ಹೊಸಕೋಟೆ ಪ್ರೌಢಶಾಲೆಗಳಲ್ಲಿ ಇ-ಕಲಿಕೆ ಸೌಲಭ್ಯ
Team Udayavani, Jul 26, 2018, 12:39 PM IST
ಹೊಸಕೋಟೆ: ತಾಲೂಕಿನಲ್ಲಿರುವ ಎಲ್ಲಾ 19 ಸರ್ಕಾರಿ ಪ್ರೌಢಶಾಲೆಗಳಲ್ಲೂ ಇ-ಕಲಿಕೆ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎನ್.ಕನ್ನಯ್ಯ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕರ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕಿಟ್ ವಿತರಿಸಿ ಮಾತನಾಡಿದರು. ಇ-ಕಲಿಕೆ ಕುರಿತು ಈಗಾಗಲೇ ಕ್ರಿಯಾಯೋಜನೆ ಸಿದ್ಧಪಡಿಸಿದ್ದು ಸಂಘ ಸಂಸ್ಥೆಗಳು, ದಾನಿಗಳ ಸಹಯೋಗದಲ್ಲಿ ಈ ವ್ಯವಸ್ಥೆಯನ್ನು ಹಂತ ಹಂತವಾಗಿ ಒದಗಿಸಲಾಗುವುದು.
ಇದರಿಂದ ವಿದ್ಯಾರ್ಥಿಗಳ ವಿಕಸನಕ್ಕೆ ಸಹಕಾರಿಯಾಗಲಿದ್ದು ಸಾಮಾನ್ಯ ಜ್ಞಾನ ವೃದ್ಧಿಗೊಂಡು ಎಸ್ಎಸ್ಎಲ್ಸಿ ಪರೀಕ್ಷೆ ಉತ್ತಮ ಫಲಿತಾಂಶಕ್ಕೆ ಶ್ರಮಿಸಲಾಗುತ್ತಿದೆ ಎಂದು ಹೇಳಿದರು. ಕಲಿಕಾ ಸಾಮರ್ಥ್ಯ ಹೆಚ್ಚಳಗೊಳ್ಳುವುದರೊಂದಿಗೆ ಫಲಿತಾಂಶವೂ ಸುಧಾರಣೆಗೊಳ್ಳುವ ನಿರೀಕ್ಷೆಯಿದೆ ಎಂದರು.
ಬೆಂಗಳೂರಿನ ರೀಚಿಂಗ್ ಹ್ಯಾಂಡ್ ಸಂಸ್ಥೆ ನಿರ್ದೇಶಕ ಮೋಹನ್ಪ್ರಭು, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಲು ಅಗತ್ಯ ಸೌಲಭ್ಯ ಕಲ್ಪಿಸಲು ಸಂಸ್ಥೆ ಬದ್ಧವಾಗಿದೆ.
ಸಂಸ್ಥೆ ಕಳೆದ 5-6 ವರ್ಷಗಳಿಂದ ತಾಲೂಕಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಶೌಚಾಲಯ, ಗ್ರಂಥಾಲಯ ವ್ಯವಸ್ಥೆ ಮಾಡಲಾಗಿದ್ದು ಗಣಕಯಂತ್ರಗಳನ್ನೂ ಕೊಡುಗೆಯಾಗಿ ನೀಡಿ ತರಬೇತಿಗೆ ಶಿಕ್ಷಕರನ್ನು ನಿಯೋಜಿಸಿದೆೆ.
ಪ್ರಸ್ತುತ ಸೋಲಾರ್ ಶಕ್ತಿಯಿಂದ ಉಪಯೋಗಿಸಬಹುದಾದ ಸ್ಮಾರ್ಟ್ ಕ್ಲಾಸ್ ಕಿಟ್ ನೀಡುತ್ತಿದ್ದು ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಸಹಕಾರಿಯಾಗಲಿದೆ. ಇಂತಹ ವ್ಯವಸ್ಥೆಯನ್ನು ತಾಲೂಕಿನ 5 ಪ್ರೌಢಶಾಲೆಗಳಿಗೆ ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದರು.
ಮುಖ್ಯ ಶಿಕ್ಷಕಿ ಶಾಂತಕುಮಾರಿ, ಸ್ಮಾರ್ಟ್ ಕ್ಲಾಸ್ ಪರಿಕಲ್ಪನೆ ಪರಿಣಾಮಕಾರಿಯಾಗಿದೆ. ಸಂಘ-ಸಂಸ್ಥೆಗಳು, ದಾನಿಗಳು ನೀಡುವ ಕೊಡುಗೆಯನ್ನು ಸಮರ್ಪಕವಾಗಿ ಬಳಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ರೀಚಿಂಗ್ ಹ್ಯಾಂಡ್ ಸಂಸ್ಥೆಯ ಸಿಇಒ ಅಕ್ಷಯ್ ಸಾಗರ್, ಸದಸ್ಯೆ ಶ್ವೇತಾ, ಆಟೋಡೆಸ್ಕ್ ಸಂಸ್ಥೆಯ ಶ್ರೇಯಾ, ಶಿವರಾಮಯ್ಯ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೃಷ್ಣಪ್ಪ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.