ವಸತಿ ರಹಿತರ ಆನ್‌ಲೈನ್ ಸಮೀಕ್ಷೆ
Team Udayavani, Jul 27, 2018, 12:16 PM IST
ಬೆಂಗಳೂರು: ಆನ್‌ಲೈನ್ ಸಮೀಕ್ಷೆ ಮೂಲಕ ನಿವೇಶನ ರಹಿತರನ್ನು ಗುರುತಿಸುವ ಕಾರ್ಯಕ್ಕೆ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಂದಾಗಿದೆ.
ಇದೇ ಮೊದಲ ಬಾರಿ ಇಂಥದೊಂದು ಪ್ರಯತ್ನ ನಡೆಯುತ್ತಿದ್ದು, ಈಗಾಗಲೇ 40 ಸಾವಿರಕ್ಕೂ ಅಧಿಕ ವಸತಿ ಹಾಗೂ ನಿವೇಶನ ರಹಿತರು ಅರ್ಜಿ ಸಲ್ಲಿಸಿದ್ದಾರೆ. ಈ ತಿಂಗಳ ಅಂತ್ಯದವರೆಗೂ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ಕಾಲವಕಾಶವಿದೆ. ಹೀಗಾಗಿ ಈ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹೊಂದಿಕೊಂಡಿರುವ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ಮತ್ತು ಮನೆ ಇಲ್ಲದರು ಹೆಚ್ಚಿನ ಸಂಖ್ಯೆಯಲ್ಲಿದ್ದು ಇಂತಹ ಕುಟುಂಬಗಳನ್ನು ಗುರುತಿಸಿ ಅಂತವರಿಗೆ ಮನೆಗಳನ್ನು ಕಲ್ಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಅನುದಾನ ಎಷ್ಟು?: ನಿವಾಸ ಹೊಂದಿರದವರಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ರಾಜ್ಯ ಸರ್ಕಾರದ ಬಸವ ವಸತಿ ಮತ್ತು ಅಂಬೇಡ್ಕರ್ ಯೋಜನೆಯಡಿ ವಸತಿ ಕಲ್ಪಿಸಲಾಗುತ್ತದೆ. ಆನ್‌ಲೈನ್ ಅರ್ಜಿಗಳನ್ನು ಪರಿಶೀಲಿಸಲಿರುವ ಗ್ರಾಮ ಸಭೆಗಳು ಫಲಾನುಭವಿಗಳ ಆಯ್ಕೆಯಲ್ಲಿ ಪ್ರಮುಖ ಪಾತ್ರವಹಿಸಲಿವೆ.
ಈ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆ ನಿರ್ಮಾಣ ಮಾಡಲು ಬಸವ ವಸತಿ ಯೋಜನೆಯಡಿ 1.20 ಲಕ್ಷ ಮತ್ತು ಉದ್ಯೋಗ ಖಾತರಿ ಯೋಜನೆಯಡಿ 20 ಸಾವಿರ ರೂ ಅನುದಾನ ನೀಡಲಾಗುತ್ತದೆ. ಮನೆ ನಿರ್ಮಾಣ ಕಾರ್ಯ ಆರಂಭವಾಗುತ್ತಿದ್ದಂತೆ ಹಂತ -ಹಂತವಾಗಿ ಅನುದಾನ ಒದಗಿಸಲಾಗುತ್ತದೆ.
ಜನತೆಗೆ ತಿಳಿವಳಿಕೆ: ಬೆಂಗಳೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಬರುವ ಆನೇಕಲ್, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಪೂರ್ವ ತಾಲೂಕು ವ್ಯಾಪ್ತಿಯಲ್ಲಿ ಕಳೆದ ತಿಂಗಳೇ ಆನ್‌ಲೈನ್ ಸಮೀಕ್ಷೆ ಆರಂಭವಾಗಿದೆ. ಇದಕ್ಕೆ ಜನರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲದೆ ನೋಡಲ್ ಅಧಿಕಾರಿಗಳು ಕೂಡ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಬಗ್ಗೆ ಸಾರ್ವಜನಿಕರಿಗೆ ತಿಳಿವಳಿಕೆ ನೀಡುತ್ತಿದ್ದಾರೆ.
ಹಿರಿಯ ಯೋಜನಾ ಅಧಿಕಾರಿಯೊಬ್ಬರು ನೀಡಿದ ಮಾಹಿತಿ ಪ್ರಕಾರ 11,036 ವಸತಿ ರಹಿತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ ಆನೇಕಲ್ ತಾಲೂಕಿನಲ್ಲಿ 3119, ಬೆಂಗಳೂರು ಪೂರ್ವ ತಾಲೂಕಿನಲ್ಲಿ 545, ಬೆಂಗಳೂರು ಉತ್ತರ ತಾಲೂಕಿನಲ್ಲಿ 6650 ಮತ್ತು ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ 722 ಅರ್ಜಿಗಳು ಸಲ್ಲಿಕೆಯಾಗಿವೆ.
ಗುರಿ ಎಷ್ಟು?: 2018-19ನೇ ಸಾಲಿನಲ್ಲಿ ಬಸವ ವಸತಿ ಮತ್ತು ಅಂಬೇಡ್ಕರ್ ಯೋಜನೆಯಡಿ 4,196 ಮನೆಗಳ ನಿರ್ಮಾಣದ ಗುರಿಯನ್ನು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಹೊಂದಿದೆ. ಕಳೆದ ವರ್ಷ 6,100 ಮನೆಗಳ ನಿರ್ಮಾಣ ಗುರಿಯಲ್ಲಿ, 4,463 ಮನೆಗಳನ್ನು ನಿರ್ಮಿಸಲಾಗಿದೆ. 1,637 ಮನೆಗಳ ನಿರ್ಮಾಣ ವಿವಿಧ ಹಂತಗಳಲ್ಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಸತಿ ಮತ್ತು ನಿವೇಶನ ರಹಿತರನ್ನು ಆನ್‌ಲೈನ್ ಮೂಲಕ ಸಮೀಕ್ಷೆ ನಡೆಸಲಾಗುತ್ತಿದೆ. ಸಮೀಕ್ಷೆಗೆ ಸಾರ್ವಜನಿಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
-ಎಂ.ಎಸ್.ಅರ್ಚನಾ, ಬೆಂಗಳೂರು ನಗರ ಜಿ.ಪಂ ಸಿಇಒ
* ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.