ಅಭಿವೃದ್ಧಿಗೆ ಸ್ವಚ್ಛತೆ ಪೂರಕ: ವೀರಣ್ಣ ಕಿರಗಿ
Team Udayavani, Jul 26, 2018, 5:49 PM IST
ಕಮತಗಿ: ಪ್ರತಿಯೊಬ್ಬರು ಕೂಡಾ ತಾವು ವಾಸಿಸುವ ಪ್ರದೇಶವನ್ನು ಸ್ವಚ್ಛಂದವಾಗಿಟ್ಟುಕೊಂಡರೆ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಬಿವಿವಿ ಸಂಘದ ಜನಶಿಕ್ಷಣ ಸಂಸ್ಥೆಯ ನಿರ್ದೇಶಕ ವೀರಣ್ಣ ಕಿರಗಿ ಹೇಳಿದರು. ಪಟ್ಟಣದ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸ್ವತ್ಛತೆ ಇದ್ದರೆ ಎಲ್ಲದಕ್ಕೂ ಪ್ರೇರಣೆಯಾಗುತ್ತದೆ ಅಲ್ಲದೆ ಮಹತ್ಮಾ ಗಾಂಧೀಜಿ ಅವರ ಆಶಯದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ವತ್ಛತಾ ಆಂದೋಲನ ಹಮ್ಮಿಕೊಳ್ಳುವ ಮೂಲಕ ದೇಶದಲ್ಲಿ ಸ್ವಚ್ಛತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು. ಅಲ್ಲದೆ ಬಯಲು ಶೌಚಾಲಯ ಮುಕ್ತ ದೇಶವನ್ನಾಗಿಸಲು ಪ್ರತಿಯೊಬ್ಬರು ಕೂಡಾ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಬೇಕು ಎಂದರು.
ಬಿವಿವಿ ಸಂಘದ ಇಂಜನಿಯರಿಂಗ್ ಕಾಲೇಜಿನ ಉಪನ್ಯಾಸಕಿ ಭಾರತಿ ಮೇಟಿ ಮಾತನಾಡಿ, ಇಂದಿನ ದಿನಗಳಲ್ಲಿ ಪ್ರತಿಯೊಬ್ಬರು ಕೂಡಾ ಪ್ಲಾಸ್ಟಿಕನ್ನು ಹೆಚ್ಚಾಗಿ ಬಳಸುವುದರ ಮೂಲಕ ಪ್ಲಾಸ್ಟಿಕಮಯ ಜೀವನವಾಗಿಸಿಕೊಂಡಿದ್ದಾರೆ. ಪ್ಲಾಸ್ಟಿಕ್ ಬಳಕೆಗೆ ನಿರ್ಬಂಧವಿದ್ದರು ಕೂಡಾ ಕದ್ದು ಮುಚ್ಚಿ ಮಾರಾಟ ಮಾಡುತ್ತಿದ್ದಾರೆ. ಪ್ಲಾಸ್ಟಿಕ್ ಮನುಷ್ಯನ ಬದಕನ್ನೇ ಆವರಿಸಿಕೊಂಡಿದೆ. ಪ್ಲಾಸ್ಟಿಕ್ ಕರಗಲಾರದ ವಸ್ತು ಆಗಿದೆ. ಇದು ಮನುಷ್ಯನಿಗಿಂತ ಹೆಚ್ಚಾಗಿ ಪಶುಗಳಿಗೆ ಹೆಚ್ಚು ಹಾನಿಕಾರಕವಾಗಿದೆ. ಆದ್ದರಿಂದ ಪ್ರತಿಯೊಬ್ಬರು ಕೂಡಾ ಪ್ಲಾಸ್ಟಿಕನ್ನು ಮಣ್ಣಿನೊಳಗೆ ಹೋಗದಂತೆ ನೋಡಿಕೊಳ್ಳಬೇಕು ಎಂದರು. ಉಪನ್ಯಾಸಕ ಡಿ.ಆರ್. ಕುಬಸದ ಅಧ್ಯಕ್ಷತೆ ವಹಿಸಿದ್ದರು. ಬಿವಿವಿ ಸಂಘದ ಜನಶಿಕ್ಷಣ ಸಂಸ್ಥೆಯ ನಿರ್ದೇಶಕಿ ನಾಗರತ್ನಾ.ಟಿ.ಎಂ, ಕಾರ್ಯಕ್ರಮ ಅಧಿಕಾರಿ ರವಿ ಮೆಳ್ಳಿ, ಉಪನ್ಯಾಸಕಿ ಕೆ.ಜಿ. ಅಂಗಡಿ ಹಾಗೂ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಮತಗಿ: ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿದ ಬಿವಿವಿ ಸಂಘದ ಜನಶಿಕ್ಷಣ ಸಂಸ್ಥೆಯ ನಿರ್ದೇಶಕ ವೀರಣ್ಣ ಕಿರಗಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Dharwad: ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.