ಬಾಕಿ ವೇತನ ಪಾವತಿಗೆ ಕಾರ್ಮಿಕರ ಆಗ್ರಹ
Team Udayavani, Jul 26, 2018, 4:02 PM IST
ಹುಬ್ಬಳ್ಳಿ: ಪೌರ ಕಾರ್ಮಿಕರಿಗೆ ಬಾಕಿ ವೇತನ ಪಾವತಿಸಬೇಕೆಂದು ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ/ಪಂಗಡಗಳ ಪೌರ ಕಾರ್ಮಿಕರ ಮತ್ತು ನೌಕರರ ಸಂಘದ ವತಿಯಿಂದ ಪಾಲಿಕೆ ಆವರಣದಲ್ಲಿ ಬುಧವಾರ ಧರಣಿ ನಡೆಸಲಾಯಿತು. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜೂನ್ 20ರೊಳಗೆ 3 ತಿಂಗಳ ಬಾಕಿ ವೇತನ ನೀಡುವುದಾಗಿ ತಿಳಿಸಲಾಗಿತ್ತು. ಆದರೆ ಆಯುಕ್ತರು ವೇತನ ನೀಡಿಲ್ಲ. ಪೌರ ಕಾರ್ಮಿಕರಿಗೆ ನೇರವಾಗಿ ವೇತನ ಪಾವತಿಸಬೇಕೆಂದು ಉಚ್ಚ ನ್ಯಾಯಾಲಯ ಆದೇಶಿಸಿದ್ದರೂ ವೇತನ ನೀಡುತ್ತಿಲ್ಲ ಎಂದು ಆರೋಪಿಸಿದರು.
ನಕಲಿ ಕಾರ್ಮಿಕರ ಹಾವಳಿಯನ್ನು ತಡೆಗಟ್ಟಲು ಪಾಲಿಕೆ ಅಧಿಕಾರಿಗಳು ವಿಫಲಗೊಂಡಿದ್ದಾರೆ. ನಕಲಿ ಕಾರ್ಮಿಕರು ಬಯೋಮೆಟ್ರಿಕ್ ಹಾಜರಿ ಹಾಕುವುದನ್ನು ಪ್ರಶ್ನಿಸಿದ್ದಕ್ಕೆ ಗುತ್ತಿಗೆ ಪೌರ ಕಾರ್ಮಿಕರಿಗೆ ಕಿರುಕುಳ ನೀಡಲಾಗುತ್ತದೆ. 26 ಗುತ್ತಿಗೆ ಪೌರ ಕಾರ್ಮಿಕರನ್ನು ಕಾನೂನು ಬಾಹಿರವಾಗಿ ಕೆಲಸದಿಂದ ತೆಗೆದು ಹಾಕಲಾಗಿದೆ. ಪೌರ ಕಾರ್ಮಿಕರ ಹಕ್ಕುಗಳನ್ನು ದಮನ ಮಾಡಲಾಗುತ್ತಿದೆ. ಕೂಡಲೇ ಬಾಕಿ ವೇತನ ಪಾವತಿಸಬೇಕು ಎಂದು ಆಗ್ರಹಿಸಲಾಯಿತು. ವಿಜಯ ಗುಂಟ್ರಾಳ, ಗಂಗಮ್ಮ ಸಿದ್ರಾಂಪುರ, ಕಸ್ತೂರೆವ್ವ ಬೆಳಗುಂದಿ, ನಾಗಮ್ಮ ಗೊಲ್ಲರ, ಕನಕಪ್ಪ ಕೊಟಬಾಗಿ, ಸೋಮು ಮೊರಬದ, ಪರಶುರಾಮ ಕಡಕೋಳ, ಶರಣಪ್ಪ ಅಮರಾವತಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.