕ್ಕೆ ಒಪ್ಪಿಸಿದ್ದಾರೆ.

ಸತ್ಯರಾಜ್‌ (24) ಬಂಧಿತ ಪತಿ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಶಶಿಕಲಾ(19)ರನ್ನು ಕೊಂದು ಮೃತ ದೇಹವನ್ನು ಅರಣ್ಯ ಪ್ರದೇಶದಲ್ಲಿ ಬಿಸಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡು ಮೂಲದ ಸತ್ಯರಾಜ್‌ ಹಣ್ಣಿನ ವ್ಯಾಪಾರ ಮಾಡುತ್ತಿದ್ದು, ಆರು ತಿಂಗಳ ಹಿಂದಷ್ಟೇ ದೂರದ ಸಂಬಂಧಿ ಶಶಿಕಲಾರನ್ನು ವಿವಾಹವಾಗಿದ್ದ. ನಗರದ ದೊರೆಸ್ವಾಮಿ ಪಾಳ್ಯದಲ್ಲಿ ಪತ್ನಿ, ಪೋಷಕರ ಜತೆ ವಾಸವಾಗಿದ್ದ. ಆರಂಭದಲ್ಲಿ ಚೆನ್ನಾಗಿಯೇ ಇದ್ದ ದಂಪತಿ ನಂತರದ ದಿನಗಳಲ್ಲಿ ಹೊಂದಾಣಿಕೆ ಕೊರತೆಯಿಂದ ಜಗಳವಾಡುತ್ತಿದ್ದರು.

ಹೀಗಾಗಿ, ಶಶಿಕಲಾ ಪ್ರತ್ಯೇಕ ಮನೆ ಮಾಡುವಂತೆ ಒತ್ತಾಯ ಮಾಡುತ್ತಿದ್ದಳು. ಜತೆಗೆ ಸಾಕಷ್ಟು ಬಾರಿ ಇದೇ ವಿಚಾರವಾಗಿ ಜಗಳ ತೆಗೆದು ಅವಮಾನ ಮಾಡಿದ್ದಳು. ಇದರಿಂದ ಕೋಪಗೊಂಡಿದ್ದ ಆರೋಪಿ ಪತ್ನಿ ಕೊಲೆಗೆ ನಿರ್ಧರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಧ್ಯೆ ಪತ್ನಿ ಶಶಿಕಲಾ ಎರಡು ತಿಂಗಳ ಗರ್ಭಿಣಿಯಾಗಿದ್ದು, ಆರೋಪಿ ಪತಿಗೆ ಹೊರಗಡೆ ಕರೆದೊಯ್ಯುವಂತೆ ಕೇಳಿಕೊಂಡಿದ್ದಳು. ಇದಕ್ಕಾಗಿಯೇ ಕಾಯುತ್ತಿದ್ದ ಆರೋಪಿ ಪತ್ನಿ ಕೊಲೆಗಾಗಿ ಸಂಚು ರೂಪಿಸಿದ್ದ. ಅದರಂತೆ ಮೇ 1ರಂದು  ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಕರೆದೊಯ್ದಿದ್ದ.

ನಂತರ ಜಲಾಶಯದ ಹಿನ್ನೀರಿನ ಅರಣ್ಯ ಪ್ರದೇಶದಲ್ಲಿ ಪ್ರೀತಿಯಿಂದ ಮಾತನಾಡುತ್ತ ಹಿಂಬದಿಯಿಂದ ಚಾಕು ಬಳಸಿ ಕುತ್ತಿಗೆ ಕೊಯ್ದು ಕೊಂದಿದ್ದಾನೆ. ನಂತರ ಶವವನ್ನು ಅರಣ್ಯ ಪ್ರದೇಶದ ಪೊದೆಯೊಳಗೆ ಎಸೆದು ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ದೂರು ಕೊಟ್ಟು ಬಲೆಗೆ ಬಿದ್ದ: ಪತ್ನಿಯನ್ನು ಕೊಂದಿದ್ದ ಆರೋಪಿ ಮೇ 2ರಂದೇ ಪುಟ್ಟೇನಹಳ್ಳಿ ಠಾಣೆಯಲ್ಲಿ ಪತ್ನಿ ಶಶಿಕಲಾ ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿದ್ದ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿದರೂ ಒಂದು ಸಣ್ಣ ಸುಳಿವು ಕೂಡ ಪತ್ತೆಯಾಗಿರಲಿಲ್ಲ. 

ಕೆಲ ದಿನಗಳ ಬಳಿಕ ಆಕೆಯ ಹೆಸರಿನಲ್ಲಿ ಮೊಬೈಲ್‌ ಸಿಮ್‌ ಖರೀದಿಸಿ ಅದರಿಂದಲೇ ಅಶೋಕ್‌ ಎಂಬಾತನ ಜತೆ ಹೋಗಿದ್ದೇನೆ. ನನ್ನನ್ನು ಹುಡುಕ ಬೇಡಿ ಎಂದು ತನ್ನ ಮೊಬೈಲ್‌ಗೆ ಸಂದೇಶ ಕಳುಹಿಸಿಕೊಂಡು ಪೊಲೀಸರಿಗೆ ತೋರಿಸಿದ್ದ. ಬಳಿಕ ಆಕೆಯ ಮೊಬೈಲ್‌ ನೆಟ್‌ವರ್ಕ್‌ ಪರಿಶೀಲಿಸಿದಾಗ ಈತನ ಮನೆ ಬಳಿಯೇ ಪತ್ತೆಯಾಗಿತ್ತು.

ಈ ಎಲ್ಲ ಬೆಳವಣಿಗೆಗಳಿಂದ ಅನುಮಾನಗೊಂಡು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ  ಪತ್ಯೇಕ ಮನೆ ಮಾಡುವಂತೆ ನಡು ರಸ್ತೆಯಲ್ಲಿ ಅವಮಾನ ಮಾಡಿದ್ದಳು. ಇದರಿಂದ ಬೇಸತ್ತು ಕೊಂದಿದ್ದೇನೆ ಎಂದು ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.