ಮರ್ದಾಳ: ಸಾರ್ವಜನಿಕ ಶೌಚಾಲಯದ ದುರವಸ್ಥೆ


Team Udayavani, Jul 27, 2018, 12:05 PM IST

Disable-1.jpg

ಕಡಬ : ಮರ್ದಾಳ ಪೇಟೆಯಲ್ಲಿ ಗ್ರಾಮ ಪಂಚಾಯತ್‌ ವತಿಯಿಂದ ಕೇವಲ ಎರಡು ವರ್ಷಗಳ ಹಿಂದೆ ನಿರ್ಮಿಸಲಾಗಿರುವ ಸಾರ್ವಜನಿಕ ಶೌಚಾಲಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೇ ಇರುವುದರಿಂದ ಸಾರ್ವಜನಿಕರು ಉಪಯೋಗಿಸಲು ಅಸಾಧ್ಯವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಬರುವ ಮರ್ದಾಳ ಪೇಟೆ ಅಭಿವೃದ್ಧಿಹೊಂದುತ್ತಿರುವ ಪ್ರದೇಶವಾಗಿದ್ದು, ಪೇಟೆಯೂ ಬೆಳೆಯುತ್ತಿದೆ. ದಿನಂಪ್ರತಿ ಯಾತ್ರಾರ್ಥಿಗಳು ಸೇರಿದಂತೆ ಸಾವಿರಾರು ಜನರ ಮರ್ದಾಳದ ಮೂಲಕ ಈ ರಸ್ತೆಯಲ್ಲಿ ಪ್ರಯಾಣಿಸುತ್ತಾರೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಉಪಯೋಗಕ್ಕೆಂದು ಮರ್ದಾಳ ಪೇಟೆಯಲ್ಲಿ ಪಂಚಾಯತ್‌ ಕಚೇರಿಯ ಕೂಗಳತೆಯ ದೂರದಲ್ಲಿ ಸಾರ್ವಜನಿಕ ಶೌಚಾಲಯವನ್ನು ನಿರ್ಮಿಸಲಾಗಿದೆ. ಆದರೆ ಆ ಶೌಚಾಲಯವನ್ನು ಸಮರ್ಪಕವಾಗಿ ಶುಚಿಗೊಳಿಸದೇ ಇರುವುದ ರಿಂದ ಶೌಚಾಲಯವನ್ನು ಉಪ ಯೋಗಿಸುವುದು ಬಿಡಿ, ಆ ಪ್ರದೇಶದಲ್ಲಿ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಹೋಗುವಂತಾಗಿದೆ ಎನ್ನುತ್ತಾರೆ ಸ್ಥಳೀಯ ಮುಂದಾಳು ಭವಾನಿಶಂಕರ ಅವರು. 

ಗ್ರಾಮ ಸಭೆಯಲ್ಲಿ ನಾನು ಈ ಬಗ್ಗೆ ಮಾತನಾಡಿ ಶೌಚಾಲಯವನ್ನು ಸ್ವಚ್ಛಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಯೋಗ್ಯವಾಗುವಂತೆ ಮಾಡಬೇಕೆಂದು ಆಗ್ರಹಿಸಿದ್ದೆ. ಆದರೆ ಗ್ರಾಮಸಭೆ ಕಳೆದು ಹಲವು ದಿನಗಳು ಕಳೆದರೂ ಪಂಚಾಯತ್‌ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒರತೆಯ ಸಮಸ್ಯೆ
ನೀರಿನ ಒರತೆಯಿಂದಾಗಿ ಶೌಚಾಲಯದ ಗುಂಡಿಯಲ್ಲಿ ನೀರು ತುಂಬಿಕೊಂಡು ಗಲೀಜು ನೀರು ಶೌಚಾಲಯದೊಳಗೆ ಉಕ್ಕುತ್ತಿರುವುದರಿಂದಾಗಿ ಸಮಸ್ಯೆ ಎದುರಾಗಿದೆ. ಸ್ವಚ್ಛತಾ ಕಾರ್ಮಿಕರು ಕೂಡ ಮಳೆ ಕಡಿಮೆಯಾಗಿ ನೀರಿನ ಒರತೆ ಕಡಿಮೆಯಾಗುವ ತನಕ ಏನೂ ಮಾಡಲು ಸಾಧ್ಯವಿಲ್ಲವೆಂದು ಕೈಚೆಲ್ಲಿದ್ದಾರೆ. ಆದುದರಿಂದ ಮಳೆ ಕಡಿಮೆಯಾದ ಕೂಡಲೇ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು.
– ಲಲಿತಾ ಎಂ. ರೈ, ಅಧ್ಯಕ್ಷರು, ಮರ್ದಾಳ ಗ್ರಾ.ಪಂ.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.