ಯೋಧರ ವೀರಗಲ್ಲು ಸ್ಥಳಾಂತರ ಶೀಘ್ರ
Team Udayavani, Jul 27, 2018, 12:16 PM IST
ಬೆಂಗಳೂರು: ದೇವನಹಳ್ಳಿ ಬಳಿ ಸಿದ್ಧವಾಗುತ್ತಿರುವ ಯೋಧರ ವೀರಗಲ್ಲನ್ನು ಸೈನಿಕ ಸ್ಮಾರಕಕ್ಕೆ ಸ್ಥಳಾಂತರಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ನಗರದ ರಾಜಭವನ ಬಳಿಯ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಗುರುವಾರ ಆಯೋಜಿಸಿದ್ದ “ಕಾರ್ಗಿಲ್ ವಿಜಯೋತ್ಸವ’ ಹಾಗೂ “ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ’ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸೈನಿಕ ಸ್ಮಾರಕದಲ್ಲಿ ಪ್ರತಿಷ್ಠಾಪನೆ ಮಾಡಲು ಎಂಟು ವರ್ಷಗಳಿಂದ ದೇವನಹಳ್ಳಿಯಲ್ಲಿ ಯೋಧರ ವೀರಗಲ್ಲು ಸಿದ್ಧಪಡಿಸಲಾಗುತ್ತಿದೆ. ಆದರೆ, ತಾಂತ್ರಿಕ ಕಾರಣಗಳಿಂದ ಅದನ್ನು ಸ್ಥಳಾಂತರ ಮಾಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮಕೈಗೊಳ್ಳುತ್ತೇನೆ ಎಂದು ತಿಳಿಸಿದರು.
ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾತನಾಡಿ, ವೀರಗಲ್ಲು ತರುವ ಕುರಿತು ಈಗಾಗಲೇ ಎರಡು ಸಭೆ ನಡೆಸಲಾಗಿದೆ. ಅಧಿಕಾರಿಗಳ ಜತೆಯೂ ಚರ್ಚಿಸಲಾಗಿದೆ ಎಂದು ಹೇಳಿದರು.
ಕಾಲಮಿತಿಯಲ್ಲಿ ಪರಿಹಾರ, ಸೌಲಭ್ಯ: ನಿವೃತ್ತಿ ಹೊಂದುವ ಅಥವಾ ಯುದ್ಧದಲ್ಲಿ ಹುತಾತ್ಮರಾಗುವ ಯೋಧರ ಕುಟುಂಬಗಳಿಗೆ ಮೂರು ತಿಂಗಳ ಕಾಲಮಿತಿಯಲ್ಲಿ ಪರಿಹಾರ ಹಾಗೂ ಇತರೆ ಸೌಲಭ್ಯ ಒದಗಿಸಲು ಹೊಸ ಕಾನೂನು ತರಲು ರಾಜ್ಯ ಸರ್ಕಾರ ಪ್ರಯತ್ನಿಸಿದೆ. ಯಾವುದೇ ಕಾರಣಕ್ಕೂ ದೇಶ ಕಾಯುವ ಯೋಧರ ಕುಟುಂಬಗಳಿಗೆ ನೀಡುವ ಸೌಲಭ್ಯಗಳಲ್ಲಿ ವಿಳಂಬ ಆಗಬಾರದು ಎಂದರು.
ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು, ನಿವೃತ್ತ ಏರ್ ಕಮಾಂಡರ್ ಎಂ.ಕೆ.ಚಂದ್ರಶೇಖರ್, ಕರ್ನಾಟಕ ಮತ್ತು ಕೇರಳ ಉಪ ವಿಭಾಗದ, ಜನರಲ್ ಆಫೀಸರ್ ಕಮಾಂಡಿಂಗ್ ಮೇಜರ್ ಜನರಲ್ ಸಂಜೀವ್ ನರೈನ್, ಪ್ಯಾರಾ ರೆಜಿಮೆಂಟ್, ಸೆಂಟ್ರಲ್ ಕಮಾಂಡೆಂಟ್, ಎನ್‌ಸಿಸಿ ಸೇರಿ ವಿವಿಧ ರಕ್ಷಣಾ ಪಡೆಗಳ ಯೋಧರು, ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದರು.
ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿ: ನಿವೃತ್ತ ಸೈನಿಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಜಾತಿ ಆಧಾರಿತ ಮೀಸಲಾತಿ ಕೈಬಿಟ್ಟು ಮೀಸಲಾತಿ ಪ್ರಮಾಣವನ್ನು ಶೇ.20ಕ್ಕೆ ಏರಿಕೆ ಮಾಡಬೇಕು ಎಂದು ಮಾಜಿ ಸೈನಿಕರು ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರಿಗೆ ಮನವಿ ಮಾಡಿದರು.
ಈ ವೇಳೆ ಮಾತನಾಡಿದ ನಿವೃತ್ತ ಸೈನಿಕ ಬಸಪ್ಪ, ಐದಾರು ದಶಕಗಳ ಹಿಂದೆ ನಿವೃತ್ತ ಸೈನಿಕರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ಕಲ್ಪಿಸಲಾಗಿತ್ತು. ಆದರೆ, ಇತ್ತೀಚೆಗೆ ನಿವೃತ್ತಿಯಾಗುವ ಸೈನಿಕರ ಸಂಖ್ಯೆ ಹೆಚ್ಚುತ್ತಿದೆ.
ಇದನ್ನು ಪರಿಗಣಿಸಿ ಸರ್ಕಾರಿ ಉದ್ಯೋಗಕ್ಕೆ ಇರುವ ಮೀಸಲಾತಿಯನ್ನು ಶೇ.20ಕ್ಕೆ ಹೆಚ್ಚಿಸಬೇಕು. 15 ವರ್ಷಗಳ ಹಿಂದೆ ಆಶ್ರಯ ಯೋಜನೆ ಅಡಿಯಲ್ಲಿ ನಿವೇಶನ ನೀಡುವುದಾಗಿ ಹೇಳಿ, 257 ಮಾಜಿ ಸೈನಿಕರಿಂದ ತಲಾ 8 ಸಾವಿರ ರೂ. ಪಡೆದುಕೊಂಡಿದ್ದು, ಇದುವರೆಗೂ ನಿವೇಶನ ನೀಡಿಲ್ಲ. ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್
Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.