ಮೈತ್ರಿಗೆ ಜೆಡಿಎಸ್ ನಡವಳಿಕೆಯೂ ಮುಖ್ಯ
Team Udayavani, Jul 27, 2018, 12:16 PM IST
ಬೆಂಗಳೂರು: ಮೈತ್ರಿ ಸರ್ಕಾರ ಮುಂದುವರಿಯಲು ಎರಡೂ ಪಕ್ಷಗಳ ನಡವಳಿಕೆ ಮುಖ್ಯವಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಮೈತ್ರಿಗೆ ಕಾಂಗ್ರೆಸ್ ನಡವಳಿಕೆ ಮೇಲೆ ನಿಂತಿದೆ ಎಂದಿರುವ ಮುಖ್ಯಮಂತ್ರಿ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಕೇವಲ ಕಾಂಗ್ರೆಸ್ ನಡವಳಿಕೆಯಿಂದ ಮೈತ್ರಿ ಮುಂದುವರಿಯುವುದಿಲ್ಲ. ಜೆಡಿಎಸ್ ನಡವಳಿಕೆಯೂ ಮುಖ್ಯ ಎಂದಿದ್ದಾರೆ.
ಭಿನ್ನಾಭಿಪ್ರಾಯವಿಲ್ಲ: ಉಪ ಮುಖ್ಯಮಂತ್ರಿ ಪರಮೇಶ್ವರ್ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಜತೆ ಯಾವುದೇ ಮುನಿಸಿಲ್ಲ. ನಾವೆಲ್ಲರೂ ಒಟ್ಟಾಗಿದ್ದೇವೆ ಎಂದು ಇದೇ ವೇಳೆ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಮೋದಿ ಅತ್ಯಂತ ಭ್ರಷ್ಟ ಪ್ರಧಾನಿ: “ದೇಶಕಂಡ ಅತ್ಯಂತ ಭ್ರಷ್ಟ ಪ್ರಧಾನಮಂತ್ರಿ ನರೇಂದ್ರ ಮೋದಿ’ ಎಂದು ಆರೋಪಿಸಿರುವ ಕೆಪಿಸಿಸಿ ಅಧ್ಯಕ್ಷ, ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅಕ್ರಮವಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆದರೆ, ಈ ಬಗ್ಗೆ ಪ್ರಧಾನಿ ಸ್ಪಷ್ಟ ಉತ್ತರ ನೀಡದೇ ಜಾರಿಕೊಳ್ಳುತ್ತಿದ್ದಾರೆ.
ಯುದ್ಧ ವಿಮಾನ ಖರೀದಿಯಲ್ಲಿ ಯುಪಿಎ ಅವಧಿಯಲ್ಲಿನ ಒಪ್ಪಂದಕ್ಕೂ ಎನ್‌ಡಿಎ ಅವಧಿಯಲ್ಲಿನ ಒಪ್ಪಂದಕ್ಕೂ ಸಾಕಷ್ಟು ವ್ಯತ್ಯಾಸವಾಗಿದೆ ಎಂದು ದೂರಿದರು. ಯುಪಿಎ ಅವಧಿಯಲ್ಲಿ ಮಾಡಿಕೊಂಡ ಒಪ್ಪಂದದಿಂದ ತಂತ್ರಜ್ಞಾನ ವರ್ಗಾವಣೆ ಮೂಲಕ 108 ವಿಮಾನಗಳನ್ನು ಬೆಂಗಳೂರಿನ ಎಚ್‌ಎಎಲ್‌ನಲ್ಲಿ ಉತ್ಪಾದಿಸುವ ಯೋಜನೆ ಇತ್ತು.
ಆದರೆ, ಪ್ರಧಾನಿ ಮೋದಿ ತಮ್ಮ ಸ್ನೇಹಿತ ಅನಿಲ್ ಅಂಬಾನಿಗೆ ಅನುಕೂಲ ಮಾಡಿಕೊಡಲು ಯುದ್ಧ ವಿಮಾನ ತಯಾರಿಕೆಯಲ್ಲಿ ಯಾವುದೇ ಅನುಭವ ಇಲ್ಲದ ರಿಲಾಯನ್ಸ್ ಸಂಸ್ಥೆಗೆ ವಹಿಸಿಕೊಡಲು ಮುಂದಾಗಿದ್ದಾರೆ ಎಂದು ಆಪಾದಿಸಿದರು.
ಯುಪಿಎ ಅವಧಿಯಲ್ಲಿ ಪ್ರತಿ ವಿಮಾನಕ್ಕೆ 526 ಕೋಟಿ ರೂ. ನಿಗದಿಪಡಿಸಲಾಗಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಮಾಡಿಕೊಂಡ ಒಪ್ಪಂದದಂತೆ ಪ್ರತಿ ವಿಮಾನಕ್ಕೆ 1670 ಕೋಟಿ ರೂ. ನಿಗದಿ ಮಾಡಲಾಗಿದೆ. ಆರು ವರ್ಷದಲ್ಲಿ ವಿಮಾನದ ದರದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಹೆಚ್ಚಳವಾಗಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಹೇಳಿದರು.
ದೇಶದ ಭದ್ರತೆ ವಿಷಯದಲ್ಲಿ ರಾಷ್ಟ್ರ ಪ್ರೇಮದ ಮಾತುಗಳನ್ನಾಡುವ ಪ್ರಧಾನಿ ವಿಮಾನ ಖರೀದಿ ವಿಚಾರದಲ್ಲಿ ದೇಶದ ಹಿತಾಸಕ್ತಿ ಬಲಿ ಕೊಟ್ಟಿದ್ದು, ಎಚ್‌ಎಎಲ್‌ಗೆ ಸಿಗುವ ಅವಕಾಶವನ್ನು ತಪ್ಪಿಸಿದ್ದಾರೆ. ಅಲ್ಲದೇ ಸುಮಾರು 60 ಸಾವಿರ ಕೋಟಿ ರೂ. ದೇಶದ ಸಾರ್ವಜನಿಕರ ಹಣ ಲೂಟಿ ಮಾಡಿರುವ ನೀರವ್ ಮೋದಿ, ಚೌಕ್ಸಿ, ಅನಿಲ್ ಅಂಬಾನಿ ಜತೆ ಪ್ರಧಾನಿ ಮೋದಿ ಭಾಗಿಯಾಗಿ ಬೂಟಾಟಿಕೆ ಸರ್ಕಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.