ಗಂಗೊಳ್ಳಿ: ಕಡೆಗೂ ಕಡಲಿಗಿಳಿದವು ನಾಡದೋಣಿಗಳು


Team Udayavani, Jul 27, 2018, 6:00 AM IST

2607kdpp7.jpg

ಗಂಗೊಳ್ಳಿ: ಸಾಂಪ್ರದಾಯಿಕ ನಾಡದೋಣಿಗಳು ಕಡೆಗೂ ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕಡಲಿ ಗಿಳಿದಿದ್ದು, ಆ ಮೂಲಕ ಈವರೆಗೆ ಕಳೆಗುಂದಿದ್ದ ಗಂಗೊಳ್ಳಿ ಬಂದರಿಗೆ ಮತ್ತೆ ಜೀವ ಕಳೆ ಬಂದಿದೆ. 

ಸಮುದ್ರದಲ್ಲಿ ಪ್ರತಿಕೂಲ ಹವಾಮಾನ ದಿಂದ ಒಂದು ತಿಂಗಳ ಮೊದಲು ಆರಂಭ ವಾಗಬೇಕಿದ್ದ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆ ಈಗ ತಾನೇ ಶುರುವಾಗಿದೆ. ಸಮುದ್ರದಲ್ಲಿ ತೂಫಾನ್‌ ಎದ್ದಿದ್ದರಿಂದ ಈವರೆಗೆ ಸಮುದ್ರ ಬಿರುಸಾಗಿದ್ದು, ಗಾಳಿಯ ಒತ್ತಡವೂ ಹೆಚ್ಚಾಗಿತ್ತು. ಈ ಸಮಯದಲ್ಲಿ ಕಡಲಿಗಿಳಿ ಯುವುದು ಅಪಾಯಕಾರಿ ಎನ್ನುವ ಕಾರಣಕ್ಕೆ ದೋಣಿಗಳು ಮೀನುಗಾರಿಕೆಗೆ ತೆರಳಿರಲಿಲ್ಲ. 

ಇನ್ನಿರುವುದು ಐದೇ ದಿನ
ನಾಡದೋಣಿ ಮೀನುಗಾರಿಕೆಯೇನೋ ಆರಂಭವಾಗಿದೆ. ಆದರೆ ಮಳೆಗಾಲದ ಮೀನುಗಾರಿಕಾ ಋತು ಮುಗಿಯಲು ಬಾಕಿ ಇರುವುದು ಬರೀ 5 ದಿನ ಮಾತ್ರ. ಅನಂತರ ಯಾಂತ್ರೀಕೃತ ಬೋಟುಗಳು ಕಡಲಿಗಿಳಿದರೆ ನಾಡದೋಣಿಗಳಿಗೆ ಮೀನುಗಾರಿಕೆ ನಡೆಸಲು ಸಾಧ್ಯವಾಗುವುದಿಲ್ಲ. 

ಗ್ರಹಣ ಭೀತಿ
ಜು. 27ರಂದು ಗ್ರಹಣ ಕೂಡ ಇರುವು ದರಿಂದ ಗ್ರಹಣದ ಸಮಯದಲ್ಲಿಯೇ ಸಾಮಾನ್ಯವಾಗಿ ಕಡಲು ಮತ್ತಷ್ಟು ಪ್ರಕ್ಷುಬ್ಧ ಗೊಂಡರೆ ಮತ್ತೆ ನಾಡದೋಣಿಗಳಿಗೆ ಮೀನುಗಾರಿಕೆ ನಡೆಸಲು ಕಷ್ಟವಾಗಲಿದೆ. ಅದೇ ಭೀತಿಯಲ್ಲಿ ಗುರುವಾರ ಗಂಗೊಳ್ಳಿ ಯಲ್ಲಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದಾರೆ.
 
ಸರಿ ಸುಮಾರು 60 ದಿನಗಳಿಂದ ಮೀನು ಗಾರಿಕೆ ಸ್ಥಗಿತಗೊಂಡಿದ್ದರಿಂದ ಮಾರುಕಟ್ಟೆ ಯಲ್ಲಿ ತಾಜಾ ಮೀನುಗಳು ಸಿಗುತ್ತಿರಲಿಲ್ಲ. ಅದಲ್ಲದೆ ಹೊರಗಡೆಯಿಂದ ತರಿಸುವ ಮೀನುಗಳ ಬೆಲೆಯೂ ಗಗನಕ್ಕೇರಿತ್ತು. ಆದರೆ ಈಗ ನಾಡದೋಣಿಗಳು ಕಡಲಿಗಿಳಿ ದಿದ್ದರಿಂದ ತಾಜಾ ಮೀನುಗಳ ಕೊರತೆ ನೀಗಲಿದೆ.

ಉತ್ತಮ ಇಳುವರಿ
ಗಂಗೊಳ್ಳಿ, ಕೋಡಿ, ಉಪ್ಪುಂದ ಭಾಗದ ಎಲ್ಲ 600 ದೋಣಿಗಳು ಸಹ ಗುರುವಾರ ಕಡಲಿಗಿಳಿದಿವೆ. ಎಲ್ಲ ದೋಣಿಗಳಿಗೂ ಮೊದಲ ದಿನ ಒಳ್ಳೆಯ ಪ್ರಮಾಣದಲ್ಲಿ ಚಟಿ ಹಾಗೂ ಮೀನುಗಳು ಸಿಕ್ಕಿರುವುದು ಮೀನುಗಾರರಿಗೆ ಖುಷಿ ತಂದಿದೆ ಎಂದು ಗಂಗೊಳ್ಳಿ ನಾಡದೋಣಿ ಸಂಘದ ಅಧ್ಯಕ್ಷ ಮಂಜು ಬಿಲ್ಲವ ತಿಳಿಸಿದ್ದಾರೆ. 

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.